ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉರಿಮಜಲು ರಾಮ ಭಟ್ ಜನ್ಮದಿನಾಚರಣೆ

KannadaprabhaNewsNetwork |  
Published : Jun 07, 2025, 02:33 AM IST
ಫೋಟೋ: ಉರಿಮಜಲು ರಾಮ ಭಟ್ಉರಿಮಜಲು ರಾಮ ಭಟ್‌ ಅವರಿಗೆ ನುಡಿ ನಮನ ಸಲ್ಲಿಸಲಾಯಿತು.  | Kannada Prabha

ಸಾರಾಂಶ

ಪುತ್ತೂರಿನ ವಿವೇಕಾನಂದ ವಿದ್ಯಾಸಂಸ್ಥೆಗಳನ್ನು ಕಟ್ಟಿ ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸಿದ ಉರಿಮಜಲು ರಾಮ ಭಟ್ ಜನ್ಮದಿನದ ಪ್ರಯುಕ್ತ ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಹಿರಿಯ ಚೇತನಕ್ಕೆ ಗೌರವ ನಮನ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಪುತ್ತೂರುಪುತ್ತೂರಿನ ವಿವೇಕಾನಂದ ವಿದ್ಯಾಸಂಸ್ಥೆಗಳನ್ನು ಕಟ್ಟಿ ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸಿದ ಉರಿಮಜಲು ರಾಮ ಭಟ್ ಜನ್ಮದಿನದ ಪ್ರಯುಕ್ತ ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಹಿರಿಯ ಚೇತನಕ್ಕೆ ಗೌರವ ನಮನ ಸಲ್ಲಿಸಲಾಯಿತು. ಈ ಸಂದರ್ಭ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ ಮಾತನಾಡಿ, ವ್ಯಕ್ತಿ ನೆಲೆಯಲ್ಲಿ ಸಂಸ್ಥೆಗಳನ್ನು ಸ್ಥಾಪಿಸುವುದಕ್ಕಿಂತ ಸಾಂಸ್ಥಿಕ ನೆಲೆಯಲ್ಲಿ ಸಂಸ್ಥೆಯ ಸ್ಥಾಪನೆ ಮಾಡುವುದು ಅನುಕೂಲ ಎಂಬ ವಿಷಯವನ್ನು ಮನಗಂಡು ಪುತ್ತೂರು ಎಜುಕೇಶನ್ ಸೊಸೈಟಿ ಎಂಬ ಹೆಸರಿನೊಂದಿಗೆ ವಿವೇಕಾನಂದ ವಿದ್ಯಾಸಂಸ್ಥೆ ಸ್ಥಾಪನೆಗೊಂಡಿತು. ಇದರ ಅಂಗವಾಗಿ 1965 ರಲ್ಲಿ ಪ್ರಾರಂಭಗೊಂಡ ಮೊತ್ತಮೊದಲ ಸಂಸ್ಥೆ ವಿವೇಕಾನಂದ ಪದವಿಪೂರ್ವ ಕಾಲೇಜು ಎಂದರು.ಇವರು ಸಾಮಾಜಿಕ ಶೈಕ್ಷಣಿಕ ಕ್ಷೇತ್ರದಲ್ಲಿ ಹಲವು ದಶಕಗಳ ಕಾಲ ಸೇವೆ ಸಲ್ಲಿಸಿದರು. ಓರ್ವ ಶಾಸಕ, ಸಾಮಾಜಿಕ ನೇತಾರ, ಸಮಾಜದ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸುವ ಮೂಲಕ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ ತುರ್ತು ಪರಿಸ್ಥಿತಿಯ ಸಂದರ್ಭ ಜೈಲುವಾಸ ಅನುಭವಿಸಿದ್ದಾರೆ ಕಡಲತಡಿಯ ಭಾರ್ಗವ ಎಂದು ಖ್ಯಾತಿ ಹೊಂದಿರುವ ಶಿವರಾಮ ಕಾರಂತರ ಆತ್ಮೀಯ ಅನುಯಾಯಿಯಾಗಿದ್ದರು. ಇಂದು ವಿವೇಕಾನಂದ ವಿದ್ಯಾವರ್ಧಕ ಸಂಘ ಒಂದು ಹೆಮ್ಮರವಾಗಿ ಬೆಳೆದು ನಿಂತಿದೆ. ಇದರ ಹಿಂದಿನ ಪ್ರೇರಕ ಶಕ್ತಿ ಉರಿಮಜಲು ರಾಮ್ ಭಟ್‌ ಕಾರ್ಯಸ್ಮರಣೀಯ ಎಂದು ಹೇಳಿದರು.ವಿವೇಕಾನಂದ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ದೇವಿಪ್ರಸಾದ್,

ಉಪನ್ಯಾಸಕ- ಉಪನ್ಯಾಸಕೇತರ ವೃಂದದವರು, ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಪಾಲ್ಗೊಂಡರು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಶೈಕ್ಷಣಿಕ ಸಂಯೋಜಕ ಶ್ರೀವತ್ಸ ಸ್ವಾಗತಿಸಿ, ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಯ್ಯಪ್ಪನ ಮಾಲೆ ಧರಿಸಿದ ಬಾಲಕನ ಮೇಲೆ ಶಿಕ್ಷಕ ಹಲ್ಲೆ!
ತಂದೆಗೆ ಕಿರುಕುಳ ನೀಡದಂತೆ ಚೈತ್ರಾ ಕುಂದಾಪುರಗೆ ಆದೇಶ