ಹುಬ್ಬಳ್ಳಿ:
ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ವಿರುದ್ಧ ರೈತ ಪ್ರತಿಭಟನೆಯಲ್ಲಿ ಬಳಸಿದ ಮಾತುಗಳಿಗೆ ಬೇಸರ ವ್ಯಕ್ತಪಡಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ವಿರೋಧಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ, ಟೀಕಿಸುವಾಗ ಭಾಷೆಯ ಮಿತಿ ಹಾಗೂ ಗೌರವ ಕಾಪಾಡಬೇಕು. ಇಲ್ಲದಿದ್ದರೆ ಅದು ರೈತ ಹೋರಾಟದ ಪಾವಿತ್ರ್ಯತೆಗೆ ಕಪ್ಪುಚುಕ್ಕೆ ಆಗುತ್ತದೆ ಎಂದಿದ್ದಾರೆ.
ರೈತರ ಹೋರಾಟಕ್ಕೆ ಪ್ರಹ್ಲಾದ ಜೋಶಿ ಅವರು ಸ್ಪಂದಿಸಿದ್ದು, ಶಾಸಕರಾದ ಮಹೇಶ ಟೆಂಗಿನಕಾಯಿ ಹಾಗೂ ಎಂ.ಆರ್. ಪಾಟೀಲ ಮೂಲಕ ರೈತ ಸಂಘಟನೆಗಳೊಂದಿಗೆ ಚರ್ಚೆಗೆ ದಿನಾಂಕ ನಿಗದಿಪಡಿಸಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದ್ದಾರೆ. ಕಬ್ಬಿನ ಜತೆಗೆ ತೊಗರಿ, ಹತ್ತಿ, ಜೋಳ ಹಾಗೂ ದವಸ ಧಾನ್ಯಗಳಿಗೂ ಬೆಂಬಲ ಬೆಲೆ ಮತ್ತು ಸೂಕ್ತ ದರದ ಬಗ್ಗೆ ರೈತ ಸಂಘಟನೆಗಳು ಗಮನಹರಿಸಬೇಕು. ಬೆಳೆಗಳ ವಿಚಾರದಲ್ಲಿ ತಾರತಮ್ಯ ಸಲ್ಲದು ಎಂದರು.ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದರೂ ಪರಿಹಾರ ನೀಡುವಲ್ಲಿ ಹಾಗೂ ಬರಪೀಡಿತ ತಾಲೂಕುಗಳ ಆಯ್ಕೆಯಲ್ಲಿ ರಾಜ್ಯ ಸರ್ಕಾರದ ಕ್ರಮಗಳ ಬಗ್ಗೆ ರೈತ ಸಂಘಟನೆಗಳು ಮೌನ ವಹಿಸಿರುವುದು ಏಕೆ ಎಂಬ ಪ್ರಶ್ನೆ ಮೂಡುತ್ತಿದೆ. ಹೋರಾಟದ ಹಿಂದೆ ರಾಜಕೀಯ ಉದ್ದೇಶವಿದೆಯೇ ಎಂಬ ಅನುಮಾನ ಮೂಡುತ್ತಿದೆ ಎಂದಿದ್ದಾರೆ.