ಕಂಬಳಕ್ಕೆ ಹೆಚ್ಚುವರಿ ಪ್ರೋತ್ಸಾಹ ಒದಗಿಸಲು ಶ್ರಮ: ಅಶೋಕ್ ರೈ
ಕನ್ನಡಪ್ರಭ ವಾರ್ತೆ ಉಪ್ಪಿನಂಗಡಿಜಿಲ್ಲೆಯ ರೈತಾಪಿ ವರ್ಗದ ಬದುಕಿನೊಂದಿಗೆ ನಂಟು ಹೊಂದಿರುವ ಕಂಬಳ ಕ್ರೀಡೆಗೆ ಸರ್ಕಾರದಿಂದ ದೊರಕಬೇಕಾದ ಸಹಾಯಧನವನ್ನು ದೊರಕಿಸುವುದಲ್ಲದೆ, ಹೆಚ್ಚುವರಿ ಪ್ರೋತ್ಸಾಹ ಒದಗಿಸಲು ಶ್ರಮಿಸುತ್ತಿದ್ದೇನೆ ಎಂದು ಉಪ್ಪಿನಂಗಡಿ ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.ಅವರು ಇಲ್ಲಿನ ಕೂಟೇಲು ದಡ್ಡು ಬಳಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಶನಿವಾರ ‘ಉಬಾರ್ ಕಂಬಳೋತ್ಸವ’ದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ತುಳುನಾಡಿನಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿದ್ದು, ಆದರೆ ಅಭಿವೃದ್ಧಿಯ ಕೊರತೆಯಿಂದ ಜನರನ್ನು ಸೆಳೆಯಲು ಸಾಧ್ಯವಾಗುತ್ತಿಲ್ಲ. ಉಪ್ಪಿನಂಗಡಿಯ ಸಂಗಮ ಕ್ಷೇತ್ರವು ದಕ್ಷಿಣದ ಕಾಶಿಯಾಗಿದ್ದು, ಇದು ಉತ್ತರದ ಕಾಶಿಯಂತೆ ಪಾವಿತ್ರ್ಯತೆ ಪಡೆದಿದೆ. ಶಾಸಕನಾಗಿ ಇಲ್ಲಿಯ ಅಭಿವೃದ್ಧಿಯ ಬಗ್ಗೆಯೂ ಚಿಂತನೆ ನಡೆಸಿದ್ದೇನೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉದ್ಯಮಿ ನಟೇಶ್ ಪೂಜಾರಿ ಮಾತನಾಡಿ, ವ್ಯವಸಾಯದೊಂದಿಗೆ ನಮ್ಮ ಆಚಾರ- ವಿಚಾರಗಳು ಬೆರೆತು ಹೋಗಿವೆ. ಆದರೆ ಗದ್ದೆಗಳು ಮರೆಯಾದಂತಹ ಈ ಕಾಲಘಟ್ಟದಲ್ಲಿಯೂ ನಮ್ಮ ಆಚಾರ- ವಿಚಾರ- ಸಂಸ್ಕೃತಿಯನ್ನು ಉಳಿಸಿ ಬೆಳೆಸಿ ಅದನ್ನು ಜಗದಗಲಕ್ಕೆ ಪಸರಿಸುವ ಕಾರ್ಯ ನಡೆಯುತ್ತಿರುವುದು ಪ್ರಶಂಸನೀಯ ಎಂದರು. ರಾಜ್ಯ ಧಾರ್ಮಿಕ ಪರಿಷತ್‌ನ ಸದಸ್ಯರಾದ ಮಲ್ಲಿಕಾ ಶೆಟ್ಟಿ ಮಲಾರುಬೀಡು ಮಾತನಾಡಿದರು.ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ನಾಯಕ್, ಉದ್ಯಮಿ ಧನ್ಯಕುಮಾರ್ ರೈ ಬಿಳಿಯೂರುಗುತ್ತು, ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಾದ ರವೀಂದ್ರ ಶೆಟ್ಟಿ ನುಳಿಯಾಲು, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಕರುಣಾಕರ ಸುವರ್ಣ, ಉಪ್ಪಿನಂಗಡಿ ಪೊಲೀಸ್ ಉಪ ನಿರೀಕ್ಷಕ ಅವಿನಾಶ್ ಎಚ್. ಗೌಡ ಶುಭ ಹಾರೈಸಿದರು.