ಸದುದ್ದೇಶಗಳಿಗೆ ಮಾತ್ರ ಮೊಬೈಲ್ ಬಳಕೆ ಮಾಡಿ

KannadaprabhaNewsNetwork |  
Published : Sep 02, 2024, 02:02 AM IST
ತುಮಕೂರು ಗ್ರಾಮಾಂತರ ತಾಲೂಕಿನ ಊರುಕೆರೆ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಚಾಲನೆ ನೀಡಲಾಯಿತು. | Kannada Prabha

ಸಾರಾಂಶ

ಪಠ್ಯಕ್ಕೆ ಸಂಬಂಧಿಸಿದ ಉತ್ತಮ ವಿಚಾರ ಸೇರಿದಂತೆ ಸದುದ್ದೇಶಗಳಿಗೆ ಮಾತ್ರ ಮೊಬೈಲ್ ಬಳಕೆ ಮಾಡಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ನ್ಯಾಯಾಧೀಶ ನೂರುನ್ನೀಸಾ ಕರೆ ನೀಡಿದರು.

ತುಮಕೂರು: ಪಠ್ಯಕ್ಕೆ ಸಂಬಂಧಿಸಿದ ಉತ್ತಮ ವಿಚಾರ ಸೇರಿದಂತೆ ಸದುದ್ದೇಶಗಳಿಗೆ ಮಾತ್ರ ಮೊಬೈಲ್ ಬಳಕೆ ಮಾಡಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ನ್ಯಾಯಾಧೀಶ ನೂರುನ್ನೀಸಾ ಕರೆ ನೀಡಿದರು. ನಗರದ ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಲಯ, ತುಮಕೂರು ತಾಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ತುಮಕೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನೆ ಹಾಗೂ ಊರುಕೆರೆ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಊರುಕೆರೆ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ-೨೦೨೪ರ ಪ್ರಯುಕ್ತ ಭಾನುವಾರ ಹಮ್ಮಿಕೊಂಡಿದ್ದ ತಾಯಿಯ ಹೆಸರಿನಲ್ಲಿ ಗಿಡನೆಡುವ ಮತ್ತು ಪ್ರತಿಜ್ಞಾವಿಧಿ ಬೋಧಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಶಾಲಾ-ಕಾಲೇಜಿನ ಮಕ್ಕಳಿಗೆ ಪೋಕ್ಸೋ ಕಾಯ್ದೆ, ಜೀವನದ ಮೌಲ್ಯಗಳ ಬಗ್ಗೆ ಶಿಕ್ಷಕರು, ಪೋಷಕರು ತಿಳುವಳಿಕೆ ನೀಡಬೇಕು. ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಂ.ಎಲ್. ಚೇತನ್‌ಕುಮಾರ್ ಮಾತನಾಡಿ, ಗರ್ಭಿಣಿ, ಬಾಣಂತಿ ಹಾಗೂ ಕಿಶೋರಿಯರು ಪೌಷ್ಟಿಕಯುಕ್ತ ಆಹಾರವನ್ನು ಸೇವಿಸಬೇಕು. ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಬೇಕು. ಮಕ್ಕಳಿಗೆ ಸಂಸ್ಕಾರದ ಬಗ್ಗೆ ಕಲಿಸಬೇಕು. ಮಕ್ಕಳು ಮೊಬೈಲ್‌ ಗೀಳಿಗೆ ಬೀಳದಂತೆ ಪಾಲಕರು ಎಚ್ಚರವಹಿಸಬೇಕು. ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಮಕ್ಕಳನ್ನು ಪ್ರೋತ್ಸಾಹಿಸಬೇಕು. ಅವರ ಆಸಕ್ತಿಗನುಗುಣವಾಗಿ ಶಿಕ್ಷಣ ನೀಡಲು ಮುಂದಾಗಬೇಕು ಎಂದು ತಿಳಿಸಿದರು. ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹರ್ಷಕುಮಾರ್ ಮಾತನಾಡಿದರು. ಕಾರ್ಯಕ್ರಮ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ದಿನೇಶ ಆರ್.ಎಂ., ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಶಿಧರ ಪಿ., ಊರುಕೆರೆ ಪಂಚಾಯತಿ ಪಿಡಿಓ ರವಿಕುಮಾರ್, ಅಧ್ಯಕ್ಷೆ ಗಂಗಮ್ಮ, ಊರುಕೆರೆ ಸರ್ಕಾರಿ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲ ತ್ರಿವೇಣಿ, ವೃತ್ತ ಮೇಲ್ವಿಚಾರಕಿ ಲಕ್ಷö್ಮವ್ವ ಜೆ.ಸಿ., ಪೋಷಣ್ ಅಭಿಯಾನದ ಜಿಲ್ಲಾ ಸಂಯೋಜಕರಾದ ರಂಜಿತಾ,. ತುಮಕೂರು ಗ್ರಾಮಾಂತರ ತಾಲ್ಲೂಕು ಸಂಯೋಜಕ ಶಶಿಕುಮಾರ್ ಎಸ್, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಹಾಗೂ ಗರ್ಭಿಣಿ ಬಾಣಂತಿಯರು, ಕಿಶೋರಿಯರು, ಶಾಲಾ-ಕಾಲೇಜು ಮಕ್ಕಳು ಭಾಗವಹಿಸಿದ್ದರು.

PREV

Recommended Stories

ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಕಮ್ಮಿ ಫಲಿತಾಂಶ ಬಂದರೆ ಶಿಕ್ಷಕರ ವೇತನ ಕಟ್ ಇಲ್ಲ