ಎಡಿಜಿಪಿ ಹಿತೇಂದ್ರ ಅಮಾನತಿಗೆ ಆಗ್ರಹ

KannadaprabhaNewsNetwork |  
Published : Dec 13, 2024, 12:47 AM IST
2ಎ ಮೀಸಲಾತಿ ಹೋರಾಟಗಾರರ ಮೇಲಿನ ಲಾಠಿ ಚಾರ್ಜ್ ಖಂಡಿಸಿ ಹಾಗೂ ಅದಕ್ಕೆ ಕಾರಣರಾದ ಎಡಿಜಿಪಿ ಹಿತೇಂದ್ರ ಅವರನ್ನು ವಜಾಗೋಳಿಸಬೇಕೆಂದು ಆಗ್ರಹಿಸಿ ಗುರುವಾರ ತಾಲೂಕ ಪಂಚಮಸಾಲಿ ಸಮಾಜದ ನೂರಾರು ಕಾರ್ಯಕರ್ತರು ತಹಸೀಲ್ದಾರ ಕೆ ಗುರುಬಸವರಾಜ ಅವರ ಮೂಲಕ ರಾಜ್ಯ ಪಾಲರಿಗೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಬೆಳಗಾವಿಯಲ್ಲಿ ನಡೆದ 2ಎ ಮೀಸಲಾತಿ ಹೋರಾಟಗಾರರ ಮೇಲಿನ ಲಾಠಿ ಚಾರ್ಜ್ ಖಂಡಿಸಿ ಹಾಗೂ ಅದಕ್ಕೆ ಕಾರಣರಾದ ಎಡಿಜಿಪಿ ಹಿತೇಂದ್ರ ಅವರನ್ನು ವಜಾಗೋಳಿಸಬೇಕೆಂದು ಆಗ್ರಹಿಸಿ ಗುರುವಾರ ರಟ್ಟೀಹಳ್ಳಿ ತಾಲೂಕು ಪಂಚಮಸಾಲಿ ಸಮಾಜದ ನೂರಾರು ಕಾರ್ಯಕರ್ತರಿಂದ ಸುಮಾರು ಅರ್ಧ ಗಂಟೆಗಳ ಕಾಲ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು.

ರಟ್ಟೀಹಳ್ಳಿ: ಬೆಳಗಾವಿಯಲ್ಲಿ ನಡೆದ 2ಎ ಮೀಸಲಾತಿ ಹೋರಾಟಗಾರರ ಮೇಲಿನ ಲಾಠಿ ಚಾರ್ಜ್ ಖಂಡಿಸಿ ಹಾಗೂ ಅದಕ್ಕೆ ಕಾರಣರಾದ ಎಡಿಜಿಪಿ ಹಿತೇಂದ್ರ ಅವರನ್ನು ವಜಾಗೋಳಿಸಬೇಕೆಂದು ಆಗ್ರಹಿಸಿ ಗುರುವಾರ ತಾಲೂಕು ಪಂಚಮಸಾಲಿ ಸಮಾಜದ ನೂರಾರು ಕಾರ್ಯಕರ್ತರಿಂದ ಸುಮಾರು ಅರ್ಧ ಗಂಟೆಗಳ ಕಾಲ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಭಗತ್‌ಸಿಂಗ್ ವೃತ್ತದಲ್ಲಿ ತಾಲೂಕು ಪಂಚಮಸಾಲಿ ಸಮಾಜದ ನೂರಾರು ಕಾರ್ಯಕರ್ತರು ಜಮಾವಣೆಗೊಂಡು ಆನಂತರ ಶಿವಾಜಿ ಸರ್ಕಲ್‌, ಹಳೇ ಬಸ್‌ ಸ್ಟ್ಯಾಂಡ್‌ ಸರ್ಕಲ್‌, ಸಂಗೊಳ್ಳಿ ರಾಯಣ್ಣ ಸರ್ಕಲ್‌ ಮುಖಾಂತರ ಮಹಾಲಕ್ಷ್ಮೀ ವೃತ್ತದ ರಾಷ್ಟ್ರೀಯ ಹೆದ್ದಾರಿ ತಡೆದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಆನಂತರ ಪ್ರತಿಭಟನಾ ಸ್ಥಳಕ್ಕಾಗಮಿಸಿದ ತಹಸೀಲ್ದಾರ್‌ ಕೆ. ಗುರುಬಸವರಾಜ ಅವರಿಗೆ ಮನವಿ ಸಲ್ಲಿಸಲಾಯಿತು.

