ಪ್ರತ್ಯೇಕ ಜಿಲ್ಲೆ ಘೋಷಣೆಗೆ ಸಿಎಂರನ್ನು ಒತ್ತಾಯಿಸಿ

KannadaprabhaNewsNetwork |  
Published : Dec 09, 2025, 03:15 AM IST
ಜಿಲ್ಲೆ ಘೋಷಣೆ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಚಿಕ್ಕೋಡಿ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಯಾಗಬೇಕೆಂದು ಮೂರು ದಶಕಗಳಿಂದ ನಡೆಸುತ್ತಿರುವ ಹೋರಾಟಕ್ಕೆ ಜಿಲ್ಲೆಯ 18 ಶಾಸಕರು ಒಮ್ಮತದಿಂದ ಬೆಂಬಲ ಸೂಚಿಸಿ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಘೋಷಣೆ ಮಾಡುವಂತೆ ಸಿಎಂ ಮೇಲೆ ಒತ್ತಡ ಹೇರಬೇಕೆಂದು ನಿವೃತ್ತ ಶಿಕ್ಷಕ ಚಂದ್ರಶೇಖರ ಅರಭಾಂವಿ ಆಗ್ರಹಿಸಿದರು.

ಕನ್ನಡಪ್ರಭ ವಾರ್ತೆ ಚಿಕ್ಕೋಡಿಚಿಕ್ಕೋಡಿ ಪ್ರತ್ಯೇಕ ಜಿಲ್ಲೆಯಾಗಬೇಕೆಂದು ಮೂರು ದಶಕಗಳಿಂದ ನಡೆಸುತ್ತಿರುವ ಹೋರಾಟಕ್ಕೆ ಜಿಲ್ಲೆಯ 18 ಶಾಸಕರು ಒಮ್ಮತದಿಂದ ಬೆಂಬಲ ಸೂಚಿಸಿ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಘೋಷಣೆ ಮಾಡುವಂತೆ ಸಿಎಂ ಮೇಲೆ ಒತ್ತಡ ಹೇರಬೇಕೆಂದು ನಿವೃತ್ತ ಶಿಕ್ಷಕ ಚಂದ್ರಶೇಖರ ಅರಭಾಂವಿ ಆಗ್ರಹಿಸಿದರು.

ಚಿಕ್ಕೋಡಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯ ಪದಾಧಿಕಾರಿಗಳು ನಡೆಸುತ್ತಿರವ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಗಾಗಿ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದು, ಧರಣಿಗೆ ಬೆಂಬಲ ನೀಡಿ ಮಾತನಾಡಿದರು. ಈ ಅಧಿವೇಶನದಲ್ಲಿ ಚಿಕ್ಕೋಡಿ ಜಿಲ್ಲೆ ಘೋಷಣೆಯಾಗಬೇಕು ಎಂದು ಒತ್ತಾಯಿಸಿದರು. ಹೋರಾಟಗಾರರ ದಶಕಗಳ ಕಟ್ಟೆ ಒಡೆದಿದೆ, ಅಧಿವೇಶನದ ಒಳಗೆ ಮತ್ತು ಹೊರಗೆ ಜನಪ್ರತಿನಿಧಿಗಳು ಹೋರಾಟ ಮಾಡಿ, ಚಿಕ್ಕೋಡಿ ಜಿಲ್ಲೆ ಘೋಷಣೆ ಮಾಡಿಸಬೇಕು. ಇದಕ್ಕೆ ತಪ್ಪಿದರೆ ಹೋರಾಟ ಉಗ್ರ ಸ್ವರೂಪತಾಳಲಿದೆ ಎಂದು ಎಚ್ಚರಿಸಿದರು.

ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಸಂಜು ಬಡಿಗೇರ, ಕಾರ್ಯದರ್ಶಿ ಚಂದ್ರಕಾಂತ ಹುಕ್ಕೇರಿ, ಹೋರಾಟಗಾರರಾದ ಸಂತೋಷ ಪೂಜೇರಿ, ಪ್ರತಾಪಗೌಡ ಪಾಟೀಲ, ಅನಿಲ ನಾವಿ, ಅಮೂಲ ನಾವಿ, ಅಪ್ಪಾಸಾಹೇಬ ಹಿರೇಕೋಡಿ, ರಮೇಶ ಪಾಟೀಲ, ಮೋಹನ ಪಾಟೀಲ, ಶಂಕರ ಅವಡಖಾನ, ಸರದಾರ ಪಟೇಲ, ಮಹಾವೀರ ಬಿಲ್ಲೂರೆ, ಸುನೀಲ ತೇರದಾಳೆ, ಮಲ್ಲಪ್ಪ ಡೋನವಾಡೆ, ಚಿದಾನಂದ ಶಿರೋಳೆ, ಕೇದಾರಿ ಬರ್ಗೆ, ಖಾನಪ್ಪ ಬಾಡ, ಶಿವಲಿಂಗ ವಗ್ಗೆ, ಭೀಮಾ ಶಿರಗಾವೆ, ರಫೀಕ ಪಠಾಣ, ಕೃಷ್ಣಾ ಶಿಂದೆ ಸೇರಿದಂತೆ ನೂರಾರು ಜನ ಹೋರಾಟಗಾರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಷ್ಣು ಆಚಾರಿ ಸೇರಿ ಹಲವರಿಗೆ ಯಕ್ಷಗಾನ ಅಕಾಡೆಮಿ ಪ್ರಶಸ್ತಿ
ಭಗವದ್ಗೀತೆ ಬೋಧನೆ ಪ್ರಸ್ತಾಪ ಹಿಂದೆ ಎಚ್ಜಿಕೆ ಅಜೆಂಡಾ : ಮಧು ಬಂಗಾರಪ್ಪ