೩೦ ಟನ್ ಅಕ್ರಮ ಮರಳು ದಾಸ್ತಾನು: ಪ್ರಕರಣ ದಾಖಲು

KannadaprabhaNewsNetwork |  
Published : Feb 19, 2026, 03:00 AM IST
೩೦ ಟನ್ ಅಕ್ರಮ ಮರಳು ದಾಸ್ತಾನು: ಪ್ರಕರಣ ದಾಖಲು | Kannada Prabha

ಸಾರಾಂಶ

ನದಿ ಬದಿಯಲ್ಲಿ ಅಕ್ರಮವಾಗಿ ಮರಳನ್ನು ತೆಗೆದು ದಾಸ್ತಾನಿರಿಸಿದ ಪ್ರಕರಣದ ಬಗ್ಗೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಉಪ್ಪಿನಂಗಡಿ: ನದಿ ಬದಿಯಲ್ಲಿ ಅಕ್ರಮವಾಗಿ ಮರಳನ್ನು ತೆಗೆದು ದಾಸ್ತಾನಿರಿಸಿದ ಪ್ರಕರಣದ ಬಗ್ಗೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಜತ್ತೂರು ಗ್ರಾಮದ ವಳಾಲು ಎಂಬಲ್ಲಿನ ನೇತ್ರಾವತಿ ನದಿ ದಂಡೆಯಲ್ಲಿ ಅಕ್ರಮವಾಗಿ ಮರಳು ತೆಗೆದು ದಾಸ್ತಾನು ಮಾಡುತ್ತಿರುವುದಾಗಿ ಉಪ್ಪಿನಂಗಡಿ ಪೊಲೀಸರಿಗೆ ಮಾಹಿತಿ ಬಂದಿದ್ದು, ಪೊಲೀಸರು ಸ್ಥಳಕ್ಕೆ ತೆರಳಿದಾಗ ಆರೋಪಿ ಜೈನುದ್ದೀನ್ ಎಂಬಾತನ ನಿರ್ದೇಶನದಂತೆ ಮರಳು ಸಂಗ್ರಹಿಸುತ್ತಿರುವುದು ತಿಳಿದುಬಂದಿದೆ. ಸ್ಥಳದಲ್ಲಿ ಸುಮಾರು ೩೦ ಟನ್‌ನಷ್ಟು ಮರಳು ದಾಸ್ತಾನಿರುವುದು ಕಂಡು ಬಂದಿದ್ದು, ಸ್ಥಳದಲ್ಲಿದ್ದ ಒಂದು ದೋಣಿ, ೪ ಹಾರೆ, ಬಕೆಟ್ ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೋಟೊ ಪೈಲ್ ನೇಮ್ : ಯುಪಿಪಿ_ಫೆ೧೮_೨ ಮರಳು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೊರಗರು ಮುಖ್ಯ ವಾಹಿನಿಗೆ ಬರಲು ಪೂರ್ಣ ಸಹಕಾರ: ಗಂಟಿಹೊಳೆ
ಧರ್ಮದ ಹಾದಿಯಲ್ಲಿ ಸಾಗಿದರೆ ಪುಣ್ಯದ ಫಲ