ಆನಂತರ ಮಾತನಾಡಿದ ಸಮಾಜದ ತಾಲೂಕಾಧ್ಯಕ್ಷ ಪರಮೇಶಪ್ಪ ಹಲಗೇರಿ, ಬೆಳಗಾವಿಯಲ್ಲಿ ಪಂಚಮಸಾಲಿ ಹೋರಾಟಗಾರರ ಮೇಲೆ ಹಲ್ಲೆ ನಡೆಸಿರುವುದನ್ನು ಉಗ್ರವಾಗಿ ಖಂಡಿಸುತ್ತೇವೆ. ಶಾಂತಿಯುತ ಪ್ರತಿಭಟನೆಯನ್ನು ರಣರಂಗ ಮಾಡಿದ ಎಡಿಜಿಪಿ ಹಿತೇಂದ್ರ ಅವರನ್ನು ತಕ್ಷಣ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ಹಿಡಿಯುವ ಮುನ್ನ ಪಂಚಮಸಾಲಿ ಸಮಾಜಕ್ಕೆ 2ಎ ಮಿಸಲಾತಿ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಅಧಿಕಾರ ಹಿಡಿದ ಆನಂತರ ತಮ್ಮ ವರಸೆ ಬದಲಿಸಿದ್ದಾರೆ. ಮುಂಬರುವ ದಿನಗಳಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸುವುದು ಶತಃಸಿದ್ಧ ಎಂದರು.

ಸಮಾಜದ ಮುಖಂಡ, ಸಾಹಿತಿ ಡಾ. ನಿಂಗಪ್ಪ ಚಳಗೇರಿ ಮಾತನಾಡಿ, ಪಂಚಮಸಾಲಿ ಸಮಾಜದಲ್ಲಿ ರೈತ ಸಮುದಾಯದವರು ಹೆಚ್ಚಿದ್ದು, ದೇಶದ ಹಸಿವು ನೀಗಿಸುವ ಸಮಾಜಕ್ಕೆ ಅನ್ಯಾಯ ಮಾಡಿದ ರಾಜ್ಯ ಸರ್ಕಾರಕ್ಕೆ ನಮ್ಮ ಧಿಕ್ಕಾರ. ಲಾಠಿ ಚಾರ್ಜ್‌ ಮಾಡಿ ಅಮಾಯಕರನ್ನು ಆಸ್ಪತ್ರೆ ಸೇರುವಂತೆ ಮಾಡಿದ್ದು ನಮ್ಮೆಲ್ಲರಿಗೂ ನೋವುಂಟು ಮಾಡಿದೆ ಎಂದರು.

ವೀರನಗೌಡ ಪ್ಯಾಟಿಗೌಡ್ರ, ಸುರೇಶ ಬೆಣ್ಣಿ, ಮಾಲತೇಶ ಬೆಳಕೆರಿ, ಕಾಂತೇಶ ಪಾಟೀಲ, ಶಿವಾನಂದ ಪೂಜಾರ, ವಿಜಯ ಅಂಗಡಿ, ರಾಘವೇಂದ್ರ ಹರವಿಶೆಟ್ಟರ್, ರಾಜುಗೌಡ ಪಾಟೀಲ್, ಸುನೀಲ ಸರಶೆಟ್ಟರ್, ವಿಶ್ವನಾಥ ಬೆಳಕೆರಿ, ಮಂಜು ಅಂಗರಗಟ್ಟಿ, ಚೇತನ ಬೆಟ್ಟಣ್ಣನವರ, ಶೋಭಾ ಎಚ್.ಪಿ., ರಾಜೇಶ್ವರಿ ಹರವಿಶೆಟ್ಟರ, ಮುಂತಾದವರು ಇದ್ದರು.

PREV

Latest Stories

ನ್ಯಾಯಾಂಗದ ಸ್ವಾತಂತ್ರ್ಯ ರಕ್ಷಣೆಗೆ ಕ್ರಮ : ನ್ಯಾ.ವಿಭು
ಕೃಷ್ಣಾ ಮೇಲ್ದಂಡೆ-3 ಭೂಸ್ವಾಧೀನಕ್ಕೆ 2.01 ಲಕ್ಷ ಕೋಟಿ ಬೇಕು : ಸಚಿವ ಕೃಷ್ಣ
ನಮ್ಮ ಗ್ಯಾರಂಟಿ ಯೋಜನೆ ದೇಶಕ್ಕೇ ಮಾದರಿ - ಟೀಕಿಸಿದ್ದ ಬಿಜೆಪಿಯೇ ಕಾಪಿ ಮಾಡಿದೆ : ಡಿಸಿಎಂ ಡಿಕೆಶಿ