)
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ನಗರದ ಅಂಬೇಡ್ಕರ್ ಭವನದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ವತಿಯಿಂದ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾನೂನು ಜಾರಿಗಾಗಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ತಾವು ನಡೆಸುತ್ತಿರುವ ರೈತ ಜಾಗೃತಿ ಯಾತ್ರೆಗೆ ಚಿಕ್ಕಬಳ್ಳಾಪುರದಲ್ಲಿ ರೈತಮುಖಂಡರು ನೀಡಿದ ಅಭೂತಪೂರ್ವ ಸ್ವಾಗತ ಸ್ವೀಕರಿಸಿದ ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ದೇಶದ ರೈತರು ಫೆ. 15 ರಂದು ಹಳ್ಳಿ ಹಳ್ಳಿಗಳಲ್ಲಿ ಅಮೆರಿಕಾದ ಒಪ್ಪಂದ ಪತ್ರ ಸುಡುವ ಚಳವಳಿ ನಡೆಸಬೇಕು ಎಂದು ಕರೆ ನೀಡಿದರು.ಹಿಂದೆ ಮನಮೋಹನ್ ಸಿಂಗ್ ಪ್ರಧಾನಿ ಆಗಿದ್ದಾಗ ಡಾ. ಸ್ವಾಮಿನಾಥನ್ ಅಧ್ಯಕ್ಷತೆಯಲ್ಲಿ ರೈತರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಸಮಿತಿ ರಚಿಸಿತು. ಈ ಸಮಿತಿ ತನ್ನ ವರದಿಯನ್ನು 2006ರಲ್ಲಿ ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಆದರೂ ವರದಿಯನ್ನು ಜಾರಿ ಮಾಡುವಲ್ಲಿ ಕಾಂಗ್ರೆಸ್ ಸೋತಿತು. 2014ರಲ್ಲಿ ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ತರುವ ಭರವಸೆ ನೀಡಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದರು. ಪ್ರಸ್ತುತ ೩ನೇ ಅವಧಿಗೆ ಪ್ರಧಾನಿ ಆದರೂ ಸ್ವಾಮಿನಾಥನ್ ವರದಿ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯಕ್ಕೆ ಮುಚ್ಚಳಿಕೆ ಬರೆದು ಕೊಟ್ಟಿದ್ದಾರೆ. ಹೀಗಾಗಿ ಮಾತುಕೊಟ್ಟು ಸೋತ ಸರ್ಕಾರವನ್ನು ಎಚ್ಚರಿಸಲು ದೇಶಾದ್ಯಂತ ರೈತ ಜಾಗೃತಿ ಯಾತ್ರೆ ಮಾಡುತ್ತಿದ್ದೇವೆ. ಹಳ್ಳಿ ಹಳ್ಳಿಗಳಲ್ಲಿ ರೈತರಿಂದ ಸಹಿ ಸಂಗ್ರಹ ಮಾಡಿ ಅದನ್ನು ಮಾರ್ಚ್ 19 ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ರೈತರ ಸಮಾವೇಶ ನಡೆಸಿ ಪ್ರಧಾನಿಗೆ ಸಲ್ಲಿಸಿ ಎಂಎಸ್ಪಿ ಕಾನೂನು ಜಾರಿ ಮಾಡಲು ಒತ್ತಾಯಿಸಲಾಗುವುದು. ಈ ಹೋರಾಟದಲ್ಲಿ ದೇಶದ ಎಲ್ಲಾ ರೈತರು ಭಾಗಿಯಾಗಬೇಕು ಎಂದು ಮನವಿ ಮಾಡಿದರು.
ಸ್ವಾತಂತ್ರ್ಯ ಬಂದು 78 ವರ್ಷ ಕಳೆದರೂ ರೈತರು ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಲಾಗದೆ ಕೃಷಿಯಿಂದ ವಲಸೆ ಹೋಗುತ್ತಿದ್ದಾರೆ. ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ದೊರೆಯದೆ ಸಾಲಗಾರರಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರೈತರ ಮಕ್ಕಳಿಗೆ ಹೆಣ್ಣು ಸಿಗುತ್ತಿಲ್ಲ. ಇವೆಲ್ಲಾ ಬೆಳವಣಿಗೆ ನೋಡಿದರೆ ಕೃಷಿ ಕ್ಷೇತ್ರ ಅವನತಿಯತ್ತ ಸಾಗುತ್ತಿದೆ ಎಂದು ಹೇಳಲು ನೋವಾಗುತ್ತಿದೆ ಎಂದರು.