ಗುಣಮಟ್ಟದ ಶಿಕ್ಷಣ ಇದ್ದರೂ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕ್ಷೀಣ

KannadaprabhaNewsNetwork |  
Published : Jul 28, 2025, 12:30 AM IST
64 | Kannada Prabha

ಸಾರಾಂಶ

ಸರ್ಕಾರ ಬಡವರ ಮಕ್ಕಳಿಗೂ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಿವ ನಿಟ್ಟಿನಲ್ಲಿ ಸ್ಮಾರ್ಟ್ ತರಗತಿಗಳು, ಡಿಜಿಟಲ್ ಲೈಬ್ರರಿ, ಯೋಗ, ಕರಾಟೆ ತರಬೇತಿ, ಮಧ್ಯಾಹ್ನದ ಬಿಸಿಯೂಟ ಸೇರಿದಂತೆ ಇನ್ನೂ ಹತ್ತು ಹಲವು ಯೋಜನೆ

ಕನ್ನಡಪ್ರಭ ವಾರ್ತೆ ಪಿರಿಯಾಪಟ್ಟಣಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಸೌಲಭ್ಯಗಳು, ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರೂ ಇಂಗ್ಲಿಷ್ ಭಾಷೆಯ ವ್ಯಾಮೋಹ ಹಾಗೂ ಖಾಸಗಿ ಶಾಲೆಗಳ ಹೊಡೆತದಿಂದ ಸರ್ಕಾರಿ ಶಾಲೆಗಳ ಮಕ್ಕಳ ದಾಖಲಾತಿ ಕ್ಷೀಣಿಸುತ್ತಿದೆ ಎಂದು ಪಶುಪಾಲನಾ ಮತ್ತು ರೇಷ್ಮೆ ಖಾತೆ ಸಚಿವ ಕೆ. ವೆಂಕಟೇಶ್ ವಿಷಾದಿಸಿದರು.ಪಟ್ಟಣದ ಉಪ್ಪಾರಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೆಚ್ಚುವರಿ ಕೊಠಡಿ ಉದ್ಘಾಟಿಸಿ ಅವರು ಮಾತನಾಡಿದರು.ಸರ್ಕಾರ ಬಡವರ ಮಕ್ಕಳಿಗೂ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಿವ ನಿಟ್ಟಿನಲ್ಲಿ ಸ್ಮಾರ್ಟ್ ತರಗತಿಗಳು, ಡಿಜಿಟಲ್ ಲೈಬ್ರರಿ, ಯೋಗ, ಕರಾಟೆ ತರಬೇತಿ, ಮಧ್ಯಾಹ್ನದ ಬಿಸಿಯೂಟ ಸೇರಿದಂತೆ ಇನ್ನೂ ಹತ್ತು ಹಲವು ಯೋಜನೆಗಳನ್ನು ರೂಪಿಸಿ ಸರ್ಕಾರಿ ಶಾಲೆಗಳನ್ನು ಮುಚ್ಚುವುದು ಬೇಡಾ ಎಂದು ಬಡ ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸುತ್ತಿದೆ ಆದರೆ, ಪೋಷಕರು ಮಾತ್ರಾ ಇದ್ಯಾವುದಕ್ಕೂ ಲಕ್ಷ್ಯ ಕೊಡದೇ ಕೇವಲ ಇಂಗ್ಲಿಷ್ ಭಾಷೆಯಿಂದ ಮಾತ್ರ ಎಲ್ಲವೂ ಸಾಧ್ಯ ಎಂಬ ಭ್ರಮೆಯಲ್ಲಿ ಖಾಸಗಿ ಶಾಲೆಗಳ ಮೊರೆ ಹೋಗುತ್ತಿರುವುದು ಬೇಸರ ಮೂಡಿಸಿದೆ ಎಂದು ಅವರು ಹೇಳಿದರು.ಗುಣಮಟ್ಟದ ಶಿಕ್ಷಣ ಇರುವುದು ಸರ್ಕಾರಿ ಶಾಲೆಗಳಲ್ಲಿ, ಹಾಗಾಗಿ ಪೋಷಕರಿಗೆ ಸರ್ಕಾರಿ ಶಾಲೆಗಳ ಬಗ್ಗೆ ಅರಿವು ಮೂಡಿಸಿಲು ಶಿಕ್ಷಕರು ಆಸಕ್ತಿ ವಹಸಿಬೇಕು ಎಂದರು.ತಹಸೀಲ್ದಾರ್ ನಿಸರ್ಗ ಪ್ರಿಯಾ, ತಾಪಂ ಇಒ ಸುನಿಲ್ ಕುಮಾರ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಮೈಮುಲ್ ನಿರ್ದೇಶಕ ಪ್ರಕಾಶ್, ಎಂಡಿಸಿಸಿ ಬ್ಯಾಂಕ್ ನಿರ್ದೆಶಕ ಈ.ಪಿ. ಲೋಕೇಶ್, ಪುರಸಭಾ ಮಾಜಿ ಅಧ್ಯಕ್ಷ ವಿಷಕಂಠಯ್ಯ, ಗ್ರಾಪಂ ಅಧ್ಯಕ್ಷೆ ಅಕ್ಕಯ್ಯಮ್ಮ, ಐಲಾಪುರ ಲೋಕೇಶ್, ರಘು, ಪಿಡಿಒ ಮಂಜುನಾಥ್, ಸುರೇಶ್, ಬೋರೇಗೌಡ, ಪಶು ಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಸೋಮಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ರವಿ ಪ್ರಸನ್ನ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಸಿ. ಪ್ರಶಾಂತ್ , ಲೋಕೋಪಯೋಗಿ ಇಲಾಖೆ ಸಹಾಯಕ ಎಂಜಿನಿಯರ್ ವೆಂಕಟೇಶ್, ದಿನೇಶ್, ಕುಮಾರ್, ಪೀಟರ್, ನಿರ್ಮಿತಿ ಕೇಂದ್ರದ ಅಧಿಕಾರಿಗಳಾದ ಲವಕುಮಾರ್, ಅಹಮದ್ ಇದ್ದರು.----------------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸದೃಢ ಆರೋಗ್ಯಕ್ಕೆ ಹಲ್ಲು ಸದೃಢವಾಗಿರಲಿ
ಬೆಳಗಾವಿ ಜಿಲ್ಲೆ ವಿಭಜನೆ ಇರಾದೆ ಸಿಎಂಗಿದೆ