ವೇದಿಕೆಯಲ್ಲಿ ಉಪ್ಪಿನಂಗಡಿ ಗ್ರಾ.ಪಂ. ಅಧ್ಯಕ್ಷೆ ಲಲಿತಾ, ಪ್ರವೀಣ್ ಕುಮಾರ್ ಕದಿಕ್ಕಾರು ಬೀಡು, ರಾಜೇಶ್ ಶೆಟ್ಟಿ, ಶ್ರೀ ಮಹಿಷಮರ್ದಿನಿ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರರಾದ ಸಂಕಪ್ಪ ಶೆಟ್ಟಿ, ಕಾಂಗ್ರೆಸ್ ನಗರಾಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಉಪ್ಪಿನಂಗಡಿ ಗ್ರಾ.ಪಂ. ಉಪಾಧ್ಯಕ್ಷೆ ವಿದ್ಯಾಲಕ್ಷ್ಮೀ ಪ್ರಭು, ಕಂಬಳ ಸಮಿತಿ ಗೌರವಾಧ್ಯಕ್ಷ ಎನ್. ಉಮೇಶ್ ಶೆಣೈ, ಪ್ರಧಾನ ಕಾರ್ಯದರ್ಶಿ ಕೇಶವ ಭಂಡಾರಿ ಬೆಳ್ಳಿಪ್ಪಾಡಿ ಕೈಪ, ಕೋಶಾಧಿಕಾರಿ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಉಪಾಧ್ಯಕ್ಷ ವಿದ್ಯಾಧರ ಜೈನ್ ಪದ್ಮವಿದ್ಯಾ, ಮುರಳೀಧರ ರೈ ಮಠಂತಬೆಟ್ಟು, ರಾಮಚಂದ್ರ ಮಣಿಯಾಣಿ, ಸುದೇಶ್ ಶೆಟ್ಟಿ ಶಾಂತಿನಗರ, ಜಗನ್ನಾಥ ಶೆಟ್ಟಿ ನಡುಮನೆ ಮತ್ತಿತರರು ಉಪಸ್ಥಿತರಿದ್ದರು.ಸಮಿತಿಯ ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು ಸ್ವಾಗತಿಸಿದರು. ನಿಹಾಲ್ ಶೆಟ್ಟಿ ವಂದಿಸಿದರು. ಕಂಬಳ ಸಮಿತಿಯ ಗೌರವ ಸಲಹೆಗಾರ ನಿರಂಜನ ರೈ ಮಠಂತಬೆಟ್ಟು ಕಾರ್ಯಕ್ರಮ ನಿರೂಪಿಸಿದರು.ಆಕರ್ಷಕ ಮೆರವಣಿಗೆ:ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಿಂದ ರಥಬೀದಿ, ಬ್ಯಾಂಕ್ ರಸ್ತೆಯಾಗಿ, ರಾಷ್ಟ್ರೀಯ ಹೆದ್ದಾರಿಯಾಗಿ ಕೂಟೇಲುವಿನ ಕಂಬಳ ಕರೆ ವರೆಗೆ ಆಕರ್ಷಕ ಮೆರವಣಿಗೆ ನಡೆಯಿತು. ಕೊಂಬು ಕಹಳೆ, ಬ್ಯಾಂಡ್ ವಾದ್ಯಗಳಲ್ಲದೆ, ಕೀಲು ಕುದುರೆ, ತಟ್ಟಿರಾಯ, ಗೊಂಬೆ ಕುಣಿತಗಳು ಮೆರವಣಿಗೆಗೆ ಆಕರ್ಷಣೆ ಒದಗಿಸಿದವು. ಕಂಬಳಾಭಿಮಾನಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡರು.