ಸುಸ್ಥಿರ ಅಭಿವೃದ್ಧಿಗೆ ಎಐ ಬಳಸಿ: ಪ್ರಿಯಾಂಕ್‌

KannadaprabhaNewsNetwork |  
Published : Aug 06, 2026, 04:00 AM IST
Univercity

ಸಾರಾಂಶ

ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣಲ್ಲಿ ಆಯೋಜಿಸಿದ್ದ ಎಐ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಸಚಿವ ಪ್ರಿಯಾಂಕ್‌ ಖರ್ಗೆ ಉದ್ಘಾಟಿಸಿದರು. ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಕುಲಪತಿ ಪ್ರೊ.ಬಿ.ಭಗವಾನ್, ಬೆಂಗಳೂರು ನಗರ ವಿವಿ ಕುಲಪತಿ ಪ್ರೊ.ಬಿ.ರಮೇಶ್‌ ಇದ್ದರು.

 ಬೆಂಗಳೂರು :  ಸುಸ್ಥಿರ ಅಭಿವೃದ್ಧಿಗೆ ಕೃತಕ ಬುದ್ಧಿಮತ್ತೆ(ಎಐ) ಶಕ್ತಿವರ್ಧಕ ಆಗಬೇಕು. ವಿದ್ಯಾರ್ಥಿಗಳು, ವಿವಿಗಳು ಸಮಾಜದ ಸಮಸ್ಯೆಗಳಿಗೆ ಎಐ ಆಧಾರಿತ ಪರಿಹಾರಗಳನ್ನು ರೂಪಿಸಬೇಕು ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಸಲಹೆ ನೀಡಿದರು.

ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿವಿಯಲ್ಲಿರುವ ವೋಲ್ವರ್ ಹ್ಯಾಂಪ್ಟನ್-ಬೆಂಗಳೂರು ಸಂಶೋಧನೆ ಮತ್ತು ಅನ್ವೇಷಣೆ ಕೇಂದ್ರವು ಇಂಗ್ಲೆಂಡ್‌ನ ವೋಲ್ವರ್ ಹ್ಯಾಂಪ್ಟನ್ ವಿವಿ ಸಹಯೋಗದಲ್ಲಿ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣಲ್ಲಿ ಆಯೋಜಿಸಿದ್ದ ಕೃತಕ ಬುದ್ಧಿಮತ್ತೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸುಸ್ಥಿರ ಅಭಿವೃದ್ಧಿಗೆ ಎಐ ಶಕ್ತಿವರ್ಧಕವಾಗಬೇಕು

ಸುಸ್ಥಿರ ಅಭಿವೃದ್ಧಿಗೆ ಎಐ ಶಕ್ತಿವರ್ಧಕವಾಗಬೇಕು. ವಿದ್ಯಾರ್ಥಿಗಳು, ವಿವಿಗಳು ಸಮಾಜದ ಸಮಸ್ಯೆಗಳಿಗೆ ಎಐ ಆಧಾರಿತ ಪರಿಹಾರಗಳನ್ನು ಅಭಿವೃದ್ಧಿಪಡಿಸಬೇಕು. ಸಂಶೋಧನೆ, ನಾವೀನ್ಯತೆ ಮತ್ತು ಮೂಲಭೂತ ಜ್ಞಾನಕ್ಕೆ ಆದ್ಯತೆ ನೀಡಬೇಕು. ಕೃತಕ ಬುದ್ಧಿಮತ್ತೆಯನ್ನು ಜವಾಬ್ದಾರಿಯುತವಾಗಿ ಬಳಸುವ ಮೂಲಕ ಸಮಾಜಮುಖಿ ಅಭಿವೃದ್ಧಿಗೆ ವೇಗ ನೀಡಬೇಕು. ಮುಂದಿನ ತಲೆಮಾರಿನ ನವೋದ್ಯಮಿಗಳನ್ನು ರೂಪಿಸಬೇಕು ಎಂದು ಕರೆ ನೀಡಿದರು.

