7ನೇ ವೇತನ ಆಯೋಗದ ವರದಿ ಅನುಷ್ಠಾನಕ್ಕೆ ಒತ್ತಾಯ

KannadaprabhaNewsNetwork |  
Published : Jul 15, 2024, 01:48 AM IST
13ಎಚ್‌ ಪಿಟಿ2- ಹೊಸಪೇಟೆಯಲ್ಲಿ ಶಾಸಕ ಎಚ್.ಆರ್‌. ಗವಿಯಪ್ಪನವರಿಗೆ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಮನವಿಪತ್ರ ಸಲ್ಲಿಸಿದರು. | Kannada Prabha

ಸಾರಾಂಶ

ಸರ್ಕಾರಕ್ಕೆ ಸಲ್ಲಿಕೆಯಾಗಿರುವ 7ನೇ ವೇತನದ ಆಯೋಗ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಬೇಕು.

ಹೊಸಪೇಟೆ: 7ನೇ ವೇತನದ ಆಯೋಗ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ವತಿಯಿಂದ ಶಾಸಕ ಎಚ್‌.ಆರ್‌. ಗವಿಯಪ್ಪಗೆ ಮನವಿ ಸಲ್ಲಿಸಲಾಯಿತು.

ಈಗಾಗಲೇ ಸರ್ಕಾರಕ್ಕೆ ಸಲ್ಲಿಕೆಯಾಗಿರುವ 7ನೇ ವೇತನದ ಆಯೋಗ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಬೇಕು. ನೌಕರರಿಗೆ ಮಾಕರವಾದ ಎನ್.ಪಿ.ಎಸ್. ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಬೇಕು. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಸರ್ಕಾರಿ ನೌಕರರ ನ್ಯಾಯಯುತ ಮೂರು ಬೇಡಿಕೆಗಳನ್ನು ಈಡೇರಿಸದಿದ್ದರೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಣಿಯಲ್ಲಿ ತೀರ್ಮಾನದಂತೆ ವಿಜಯನಗರ ಜಿಲ್ಲಾ ನೌಕರರು ಅನಿವಾರ್ಯವಾಗಿ ಬೇಡಿಕೆ ಈಡೇರುವವರೆಗೆ ಅನಿರ್ದಿಷ್ಟಾವಧಿಯವರೆಗೆ ಕರ್ತವ್ಯಕ್ಕೆ ಗೈರು ಹಾಜರಾಗುತ್ತೇವೆ ಎಂದು ಶಾಸಕರಿಗೆ ತಿಳಿಸಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಜಿ.ಮಲ್ಲಿಕಾರ್ಜುನ ಗೌಡ್ರು, ಜಿಲ್ಲಾ ಕಾರ್ಯದರ್ಶಿ ಕಡ್ಲಿ ವೀರಭದ್ರೇಶ, ಜಿಲ್ಲಾ ಗೌರವ ಅಧ್ಯಕ್ಷ ಎಚ್.ಜೀವಣ್ಣ, ರಾಜ್ಯ ಪರಿಷತ್ ಸದಸ್ಯ ಎಸ್.ಬಸವರಾಜ್, ಜಿಲ್ಲಾ ಖಜಾಂಜಿ ರಾಘವೇಂದ್ರ ಹೆಗ್ಡಿಯಾಳ್, ಜಿಲ್ಲಾ ಉಪಾಧ್ಯಕ್ಷರಾದ ಪ್ರಶಾಂತ್ ಜೋಶಿ, ಕಾಳಪ್ಪ ಗೌಡ್ರು, ಲತಾ, ನಾಗಭೂಷಣ ಶೆಟ್ರು, ಹನುಮಂತಪ್ಪ, ಪಂಪಣ್ಣ, ಪರಶುರಾಮ್, ಕೃಷ್ಣದುಂದಪ್ಪನವರ್, ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಬಸವರಾಜ್, ಕಾರ್ಯದರ್ಶಿ ಮಲ್ಲಯ್ಯ ಮೋಟಗಿ, ದೈಹಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಝಾಕೀರ್ ಹುಸೇನ್, ತಾಲೂಕು ಅಧ್ಯಕ್ಷ ನಿಸಾರ್, ಶಿವಕುಮಾರ್, ಎನ್.ಪಿ.ಎಸ್. ನೌಕರರ ಸಂಘದ ಅಧ್ಯಕ್ಷ ಎಚ್.ಎಂ.ಗುರುಬಸವರಾಜ್, ಪ್ರಕಾಶ್ ಕುಲಕರ್ಣಿ, ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಶೇಖರ್ ಗಿರಡ್ಡಿ, ಡಿ.ಗ್ರೂಪ್ ನೌಕರರ ಸಂಘದ ಜಿಲ್ಲಾಧ್ಯಕ್ಷ ಅಜಯ್ ಮದಕರಿ ಸೇರಿದಂತೆ ಸರ್ಕಾರಿ ನೌಕರರು ಇದ್ದರು.

ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ಎಚ್.ಆರ್.ಗವಿಯಪ್ಪ, ಸರ್ಕಾರಿ ನೌಕರರ ಬೇಡಿಕೆಗಳು ನ್ಯಾಯಯುತವಾಗಿದ್ದು ಬೇಡಿಕೆಗಳನ್ನು ಈಡೇರಿಸುವಂತೆ ಹಣಕಾಸು ಸಚಿವರಾಗಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