ಸ್ವದೇಶಿ ಉತ್ಪನ್ನ ಬಳಸಿ ಪರದೇಶಿ ಪದಾರ್ಥ ವರ್ಜಿಸಿ

KannadaprabhaNewsNetwork |  
Published : Sep 21, 2025, 02:00 AM IST
್ಿ್ಿ | Kannada Prabha

ಸಾರಾಂಶ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ದೂರದೃಷ್ಟಿ ಚಿಂತನೆ, ಅವರ ನೇತೃತ್ವದ ಕೇಂದ್ರ ಸರ್ಕಾರದ ಮಹತ್ತರ ಯೋಜನೆಗಳಿಂದ ಇಂದು ಭಾರತ ಸರ್ವಾಂಗೀಣವಾಗಿ ಬೆಳವಣಿಗೆ ಆಗುತ್ತಿದೆ. ದೇಶವನ್ನು ಅಭದ್ರಗೊಳಿಸಲು ವಿದೇಶಿ ಶಕ್ತಿಗಳು ಎಷ್ಟೇ ಸಂಚು ರೂಪಿಸಿದರೂ ನಾವು ಸುಭದ್ರವಾಗಿರಲು ಮೋದಿ ಸರ್ಕಾರದ ದಿಟ್ಟ ಆಡಳಿತವೇ ಕಾರಣ ಎಂದು ಶಾಸಕ ಜ್ಯೋತಿಗಣೇಶ್ ಹೇಳಿದರು.

