ಕನ್ನಡಪ್ರಭ ವಾರ್ತೆ ಬೆಳಗಾವಿ
ನವದೆಹಲಿಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ ಅವರನ್ನು ಸೋಮವಾರ ಭೇಟಿ ಮಾಡಿ ಇಲಾಖೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳನ್ನು ಸಲ್ಲಿಸಿದ ಅವರು, ಕೇಂದ್ರ ಸಹಭಾಗಿತ್ವದ ವಿವಿಧ ಯೋಜನೆಗಳ ಜಾರಿಗೆ ರಾಜ್ಯಕ್ಕೆ ಬಿಡುಗಡೆ ಆಗಬೇಕಿರುವ ಅನುದಾನವನ್ನು ತುರ್ತಾಗಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.ಅಂಗನವಾಡಿ ಕೇಂದ್ರಗಳಿಗೆ ಅಗತ್ಯವಿರುವ ಅಕ್ಕಿ, ಗೋಧಿಯನ್ನು ಕೂಡಲೇ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯ, ಕುಡಿಯುವ ನೀರು, ವಿದ್ಯುತ್ ಸೌಕರ್ಯ ಸೇರಿದಂತೆ ಮೂಲಸೌಕರ್ಯಗಳ ಅಭಿವೃದ್ಧಿಗೆ ಕೇಂದ್ರದಿಂದ ಅನುದಾನದ ನೆರವು ಅಗತ್ಯವಿದೆ. ಹಾಗಾಗಿ, ಅಗತ್ಯವಾಗಿ ಅನುದಾನ ಬಿಡುಗಡೆ ಮಾಡಬೇಕು. ಪ್ರಮುಖವಾಗಿ ರಾಜ್ಯದಲ್ಲಿ ಹೊಸದಾಗಿ ಸೃಜನೆಗೊಂಡ ತಾಲೂಕುಗಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಮತ್ತು ವಿವಿಧ ಸೌಲಭ್ಯಗಳನ್ನು ಕೂಡಲೇ ಮಂಜೂರು ಮಾಡುವಂತೆ ಕೇಂದ್ರ ಸಚಿವರಲ್ಲಿ ಕೋರಿದರು.ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್ ಸೇರಿದಂತೆ ಕೇಂದ್ರ ಸಚಿವಾಲಯದ ಹಿರಿಯ ಅಧಿಕಾರಿಗಳು ಹಾಜರಿದ್ದರು.ಹಲವು ಬೇಡಿಕೆಗಳ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದೆ. ಎಲ್ಲ ಮಾಹಿತಿಗಳನ್ನು ಅತ್ಯಂತ ತಾಳ್ಮೆಯಿಂದ ಪಡೆದುಕೊಂಡಿರುವ ಕೇಂದ್ರ ಸಚಿವರಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ.
-ಲಕ್ಷ್ಮೀ ಹೆಬ್ಬಾಳಕರ್, ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ.