ಆರೋಗ್ಯ ಕ್ಷೇತ್ರದಲ್ಲಿ ಎಐ ಬಳಕೆ ಅವಶ್ಯ: ಸಚಿವ ಡಾ. ಶರಣ ಪ್ರಕಾಶ್

KannadaprabhaNewsNetwork |  
Published : Jun 27, 2025, 02:03 AM IST
ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ 30ನೇ ಸಂಸ್ಥಾಪನಾ ದಿನಾಚರಣೆಯನ್ನು ಸಚಿವ ಡಾ. ಶರಣ ಪ್ರಕಾಶ ಪಾಟೀಲ್ ಉದ್ಘಾಟಿಸಿದರು. ಅವದೂತ ವಿನಯ್‌ ಗುರೂಜಿ, ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಉಪ ಕುಲಪತಿ ಡಾ. ಭಗವಾನ್‌, ಪೌಷ್ಟಿಕ ತಜ್ಞ ಡಾ. ಗೌರಿ ರೊಕ್ಕಮ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. | Kannada Prabha

ಸಾರಾಂಶ

ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಚಾಲಿತ ರೋಗ ನಿರ್ಣಯ ತಂತ್ರಜ್ಞಾನ, ಡಿಜಿಟಲ್ ಆರೋಗ್ಯ, ಟೆಲಿಮೆಡಿಸಿನ್‌ಗಳು ಸಮರ್ಪಕವಾಗಿ ಅಳವಡಿಸಿಕೊಳ್ಳಬೇಕಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್‌ ಪಾಟೀಲ್‌ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಚಾಲಿತ ರೋಗ ನಿರ್ಣಯ ತಂತ್ರಜ್ಞಾನ, ಡಿಜಿಟಲ್ ಆರೋಗ್ಯ, ಟೆಲಿಮೆಡಿಸಿನ್‌ಗಳು ಸಮರ್ಪಕವಾಗಿ ಅಳವಡಿಸಿಕೊಳ್ಳಬೇಕಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್‌ ಪಾಟೀಲ್‌ ಹೇಳಿದ್ದಾರೆ.

ಗುರುವಾರ ನಗರದ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ 30ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ವೈದ್ಯಕೀಯ ಸೇವೆಗಳ ಕಾರ್ಯದಕ್ಷತೆ ಹೆಚ್ಚಲು, ಕಡಿಮೆ ಅವಧಿಯಲ್ಲಿ ಹೆಚ್ಚು ಜನರಿಗೆ ಮತ್ತು ಹೆಚ್ಚು ನಿಖರವಾಗಿ ಗುಣಮಟ್ಟದ ಸೇವೆ ಒದಗಿಸಲು ಆಧುನಿಕ ತಂತ್ರಜ್ಞಾನದ ಬಳಕೆ ಅವಶ್ಯಕವಾಗಿದೆ. ಲಭ್ಯವಿರುವ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸುವ ಜೊತೆಗೆ ನಮ್ಮ ವ್ಯವಸ್ಥೆಗೆ ಪೂರಕವಾದ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಿ ಅಳವಡಿಸಿಕೊಳ್ಳಬೇಕು ಎಂದರು.

ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳಲ್ಲಿ ವಿವರಿಸಿರುವ ಜಾಗತಿಕ ಆದ್ಯತೆಗಳ ಗುರಿಯನ್ನು ತಲುಪುವ ನಿಟ್ಟಿನಲ್ಲಿ ಜನರಿಗೆ ಉತ್ತಮ ಆರೋಗ್ಯ, ಯೋಗಕ್ಷೇಮ, ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಪ್ರಯತ್ನಿಸುತ್ತಿದೆ. ಆರೋಗ್ಯ ಮತ್ತು ಶಿಕ್ಷಣ ಕೇವಲ ಗುರಿಗಳಲ್ಲ. ಅವು ಪ್ರತಿಯೊಬ್ಬ ನಾಗರಿಕನ ಗೌರವಯುತ ಜೀವನಕ್ಕೆ ನೀಡಬೇಕಾದ ಮೂಲಭೂತ ಹಕ್ಕುಗಳಾಗಿವೆ. ರಾಜೀವ್ ಗಾಂಧಿ ವಿವಿಯು ನಾವೀನ್ಯತೆಗಳನ್ನು ಅಳವಡಿಸಿಕೊಳ್ಳುವ ಜೊತೆಗೆ ಸಾರ್ವಜನಿಕರ ಅಗತ್ಯತೆಗಳನ್ನು ಪೂರೈಸುತ್ತಿದೆ ಎಂದು ಶರಣಪ್ರಕಾಶ್‌ ಪಾಟೀಲ್‌ ವಿವರಿಸಿದರು.

ಅವದೂತ ವಿನಯ್‌ ಗುರೂಜಿ ಮಾತನಾಡಿ, ಒತ್ತಡರಹಿತ ಜೀವನಕ್ಕೆ ಆಧ್ಯಾತ್ಮಿಕತೆ ಅಗತ್ಯ. ಇದರಿಂದ ಮನಸ್ಸು, ದೇಹ ಚಟುವಟಿಕೆಯಿಂದ ಇದ್ದು, ಗುರಿ ಸಾಧನೆಗಳಿಗೆ ದಾರಿ ಮಾಡಿ ಕೊಡುತ್ತದೆ. ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಆರೋಗ್ಯಕರ ಜೀವನ ಶೈಲಿ ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ಭಗವಾನ್‌, ಪೌಷ್ಟಿಕ ತಜ್ಞ ಡಾ. ಗೌರಿ ರೊಕ್ಕಮ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಪೋಟೋ...ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ 30ನೇ ಸಂಸ್ಥಾಪನಾ ದಿನಾಚರಣೆಯನ್ನು ಸಚಿವ ಡಾ. ಶರಣ ಪ್ರಕಾಶ ಪಾಟೀಲ್ ಉದ್ಘಾಟಿಸಿದರು. ಅವದೂತ ವಿನಯ್‌ ಗುರೂಜಿ, ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಉಪ ಕುಲಪತಿ ಡಾ. ಭಗವಾನ್‌, ಪೌಷ್ಟಿಕ ತಜ್ಞ ಡಾ. ಗೌರಿ ರೊಕ್ಕಮ್ ಮತ್ತಿತರರು ಇದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