-ದಾವಣಗೆರೆಯಲ್ಲಿ ಎಪಿಎಂಸಿ ಕಾರ್ಯದರ್ಶಿ ರಾಣಿ ಅವರಿಗೆ ರೈತರ ಒಕ್ಕೂಟದಿಂದ ಮನವಿ ಪತ್ರ ಸಲ್ಲಿಕೆ
ಕನ್ನಡಪ್ರಭವಾರ್ತೆ, ದಾವಣಗೆರೆ
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಿಂದ ಇ-ಟೆಂಡರ್ ಖರೀದಿ ವಹಿವಾಟನ್ನು ಜಿಲ್ಲೆಯ ಗ್ರಾಮೀಣ ಪ್ರದೇಶಕ್ಕೂ ವಿಸ್ತರಣೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ರೈತರ ಒಕ್ಕೂಟದ ನಿಯೋಗವು ನಗರದಲ್ಲಿ ಎಪಿಎಂಸಿಗೆ ಮನವಿ ಅರ್ಪಿಸಿದೆ.ನಗರದ ಎಪಿಎಂಸಿ ಕಚೇರಿಯಲ್ಲಿ ಸಮಿತಿ ಕಾರ್ಯದರ್ಶಿ ಎಚ್.ಸಿ.ಎಂ.ರಾಣಿ ಅವರಿಗೆ ಒಕ್ಕೂಟದ ಮುಖಂಡರಾದ ಬಿ.ಎಂ.ಸತೀಶ ಕೊಳೇನಹಳ್ಳಿ, ಬೆಳವನೂರು ಬಿ.ನಾಗೇಶ್ವರರಾವ್, ಡಾ.ವಿಜಯಲಕ್ಷ್ಮಿ ವೀರಮಾಚಿನೇನಿ, ಲೋಕಿಕೆರೆ ನಾಗರಾಜ ನೇತೃತ್ವದಲ್ಲಿ ಭೇಟಿ ಮಾಡಿ, ಮನವಿ ಅರ್ಪಿಸಿ, ಇ-ಟೆಂಡರ್ ಖರೀದಿ ವಹಿವಾಟನ್ನು ಗ್ರಾಮೀಣ ಭಾಗಕ್ಕೂ ವಿಸ್ತರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು.
ರೈತರು ಚೀಲಕ್ಕೆ ತುಂಬಿಸಿ, ಟ್ರ್ಯಾಕ್ಟರ್‌ಗೆ ಲೋಡ್ ಮಾಡಿಕೊಂಡು, ಎಪಿಎಂಸಿ ದಲಾಲಿ ಮಂಡಿಗೆ ತಂದು, ಸುರಿದರೆ ಇ-ಟೆಂಡರ್ ಖರೀದಿಯಾಗುತ್ತದೆ. ಖರೀದಿ ನಂತರ ಚೀಲಗಳಿಗೆ ತುಂಬಿ, ಎಲೆಕ್ಟ್ರಾನಿಕ್ ಸ್ಕೇಟ್ ಕಾಟಾದಲ್ಲಿ ತೂಕ ಮಾಡಬೇಕು. ಆ ನಂತರ ಚೀಲ ಹೊಲಿದೆ ಲಾರಿಗೆ ಲೋಡ್ ಮಾಡಬೇಕು. ಇ-ಟೆಂಡರ್ ಖರೀದಿ ವಹಿವಾಟನ್ನು ಗ್ರಾಮೀಣ ಪ್ರದೇಶದಲ್ಲಿ ಕಣ ಅಥವಾ ಕಾಂಕ್ರಿಟ್ ರಸ್ತೆಗಲ್ಲಿ ರಾಶಿ ಹಾಕಿ, ಸಂಗ್ರಹಿಸಿರುವ ಧಾನ್ಯಗಳಿಗೂ ವಿಸ್ತರಿಸಬೇಕು. ಆಗ ಹಳ್ಳಿಗಳಲ್ಲಿ ಮಾರಾಟ ಮಾಡುವ ಧಾರಣೆಯೂ ಹೆಚ್ಚುತ್ತದೆ. ಹಳ್ಳಿಗಳಿಗೆ ಇ-ಟೆಂಡರ್ ಪದ್ಧತಿ ವಿಸ್ತರಿಸಬೇಕಾದರೆ, ರೈತರು ಮಾರುಕಟ್ಟೆಗೆ ನಿತ್ಯ ಬೆಳಿಗ್ಗೆ 9 ಗಂಟೆಗೆ ಸ್ಯಾಂಪಲ್ ತರಲು ಎಪಿಎಂಸಿ ವ್ಯವಸ್ಥೆ ಮಾಡಬೇಕು ಎಂದು ಅವರು ಆಗ್ರಹಿಸಿದರು.
