ಸಿಎಸ್‌ಆರ್ ಹಣ ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಬಳಸಿ

KannadaprabhaNewsNetwork |  
Published : Nov 11, 2024, 11:46 PM IST
೧೧ಕೆಎಲ್‌ಆರ್-೭ಕೋಲಾರ ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದ ಮಹೇಂದ್ರ ಏರೋಸ್ಪೇಸ್ ಕಂಪನಿಯಲ್ಲಿ ತರಬೇತಿ ಕೇಂದ್ರ ಶಾಸಕ ಕೊತ್ತೂರು ಮಂಜುನಾಥ್ ಉದ್ಘಾಟಿಸಿ ಮಾತನಾಡಿದರು. | Kannada Prabha

ಸಾರಾಂಶ

ಉದ್ಯಮಗಳು ಸಿಎಸ್‌ಆರ್ ಅನುದಾನವನ್ನು ಕೌಶಲಾಭಿವೃದ್ಧಿಗೆ ಬಳಕೆ ಮಾಡಬೇಕಿದೆ, ಸಾಮಾಜಿಕ ಹೊಣೆಗಾರಿಕೆಗೆ ಬಳಕೆ ಮಾಡಬೇಕೆಂದು ಸರ್ಕಾರ ನಿರ್ದೇಶನ ನೀಡಿದೆ. ಅದರಡಿ ಈಗಾಗಲೇ ಸಾಕಷ್ಟು ಅನುದಾನ ಬಳಕೆಯಾಗುತ್ತಿದೆ. ಮತ್ತಷ್ಟು ಸಂಸ್ಥೆಗಳು ಸರ್ಕಾರಿ ಶಾಲೆಗಳ ಸುಧಾರಣೆಗೆ ಕೈಜೋಡಿಸಬೇಕು.

ಕನ್ನಡಪ್ರಭ ವಾರ್ತೆ ಕೋಲಾರರಾಜ್ಯ ಸರ್ಕಾರವು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಗೆ ಮತ್ತು ಪ್ರಗತಿಗೆ ಅಗತ್ಯವಾದ ಎಲ್ಲ ಸಹಕಾರ ಮತ್ತು ನೆರವನ್ನು ನೀಡಲಿದ್ದು ಕಾರ್ಪೋರೇಟ್ ಸಂಸ್ಥೆಗಳು ಮತ್ತು ಉದ್ಯಮ ಕ್ಷೇತ್ರವು ಸರ್ಕಾರದ ಜತೆಗೆ ಸಮಾಜದ ಪ್ರಗತಿಗೆ ಕೈಜೋಡಿಸಬೇಕು ಹಾಗೂ ತಮ್ಮ ಸಿಎಸ್‌ಆರ್ ಅನುದಾನವನ್ನು ಶಿಕ್ಷಣ ಮತ್ತು ಆರೋಗ್ಯಕ್ಕೆ ಬಳಕೆಯಾಗುವಂತಾಗಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದ ಮಹೇಂದ್ರ ಏರೋಸ್ಪೇಸ್ ಕಂಪನಿಯಲ್ಲಿ ತರಬೇತಿ ಕೇಂದ್ರ ಉದ್ಘಾಟಿಸಿ ಮಾತನಾಡಿ, ಶಿಕ್ಷಣ ವ್ಯವಸ್ಥೆಯ ಸುಧಾರಣೆಗೆ ಸರ್ಕಾರೇತರ ಸಂಸ್ಥೆಗಳು ಸಹ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.

ಸಾಕಷ್ಟು ಅನುದಾನ ಬಳಕೆ

ಉದ್ಯಮಗಳು ಸಿಎಸ್‌ಆರ್ ಅನುದಾನವನ್ನು ಕೌಶಲಾಭಿವೃದ್ಧಿಗೆ ಬಳಕೆ ಮಾಡಬೇಕಿದೆ, ಸಾಮಾಜಿಕ ಹೊಣೆಗಾರಿಕೆಗೆ ಬಳಕೆ ಮಾಡಬೇಕೆಂದು ಸರ್ಕಾರ ನಿರ್ದೇಶನ ನೀಡಿದೆ. ಅದರಡಿ ಈಗಾಗಲೇ ಸಾಕಷ್ಟು ಅನುದಾನ ಬಳಕೆಯಾಗುತ್ತಿದೆ. ಮತ್ತಷ್ಟು ಸಂಸ್ಥೆಗಳು ಸರ್ಕಾರಿ ಶಾಲೆಗಳ ಸುಧಾರಣೆಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.ಸ್ಥಳೀಯರಿಗೆ ಉದ್ಯೋಗ ನೀಡಿ

ಕೋಲಾರ ಜಿಲ್ಲೆಯಲ್ಲಿ ಹೆಚ್ಚಾಗಿ ಕೈಗಾರಿಕಾ ಪ್ರದೇಶಗಳನ್ನು ಗುರುತಿಸಲಾಗುತ್ತಿದೆ, ಈ ಭಾಗದಲ್ಲಿಯೂ ಸಹ ಕೈಗಾರಿಕಾ ಅಭಿವೃದ್ಧಿಗೆ ಪ್ರೋತ್ಸಾಹ ನೀಡಲಿದ್ದೇವೆ, ಇಲ್ಲಿನ ಕಂಪನಿಗಳು ಸ್ಥಳೀಯರಿಗೆ ಹೆಚ್ಚಿನ ಉದ್ಯೋಗ ಅವಕಾಶಗಳು ನೀಡಬೇಕು ಕಂಪನಿಯು ಉದ್ಯೋಗಿಗಳನ್ನು ನೇಮಿಸಿಕೊಳ್ಳುವಾಗ ಸ್ಥಳೀಯರಿಗೆ ಆದ್ಯತೆ ನೀಡುವ ಮಾನದಂಡ ಅನುಸರಿಸಬೇಕು. ನಿಮಗೆ ಅಗತ್ಯವಿರುವ ತಂತ್ರಜ್ಞರನ್ನು ಬೇಕಾದರೆ ಹೊರಗಿನಿಂದ ಕರೆತನ್ನಿ. ಉಳಿದ ಉದ್ಯೋಗಳಿಗೆ ಸ್ಥಳೀಯರನ್ನೇ ಆಯ್ಕೆ ಮಾಡಿಕೊಳ್ಳಿ ಎಂದರುವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ.ಶಿವಕುಮಾರ್, ಮಹೇಂದ್ರ ಏರೋಸ್ಪೇಸ್ ಮುಂಬೈ ವಿಭಾಗೀಯ ಮುಖ್ಯಸ್ಥ ವಿಜಯನಾಯರ್, ಸಿಒಒ ಕಾರ್ತಿಕ್ ಕೃಷ್ಣಮೂರ್ತಿ, ಕೇಂದ್ರದ ಮುಖ್ಯಸ್ಥ ನರೇಂದ್ರ ಶ್ಯಾನಬೋಗ್, ಕಂಪನಿಯ ಹೆಚ್.ಆರ್ ನಾಗರಾಜ್,ಶ್ರೀರಾಮ್ ಇದ್ದರು.

PREV

Recommended Stories

ತುಮಕೂರಲ್ಲಿ 20 ನವಿಲುಗಳ ಸಾವು
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