ಉಪ್ಪಿನಂಗಡಿಯಲ್ಲಿ ೧೮ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ದತ್ತಿ ನಿಧಿ ಕಾರ್ಯಕ್ರಮ

KannadaprabhaNewsNetwork |  
Published : Nov 19, 2026, 02:45 AM IST
ಉಪ್ಪಿನಂಗಡಿಯಲ್ಲಿ ೧೮ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ದತ್ತಿ ನಿಧಿ ಕಾರ್ಯಕ್ರಮ | Kannada Prabha

ಸಾರಾಂಶ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ, ಉಪ್ಪಿನಂಗಡಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು, ಉಪ್ಪಿನಂಗಡಿ ಇವರ ಸಹಯೋಗದೊಂದಿಗೆ ೧೮ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ದತ್ತಿ ನಿಧಿ ಕಾರ್ಯಕ್ರಮವು ನವೆಂಬರ್ ೧೬ರಂದು ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ, ಉಪ್ಪಿನಂಗಡಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು, ಉಪ್ಪಿನಂಗಡಿ ಇವರ ಸಹಯೋಗದೊಂದಿಗೆ ೧೮ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ದತ್ತಿ ನಿಧಿ ಕಾರ್ಯಕ್ರಮವು ನವೆಂಬರ್ ೧೬ರಂದು ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.ಉಪ್ಪಿನಂಗಡಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕರುಣಾಕರ ಸುವರ್ಣರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನಿರ್ದೇಶಕ ಡಾ. ರಾಜಾರಾಮ ಕೆ.ಬಿ. ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನಿರ್ದೇಶಕರಾಗಿ ಆಯ್ಕೆಗೊಂಡ ಡಾ. ರಾಜಾರಾಮ ಕೆ.ಬಿ. ಹಾಗೂ ೨೦೨೬ನೇ ಸಾಲಿನ ಉತ್ತಮ ಶಿಕ್ಷಕ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಇಬ್ರಾಹಿಂ ಎಂ. ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಹಾಗೂ ೨೦೦ ಕ್ಕೂ ಮಿಕ್ಕಿದ ನಿರ್ಗತಿಕ ಅಸಹಾಯಕ ವೃದ್ದರನ್ನು ಆಶ್ರಮಕ್ಕೆ ಸೇರಿಸುವ ಮೂಲಕ ಅವರ ಬದುಕಿಗೆ ಬೆಳಕಾದ ಪುತ್ತೂರು ತಾಲೂಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಗೆ ಮನುಕುಲ ತಿಲಕ ಬಿರುದು ನೀಡಿ ಅಭಿನಂದಿಸಲಾಯಿತು. ‘ಸಾಹಿತ್ಯ ಚಿಂತನೆ’ ಎಂಬ ವಿಷಯದ ಕುರಿತು ಉಪ್ಪಿನಂಗಡಿ ಹೋಬಳಿ ಕ.ಸಾ.ಪ. ಗೌರವ ಕೋಶಾಧ್ಯಕ್ಷ ಡಾ. ಗೋವಿಂದಪ್ರಸಾದ ಕಜೆ ಅವರು ವಿಶೇಷ ಉಪನ್ಯಾಸ ನೀಡಿ, ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿ ಸಾಹಿತ್ಯಾಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದರು. ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸ.ಪ.ಪೂ. ಕಾಲೇಜಿನ ಕಾರ್ಯಾಧ್ಯಕ್ಷ ಅಝೀಝ್ ಬಸ್ತಿಕಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ವೇದಿಕೆಯಲ್ಲಿ ಉಪ್ಪಿನಂಗಡಿ ಹೋಬಳಿ ಕ.ಸಾ.ಪ. ಪ್ರಧಾನ ಕಾರ್ಯದರ್ಶಿ ಉದಯಕುಮಾರ್ ಯು.ಎಲ್. , ಸಂಘಟನಾ ಕಾರ್ಯದರ್ಶಿ ನವೀನ್ ಬ್ರಾಗ್ಸ್ , ಸತ್ಯ ಶಾಂತಾ ಪ್ರತಿಷ್ಠಾನದ ಶಾಂತಾ ಕುಂಟಿನಿ , ಹೋಬಳಿ ಕ.ಸಾ.ಪ. ಸದಸ್ಯ ಅಬ್ದುಲ್ ರೆಹಮಾನ್ ಯೂನಿಕ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ನವ್ಯಶ್ರೀ ಸ್ವರ್ಗ, ಪ್ರಮುಖರಾದ ತೌಷಿಪ್ ಯು ಟಿ, ಝಕಾರಿಯ ಕೊಡಿಪ್ಪಾಡಿ, ನಝೀರ್ ಮಠ ಮೊದಲಾದವರು ಭಾಗವಹಿಸಿದ್ದರು. .

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಿಪಿಆರ್ ಸಿದ್ಧಪಡಿಸಲು ತ್ವರಿತ ಅನುಮೋದನೆ ನೀಡಿ
ಆರ್‌ಎಸ್‌ಎಸ್‌ ಆಕರ್ಷಕ ಪಥ ಸಂಚಲನ