ಕನ್ನಡಪ್ರಭ ವಾರ್ತೆ, ತುಮಕೂರುಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ದೂರದೃಷ್ಟಿ ಚಿಂತನೆ, ಅವರ ನೇತೃತ್ವದ ಕೇಂದ್ರ ಸರ್ಕಾರದ ಮಹತ್ತರ ಯೋಜನೆಗಳಿಂದ ಇಂದು ಭಾರತ ಸರ್ವಾಂಗೀಣವಾಗಿ ಬೆಳವಣಿಗೆ ಆಗುತ್ತಿದೆ. ದೇಶವನ್ನು ಅಭದ್ರಗೊಳಿಸಲು ವಿದೇಶಿ ಶಕ್ತಿಗಳು ಎಷ್ಟೇ ಸಂಚು ರೂಪಿಸಿದರೂ ನಾವು ಸುಭದ್ರವಾಗಿರಲು ಮೋದಿ ಸರ್ಕಾರದ ದಿಟ್ಟ ಆಡಳಿತವೇ ಕಾರಣ ಎಂದು ಶಾಸಕ ಜ್ಯೋತಿಗಣೇಶ್ ಹೇಳಿದರು.ಬಿಜೆಪಿಯ ಸೇವಾ ಪಾಕ್ಷಿಕ್‌ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಯುವ ಮೋರ್ಚಾ ನೇತೃತ್ವದಲ್ಲಿ ಶನಿವಾರ ನಗರದಲ್ಲಿ ಹಮ್ಮಿಕೊಂಡಿದ್ದ ಮೋದಿ ವಿಕಾಸ್ ಮ್ಯಾರಥಾನ್‌ಗೆ ಚಾಲನೆ ನೀಡಿ, ವಿಶ್ವವಿದ್ಯಾಲಯ ಬಳಿಯಿಂದ ನಗಪಾಲಿಕೆ ಆವರಣದವರೆಗೆ ನಡೆದ ಜನ ಜಾಗೃತಿ ನಡಿಗೆ ಜಾಥಾದಲ್ಲಿ ಮಾತನಾಡಿದರುಶಾಸಕರು, ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನವಾದ ಈ ತಿಂಗಳ 17 ರಿಂದ ಗಾಂಧಿ ಜಯಂತಿಯ ಅಕ್ಟೋಬರ್ 2 ರವರೆಗೆ ಬಿಜೆಪಿಯಿಂದ ಸೇವಾ ಪಾಕ್ಷಿಕ ಹೆಸರಿನಲ್ಲಿ ದೇಶಾದ್ಯಂತ ಬಿಜೆಪಿಯಿಂದ ವಿವಿಧ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಇಂದು ಭಾರತ ವೇಗವಾಗಿ ಬೆಳವಣಿಗೆಯಾಗುತ್ತಿದ್ದು 2047 ರ ವೇಳೆಗೆ ಭಾರತ ವಿಶ್ವಗುರು ಆಗುವತ್ತ ಸಾಗುತ್ತಿದೆ. ದೇಶದ ಆರ್ಥಿಕತೆ ವಿಶ್ವದಲ್ಲಿ 3-4ಕ್ಕೆ ಸ್ಥಾನಕ್ಕೆ ಬಂದಿದೆ. 11 ವರ್ಷಗಳ ಮೋದಿ ಸರ್ಕಾರದ ಯೋಜನೆಗಳು ಹಾಗೂ ಉತ್ತಮ ಆಡಳಿತ ದೇಶವನ್ನು ಸುಭದ್ರವಾಗಿಸಿದೆ. ದೇಶದ ಮತ್ತಷ್ಟು ಪ್ರಗತಿಗಾಗಿ ಎಲ್ಲರೂಮೋದಿ ಸರ್ಕಾರಕ್ಕೆ ಬಲ ತುಂಬಬೇಕು ಎಂದು ಜ್ಯೋತಿಗಣೇಶ್ ಹೇಳಿದರು.ಮೆರಾಥಾನ್‌ನಲ್ಲಿ ಭಾಗವಹಿಸಿದ್ದ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ ಮಾತನಾಡಿ, ಪ್ರಧಾನಿ ಮೋದಿಯವರ ಜನ್ಮದಿಂದ ಗಾಂಧಿ ಜಯಂತಿವರೆಗೆ ಜಿಲ್ಲೆಯಾದ್ಯಂತ ಎಲ್ಲಾ ವಿಧಾನಸಭಾಕ್ಷೇತ್ರ ವ್ಯಾಪ್ತಿಯಲ್ಲಿ ಸೇವಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಈ ದಿನ ಸ್ವದೇಶ ಪದಾರ್ಥಗಳನ್ನೇ ಬಳಸಿ ಸ್ಥಳೀಯ ಉತ್ಪಾದನೆಗಳಿಗೆ ಬೆಂಬಲ ನೀಡುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮ್ಯಾರಾಥಾನ್ ಹಮ್ಮಿಕೊಳ್ಳಲಾಗಿದೆ ಎಂದರು.ಸ್ವದೇಶಿ ಉತ್ಪನ್ನಗಳನ್ನು ಹೆಚ್ಚೆಚ್ಚು ಬಳಿಸಿ, ವಿದೇಶಿ ಉತ್ಪನ್ನಗಳ ಬಳಕೆ ಕಡಿಮೆ ಮಾಡಿ ದೇಶೀಯ ಉತ್ಪಾದನೆಗಳನ್ನು ಪ್ರೋತ್ಸಾಹಿಸಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ನವಚೇತನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ್‌ಗೌಡ, ಕಾರ್ಯದರ್ಶಿ ಎಚ್.ಎಂ.ರವಿಶಯ್ಯ, ನಗರ ಅಧ್ಯಕ್ಷ ಟಿ.ಕೆ.ಧನುಷ್, ಟಿ.ಎಚ್.ಹನುಮಂತರಾಜು, ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ವೇದಮೂರ್ತಿ, ಜಿಲ್ಲಾ ವಕ್ತಾರ ಟಿ.ಆರ್.ಸದಾಶಿವಯ್ಯ, ಮುಖಂಡರಾದ ಸತ್ಯಮಂಗಲ ಜಗದೀಶ್, ಶಂಕರ್, ಡಿ.ಆರ್.ಬಸವರಾಜು, ಮಂಜುನಾಥ್, ಮನೋಹರಗೌಡ, ವಿರೂಪಾಕ್ಷಪ್ಪ, ಗಣೇಶ್‌ಪ್ರಸಾದ್, ವಿ.ರಕ್ಷಿತ್, ಜ್ಯೋತಿತಿಪ್ಪೇಸ್ವಾಮಿ, ಬಂಬೂ ಮೋಹನ್, ಲತಾಬಾಬು, ಅಂಜನಮೂರ್ತಿ, ಜೆ.ಜಗದೀಶ್, ಮರಿತಿಮ್ಮಯ್ಯ, ಸಿದ್ಧಲಿಂಗಪ್ಪ, ಅಕ್ಷಯ್‌ಚೌಧರಿ, ಹನುಮಂತರಾಜು, ಗಂಗೇಶ್, ರವಿ ಚೆಂಗಾವರ, ಲೋಹಿತ್, ಹೊಯ್ಸಳ ಸೇರಿದಂತೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳಿಗೆ ಮ್ಯಾರಾಥಾನ್‌ನಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಲು ಸಾಲು ರಜೆ, ಪ್ರವಾಸಿ ತಾಣ ರಷ್‌
ಭೂಮಿ ಮಾರಿದ ಇನ್ಫಿ ಬಗ್ಗೆ ಕಾರ್ತಿ ತೀವ್ರ ಆಕ್ರೋಶ