ಬಡತನ ನಿರ್ಮೂಲನೆ, ಉತ್ತಮ ಆರೋಗ್ಯ ಸೇವೆ, ಗುಣಮಟ್ಟದ ಶಿಕ್ಷಣ, ಅಸಮಾನತೆ ನಿವಾರಣೆ ಹಾಗೂ ಹವಾಮಾನ ಬದಲಾವಣೆಯಂತಹ ಜಾಗತಿಕ ಸವಾಲುಗಳನ್ನು ಎದುರಿಸುವಲ್ಲಿ ಇನ್ನೂ ಸಾಕಷ್ಟು ಅಂತರವಿದೆ. ಈ ಅಂತರವನ್ನು ಕಡಿಮೆ ಮಾಡುವಲ್ಲಿ ಕೃತಕ ಬುದ್ಧಿಮತ್ತೆ ಅಪೂರ್ವ ಅವಕಾಶವನ್ನು ಒದಗಿಸುತ್ತಿದ್ದು, ಅದನ್ನು ಮಾನವ ಕಲ್ಯಾಣದ ದೃಷ್ಟಿಯಿಂದ ಜವಾಬ್ದಾರಿಯುತವಾಗಿ ಬಳಸಬೇಕಾಗಿದೆ ಎಂದು ತಿಳಿಸಿದರು.

ಅತ್ಯಂತ ಶಕ್ತಿಯುತ ಸಾಧನೆ

ಕೃತಕ ಬುದ್ಧಿಮತ್ತೆ ರಕ್ಷಕನಲ್ಲ. ಅದಕ್ಕೆ ಆತ್ಮಸಾಕ್ಷಿ, ಧೈರ್ಯ ಅಥವಾ ಕರುಣೆ ಇಲ್ಲ. ಆದರೆ ಆತ್ಮಸಾಕ್ಷಿ, ಧೈರ್ಯ ಮತ್ತು ಕರುಣೆ ಹೊಂದಿರುವ ಮನುಷ್ಯನ ಕೈಯಲ್ಲಿ ಅದು ಅತ್ಯಂತ ಶಕ್ತಿಯುತ ಸಾಧನವಾಗುತ್ತದೆ. ಎಐ ನಮ್ಮ ಸಮಸ್ಯೆಗಳನ್ನು ಪರಿಹರಿಸಬಹುದೇ ಎಂಬುದಕ್ಕಿಂತ, ಸಮಾಜಕ್ಕೆ ಅತ್ಯಂತ ಅಗತ್ಯವಿರುವ ಸಮಸ್ಯೆಗಳ ಪರಿಹಾರಕ್ಕಾಗಿ ನಾವು ಅದನ್ನು ಎಷ್ಟು ಜವಾಬ್ದಾರಿಯಿಂದ ಬಳಸುತ್ತೇವೆ ಎಂಬುದೇ ಮುಖ್ಯ ಎಂದು ಅಭಿಪ್ರಾಯಪಟ್ಟರು. ರಾಯಲ್ ವೋಲ್ವರ್ ಹ್ಯಾಂಪ್ಟನ್ ಆಸ್ಪತ್ರೆಯ ನಿರ್ದೇಶಕ ಪ್ರೊ.ಟೋನಿ ವಿನ್ನೀತ್, ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಕುಲಪತಿ ಪ್ರೊ.ಬಿ.ಭಗವಾನ್, ಡಾ.ಮನಮೋಹನ್‌ಸಿಂಗ್‌ ಬೆಂಗಳೂರು ನಗರ ವಿವಿ ಕುಲಪತಿ ಪ್ರೊ.ಬಿ.ರಮೇಶ್‌ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಹೆಚ್ಚಿನ ಬೆಲೆಗೆ ಚಿನ್ನಾಭರಣ ಸೇಲ್‌ನೆಪದಲ್ಲಿ 5 ಕೋಟಿ ವಂಚನೆ : ಕೇಸ್‌
ಅಪಘಾತವಾಗಿದ್ದ ವಿದ್ಯಾರ್ಥಿನಿ ಸಾವು: ವಿದ್ಯಾರ್ಥಿಗಳ ಪ್ರತಿಭಟನೆ