ಕನ್ನಡಪ್ರಭ ವಾರ್ತೆ ಬಾಗಲಕೋಟೆ
ನಗರದ ಬಿವಿವಿ ಸಂಘದ ಮಿನಿ ಸಭಾಭವನದಲ್ಲಿ ಬಿಜೆಪಿ ಬಾಗಲಕೋಟೆ ಮತಕ್ಷೇತ್ರದಿಂದ ಹಮ್ಮಿಕೊಂಡಿದ್ದ ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನದಲ್ಲಿ ಸ್ವದೇಶಿ ಬಳಸಿ ದೇಶ ಉಳಿಸಿ-ಪ್ರತಿ ಮನೆಮನೆಯೂ ಸ್ವದೇಶಿ ಎಂಬ ಅಭಿಯಾನದ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದರು.
ನಮ್ಮ ಸದಸ್ಯರು ಕಾರ್ಯಕರ್ತರು ಪ್ರತಿ ಮನೆಗೂ ತೆರಳಿ ಸ್ವದೇಶಿ ವಸ್ತುಗಳ ಬಳಕೆ ಬಗ್ಗೆ ಜಾಗೃತಿ ಮೂಡಿಸುವ ಅಭಿಯಾನವನ್ನು ಎಲ್ಲರೂ ಸೇರಿ ಯಶಸ್ವಿಗೊಳಿಸೋಣ. ಭಾರತ ಸಮೃದ್ಧ ರಾಷ್ಟ್ರ, ವಿಶ್ವದಲ್ಲಿ ಇಂದು ತನ್ನದೆ ಆದ ಛಾಪು ಮೂಡಿಸುತ್ತಿದೆ. ಆಮದು ಕಡಿಮೆಯಾಗಿ ರಪ್ತು ಜಾಸ್ತಿಯಾಗಬೇಕು. ನಾವೆಲ್ಲರೂ ಸ್ವದೇಶಿ ಉತ್ಪನ್ನಗಳ ಬಳಕೆಗೆ ಧ್ವನಿಯಾಗಬೇಕು. ಮನೆಗಳಲ್ಲಿ ಬಳಸುವ ವಸ್ತು ಸ್ವದೇಶಿ ಇರುವಂತೆ, ಸ್ಥಳೀಯ ಉತ್ಪನ್ನವನ್ನೇ ಖರಿದಿಸುವಂತೆ ಗಮನಹರಿಸಬೇಕು ಎಂದು ಸಲಹೆ ನೀಡಿದರು.ಅಧ್ಯಕ್ಷತೆ ವಹಿಸಿದ್ದ ಮಾಜಿ ಶಾಸಕ ಡಾ,ವೀರಣ್ಣ ಚರಂತಿಮಠ ಮಾತನಾಡಿ, ಏಕ್ ಭಾರತ ಶ್ರೇಷ್ಠ ಭಾರತ, ಆತ್ಮ ನಿರ್ಭರ ಭಾರತ ಹಾಗೂ ಮೇಕ್ ಇನ್ ಇಂಡಿಯಾ ಮೂಲಕ ಸ್ವಾಭಿಮಾನಿ-ಸ್ವಾವಲಂಬಿ ಭಾರತ ನಿರ್ಮಾಣದ ಕನಸನ್ನು ಪ್ರಧಾನಿ ನರೇಂದ್ರ ಮೋದಿ ಬಿತ್ತಿದರು. ದೇಶದ ರಕ್ಷಣಾ ವ್ಯವಸ್ಥೆಯಲ್ಲಿ ಸೇನೆಯ ಶಸ್ತ್ರಾಸ್ತ್ರಗಳಲ್ಲಿ ಭಾರತ ಆತ್ಮ ನಿರ್ಭರವಾಗಿದೆ. ಭಾರತದ ಸರ್ವಾಂಗೀಣ ಅಭಿವೃದ್ಧಿಗೆ ಸ್ವದೇಶಿ ವಸ್ತುಗಳ ಬಳಕೆ ಅಗತ್ಯವಾಗಿದೆ. ಸ್ವದೇಶಿ ಸಂಕಲ್ಪದ ಕರೆಯ ಮೇರೆಗೆ ನಡೆಯಲಿರುವ ಆತ್ಮ ನಿರ್ಭರ ಭಾರತ ಸ್ವದೇಶಿ ವಸ್ತು ಬಳಸಿ ಅಭಿಯಾನದಲ್ಲಿ ಎಲ್ಲ ಕಾರ್ಯಕರ್ತರು ತೊಡಗಿಸಿಕೊಂಡು ಜನಜಾಗೃತಿ ಮೂಡಿಸೋಣ ಎಂದು ಹೇಳಿದರು.
ಪ್ರತಿಜ್ಞೆ: ಆತ್ಮ ನಿರ್ಭರ ಭಾರತದ ಸ್ವದೇಶಿ ಬಳಕೆಯ ಪ್ರತಿಜ್ಞೆ ಸ್ವೀಕರಿಸಲಾಯಿತು.