ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಮಂಡ್ಯ ಘಟಕದ ಸಭಾಂಗಣದಲ್ಲಿ ಜಿ.ವಿ.ಕೆ.ಪ್ರತಿಷ್ಠಾನದ 9ನೇ ವರ್ಷದ ವಾರ್ಷಿಕೋತ್ಸವದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರಸ್ತುತ ಸನ್ನಿವೇಶದಲ್ಲಿ ಕೌಶಲ್ಯತೆ ಶಿಕ್ಷಣ ಅವಶ್ಯಕವಾಗಿದ್ದು, ಕೈಗಳಲ್ಲಿ ಕೆಲಸವಿದ್ದರೆ ಎಲ್ಲಿ ಬೇಕಾದರೂ ಜೀವನ ರೂಪಿಸಿಕೊಳ್ಳಬಹುದು. ಆದ್ದರಿಂದ ಕೌಶಲ್ಯ ಶಿಕ್ಷಣದ ಕಡೆ ವಿದ್ಯಾರ್ಥಿಗಳು ಗಮನ ಹರಿಸಬೇಕು ಎಂದು ಸಲಹೆ ನೀಡಿದರು. ಜಿವಿಕೆ ಪ್ರತಿಷ್ಠಾನ ಕಳೆದ 9 ವರ್ಷಗಳಿಂದ ನಾನಾ ಸರ್ಕಾರಿ ಶಾಲೆಗಳಿಗೆ ಕುರ್ಚಿ, ಟೇಬಲ್, ಮಕ್ಕಳು ಆಟ ಆಡುವ ರೌಂಡ್ ಟೇಬಲ್, ಧ್ವನಿವರ್ಧಕ ಬ್ಯಾಂಡ್ ಸೆಟ್ ಸೇರಿದಂತೆ ಅಗತ್ಯವುಳ್ಳ ಪರಿಕರಗಳನ್ನು ವಿತರಿಸುತ್ತಾ ಬರುತ್ತಿದೆ. ಸರ್ಕಾರಿ ಶಾಲೆಗಳು ಉಳಿಯಬೇಕೆಂಬ ಉದ್ದೇಶದಿಂದ ಪ್ರತಿಷ್ಠಾನ ಉತ್ತಮವಾಗಿ ಕೆಲಸ ಮಾಡುತ್ತಿದೆ. ಇಂತಹ ಪ್ರತಿಷ್ಠಾನದಿಂದ ಪ್ರಶಸ್ತಿಗೆ ಭಾಜನರಾಗಿರುವವರು ಅಭಿಮಾನದ ಪ್ರತೀಕ ಎಂದರು.ಕೋಟ್ಯಂತರ ಆಸ್ತಿ ಇದ್ದವರು ಸಮಾಜ ಸೇವೆ ಮಾಡಲು ಹಿಂದು ಮುಂದೆ ನೋಡುತ್ತಾರೆ. ಆದರೆ, ವಾಸು ಅವರು ಸಾಮಾನ್ಯರಲ್ಲಿ ಸಾಮಾನ್ಯರ ಕಾಯಕ ಜೀವಿಯಾಗಿ ಸಮಾಜ ಸೇವೆ ಮಾಡುತ್ತಿದ್ದಾರೆ. ಇಂತಹ ಮನಸ್ಸು ಎಲ್ಲರಿಗೂ ಬರುವುದಿಲ್ಲ. ಪೂರ್ವಿಕರ ಸಂಸ್ಕಾರ ಇದ್ದರೆ ಮಾತ್ರ ಇಂತಹ ಸಮಾಜಮುಖಿ ಸೇವೆ ಮಾಡಲು ಸಾಧ್ಯ ಎಂದರು.
ಅಂಗವಿಕಲರ ಶಕ್ತಿ ದೇಶಕ್ಕೆ ಬೇಕು ಎಂದು ಪೋಷಕರು ಮಕ್ಕಳನ್ನು ಬೆಳೆಸಬೇಕು. ಬೀದಿಯಲ್ಲಿ ಅಥವಾ ಹೊರಗಡೆ ಎಲ್ಲೂ ಬಿಡಬಾರದು. ನಿಮ್ಮ ಕೈಯಲ್ಲಿ ಆಗಲಿಲ್ಲ ಅಂದರೆ ಸಮಾಜ ಹಾಗೂ ಸರ್ಕಾರ ಜೊತೆ ಇದೆ ಎಂದು ತಿಳಿದು ಅಂಗವಿಕಲ ಮಕ್ಕಳನ್ನು ಬೆಳೆಸಿ, ಮನಸ್ಸು,ಧೈರ್ಯ, ಛಲ ಇದ್ದರೆ ಏನು ಬೇಕಾದರೂ ಸಾಧನೆ ಮಾಡಬಹುದು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕೋಶಾಧ್ಯಕ್ಷ ಬಿ.ಎಂ.ಅಪ್ಪಾಜಪ್ಪ, ಜಿವಿಕೆ ಪ್ರತಿಷ್ಠಾನದ ಅಧ್ಯಕ್ಷ ಆರ್.ವಾಸು, ಸುನೀತಮಣಿ, ವಿಕಸನ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಮಹೇಶ್ ಚಂದ್ರಗುರು, ಅಖಿಲ ಕರ್ನಾಟಕ ವಿಶ್ವಕರ್ಮ ಸಮಾಜದ ಮಳವಳ್ಳಿ ಶ್ರೀನಿವಾಸ ಸೇರಿದಂತೆ ಇತರರು ಹಾಜರಿದ್ದರು.