ರೀದಿದಾರರಿಗೆ ನೇರ ವ್ಯಾಪಾರವಾಗುತ್ತದೆ. ಅತೀ ಹೆಚ್ಚು ಬೆಲೆ ನಮೂದಿಸಿದ ಯಶಸ್ವಿ ಖರೀದಿದಾರರು ಹಳ್ಳಿಗಳಲ್ಲಿ ರಾಶಿ ಮಾಡಿರುವ ಸ್ಥಳಕ್ಕೆ ಹೋಗಿ, ಲೋಡ್ ಮಾಡಿಕೊಂಡು ವೇ ಬ್ರಿಡ್ಜ್ ನಲ್ಲಿ ತೂಕ ಮಾಡಿಸಿ, ರೈತನಿಗೆ ಆನ್ ಲೈನ್ ಮೂಲಕ ಪೇಮೆಂಟ್ ಮಾಡುವ ವ್ಯವಸ್ಥೆಯನ್ನು ಜಾರಿಗೊಳಿಸಬೇಕು. ಇದರಿಂದ ದಲಾಲಿ ಮಂಡಿಗೆ ತಂದು, ಸುರಿದು, ಖರೀದಿ ನಂತರ ಚೀಲಕ್ಕೆ ತುಂಬಿ, ತೂಕ ಮಾಡಿ, ಹೊಲೆಡು, ಮತ್ತೆ ಲಾರಿಗೆ ಲೋಡ್ ಮಾಡುವ ಮಾನವ ಶ್ರಮ, ಸಮಯ ಉಳಿಯುತ್ತದೆ. ರೈತರಿಗೂ ನ್ಯಾಯಯುತ ವ್ಯಾಪಾರ, ವಹಿವಾಟು ಒದಗಿಸಿದಂತಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.
ರೈತ ಮುಖಂಡರಾದ ಬೆಳವನೂರು ಬಿ.ನಾಗೇಶ್ವರರಾವ್, ಡಾ.ವಿಜಯಲಕ್ಷ್ಮಿ ವೀರಮಾಚಿನೇನಿ, ದೂಡಾ ಮಾಜಿ ಅಧ್ಯಕ್ಷ, ಹಿರಿಯ ವಕೀಲ ಎ.ವೈ.ಪ್ರಕಾಶ, ಧನಂಜಯ ಕಡ್ಲೇಬಾಳು, ಗೋಣಿವಾಡ ಮಂಜುನಾಥ, ರುದ್ರಕಟ್ಟೆ ಪರಮೇಶ್ವರಪ್ಪ, ಆರುಂಡಿ ಪುನೀತ, ಮಾಜಿ ಮೇಯರ್ ಕೆ.ಆರ್.ವಸಂತಕುಮಾರ, ಅಣಬೇರು ಕುಮಾರಸ್ವಾಮಿ, ಶಿವಪ್ರಕಾಶ, ಗೋಪನಾಳ ಪಾಲಾಕ್ಷಪ್ಪ, ವಡ್ಡಿನಹಳ್ಳಿ ಸಿದ್ದೇಶ, ಆರನೇ ಕಲ್ಲು ವಿಜಯಕುಮಾರ, ಕಾಶೀಪುರ ಸುರೇಶ, ಕುರ್ಕಿ ರೇವಣಸಿದ್ದಪ್ಪ, ಐಗೂರು ತಿಪ್ಪೇಸ್ವಾಮಿ ಇದ್ದರು.
............ಫೋಟೊ: ದಾವಣಗೆರೆಯಲ್ಲಿ ಎಪಿಎಂಸಿ ಕಾರ್ಯದರ್ಶಿ ಎಚ್.ಎಂ.ಸಿ.ರಾಣಿ ಅವರಿಗೆ ಜಿಲ್ಲೆಯ ರೈತರ ಒಕ್ಕೂಟದ ನಿಯೋಗ ಮನವಿ ಅರ್ಪಿಸಿತು.