ಕೃತಕ ಬುದ್ದಿಮತ್ತೆಯ ಸಮರ್ಥ ಬಳಕೆ ಮಾಡಿ

KannadaprabhaNewsNetwork |  
Published : Sep 29, 2026, 01:15 AM IST
್ಿಿ್ಿ್ | Kannada Prabha

ಸಾರಾಂಶ

ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಸಂಜೀವಕುಮಾರ ಮಾತನಾಡಿ, ಪ್ರವಾಸಿ ತಾಣಗಳಲ್ಲಿ ಅತಿಯಾದ ಜನದಟ್ಟಣೆಯನ್ನು ನಿಯಂತ್ರಿಸಲು ಮುನ್ಸೂಚನೆಗಳನ್ನು ನೀಡಲಿದೆ. ಯಾವುದೇ ಪ್ರದೇಶದ ಪ್ರವಾಸಿಗರು ಸ್ಥಳೀಯರೊಂದಿಗೆ ಸುಲಭವಾಗಿ ಸಂವಹನ ನಡೆಸಲು ಎಐ ಆಧಾರಿತ ರಿಯಲ್ ಟೈಮ್ ಅನುವಾದಕಗಳು ನೆರವಾಗುತ್ತವೆ. ಅಲ್ಲದೆ, ಪ್ರವಾಸಿ ತಾಣಗಳಲ್ಲಿನ ಮಾಲಿನ್ಯ ಮತ್ತು ಸಂಪನ್ಮೂಲ (ನೀರು, ವಿದ್ಯುತ್)ಗಳ ಬಳಕೆಯನ್ನು ಮೇಲ್ವಿಚಾರಣೆ ಮಾಡಲು ಎಐ ತಂತ್ರಜ್ಞಾನ ಬಳಕೆಯಾಗುತ್ತದೆ ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ತುಮಕೂರು

ಪ್ರವಾಸೋದ್ಯಮ ಅಭಿವೃದ್ಧಿಗೆ ಕೃತಕ ಬುದ್ದಿಮತ್ತೆಯನ್ನು ಸಮರ್ಥವಾಗಿ ಬಳಸಿಕೊಳ್ಳಬೇಕೆಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ. ಗೋಪಾಲ್ ಸಲಹೆ ನೀಡಿದರು.

ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಸಿದ್ದಗಂಗಾ ಮಠದಲ್ಲಿ ಡಿಜಿಟಲ್ ಕಾರ್ಯಸೂಚಿ ಮತ್ತು ಕೃತಕ ಬುದ್ದಿಮತ್ತೆ ಬಳಸಿ ಪ್ರವಾಸೋದ್ಯಮದ ಮರುಸೃಷ್ಟಿ ಎಂಬ ಸಂದೇಶದಡಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರುಕೃತಕ ಬುದ್ದಿಮತ್ತೆಯನ್ನು ಬಳಸಿಕೊಂಡು ಪ್ರವಾಸೋದ್ಯಮ ಎಂಬ ಮರವನ್ನು ಪೋಷಿಸುವುದರಿಂದ ಪ್ರವಾಸೋದ್ಯಮದ ಅಭಿವೃದ್ಧಿಯನ್ನಷ್ಟೇ ಅಲ್ಲದೆ, ಪ್ರಕೃತಿ ಮತ್ತು ತಂತ್ರಜ್ಞಾನದ ನಡುವಿನ ಸಮತೋಲನವನ್ನು ಸಾಧಿಸಬಹುದಾಗಿದೆ ಎಂದು ತಿಳಿಸಿದರು.

ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಸಂಜೀವಕುಮಾರ ಮಾತನಾಡಿ, ಪ್ರವಾಸಿ ತಾಣಗಳಲ್ಲಿ ಅತಿಯಾದ ಜನದಟ್ಟಣೆಯನ್ನು ನಿಯಂತ್ರಿಸಲು ಮುನ್ಸೂಚನೆಗಳನ್ನು ನೀಡಲಿದೆ. ಯಾವುದೇ ಪ್ರದೇಶದ ಪ್ರವಾಸಿಗರು ಸ್ಥಳೀಯರೊಂದಿಗೆ ಸುಲಭವಾಗಿ ಸಂವಹನ ನಡೆಸಲು ಎಐ ಆಧಾರಿತ ರಿಯಲ್ ಟೈಮ್ ಅನುವಾದಕಗಳು ನೆರವಾಗುತ್ತವೆ. ಅಲ್ಲದೆ, ಪ್ರವಾಸಿ ತಾಣಗಳಲ್ಲಿನ ಮಾಲಿನ್ಯ ಮತ್ತು ಸಂಪನ್ಮೂಲ (ನೀರು, ವಿದ್ಯುತ್)ಗಳ ಬಳಕೆಯನ್ನು ಮೇಲ್ವಿಚಾರಣೆ ಮಾಡಲು ಎಐ ತಂತ್ರಜ್ಞಾನ ಬಳಕೆಯಾಗುತ್ತದೆ ಎಂದು ತಿಳಿಸಿದರು.

ಸಿದ್ದಗಂಗಾ ಮಠದ ಉಪಾಧ್ಯಕ್ಷರಾದ ಶಿವಸಿದ್ದೇಶ್ವರ ಸ್ವಾಮಿಗಳು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಧುಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕ ವೇದಲಕ್ಷ್ಮಿ ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ಕೃತಕ ಬುದ್ದಿಮತ್ತೆಯ ಪ್ರಮುಖ ಕೊಡುಗೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಶ್ರೀ ಸಿದ್ದಾರ್ಥ ಇನ್ಸಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್‌ನ ಎಂ.ಬಿ.ಎ ಪ್ರಾಂಶುಪಾಲ ಡಾ: ಅಜಮುತ್ತ ಅವರು ಕಾರ್ಯಕ್ರಮ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು.

ಈ ಸಂದರ್ಭದಲ್ಲಿ ವಿಶ್ವ ಪ್ರವಾಸೋದ್ಯಮ ದಿನಚಾರಣೆಯ ಅಂಗವಾಗಿ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಃesಣ PPಖಿ, ರಂಗೋಲಿ ಸ್ಪರ್ಧೆ, ರಸ ಪ್ರಶ್ನೆ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ ಹಾಗೂ ಭಾಷಣಾ ಸ್ಪರ್ಧೆಯಲ್ಲಿ ವಿಜೇತರಾಗಿದ್ದ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನವನ್ನು ವಿತರಿಸಿ ಗೌರವಿಸಲಾಯಿತು.

ನಗರದ ಅರ್ಬನ್ ರೆಸಾರ್ಟ್ನಿಂದ ಸಿದ್ದಗಂಗಾ ಮಠದವರೆಗೆ ಕೃತಕ ಬುದ್ದಿಮತ್ತೆ ಬಳಸಿ ಪ್ರವಾಸೋದ್ಯಮದ ಮರುಸೃಷ್ಟಿ ಮಾಡುವ ಕುರಿತು ಜಾಗೃತಿ ಜಾಥಾ ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ಇಲಾಖೆಯ ಸಿಬ್ಬಂದಿ ಸೇರಿದಂತೆ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಾ. ಶ್ರೀಪರ್ಣಾ ಸಾಹಾಗೆ ಡಾ. ಅಪ್ಪಾಜಿ ನಾವೀನ್ಯತಾ ಪ್ರಶಸ್ತಿ
ಜ್ಞಾನೇಶ ಕುಮಾರ್ ರಾಜಿನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನೆ