ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಚಿತ್ರದುರ್ಗ ನಗರದಲ್ಲಿ ನಡೆಯುತ್ತಿರುವ ಸ್ವದೇಶಿ ಮೇಳದ ಎರಡನೇ ದಿನವಾದ ಗುರುವಾರ ನಡೆದ ನಿತ್ಯ ಬಳಕೆ ವಸ್ತುಗಳ ತಯಾರಿಕಾ ಶಿಬಿರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಮಾನದಲ್ಲಿ ಬಹುತೇಕ ಜನತೆ ಅಂಗಡಿಯಲ್ಲಿ ತಯಾರಾದ ವಸ್ತುಗಳನ್ನು ಹೆಚ್ಚಾಗಿ ಬಳಕೆ ಮಾಡುತ್ತಾರೆ. ಆದರೆ ನಮ್ಮ ಮನೆಯಲ್ಲಿಯೇ ಇರುವ ವಸ್ತುಗಳನ್ನು ಬಳಕೆ ಮಾಡಿಕೊಂಡು ವಿವಿಧ ರೀತಿಯ ವಸ್ತುಗಳನ್ನು ತಯಾರು ಮಾಡಬಹುದಾಗಿದೆ. ಅದರೆ ಇದಕ್ಕೆ ಯಾರೂ ಸಹ ಮನಸ್ಸು ಮಾಡುತ್ತಿಲ್ಲ. ನಾವುಗಳು ಸಾಧ್ಯವಾದಷ್ಟು ಅಂಗಡಿಯಿಂದ ವಸ್ತುಗಳನ್ನು ತರದೆ ನಮ್ಮ ಮನೆಯಲ್ಲಿಯೇ ಇರುವoತಹ ವಸ್ತುಗಳನ್ನು ಬಳಕೆ ಮಾಡಿಕೊಂಡು ನಮಗೆ ಅಗತ್ಯವಾಗಿ ಬೇಕಾದ ವಸ್ತುಗಳನ್ನು ನಿರ್ಮಾಣ ಮಾಡಿಕೊಳ್ಳಬೇಕಿದೆ ಎಂದರು.ಪ್ರಕೃತಿ ನಮಗೆ ಬೇಕಾದ ಎಲ್ಲಾ ರೀತಿಯ ವಸ್ತುಗಳನ್ನು ನೀಡಿದೆ. ಅದನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಂಡು ನಮ್ಮ ದಿನ ನಿತ್ಯದ ವಸ್ತುಗಳನ್ನು ನಿರ್ಮಾಣ ಮಾಡುವುದರ ಮೂಲಕ ಸ್ವದೇಶಿ ವಸ್ತುಗಳನ್ನು ಬಳಕೆ ಮಾಡುವುದನ್ನು ಕಲಿಯಬೇಕಿದೆ.ಹಿಂದಿನ ಕಾಲದವರು ಯಾರೂ ಸಹ ಅಂಗಡಿಗಳಿಂದ ವಸ್ತುಗಳನ್ನು ಖರೀದಿ ಮಾಡುತ್ತಿರಲಿಲ್ಲ. ಎಲ್ಲವನ್ನು ಸಹ ಮನೆಯಿಂದಲೇ ತಯಾರು ಮಾಡಿಕೊಳ್ಳುತ್ತಿದ್ದರು. ಆದರೆ ಕಾಲ ಬದಲಾದಂತೆ ಜನ ತಮ್ಮ ಅನುಕೂಲಕ್ಕೆ ತಕ್ಕಂತೆ ಮಾರ್ಪಾಡು ಮಾಡಿಕೊಳ್ಳುತ್ತ ವಿವಿಧ ಕಂಪನಿಗಳ ಮೊರೆ ಹೋಗುತ್ತಿದ್ದಾರೆ ಎಂದರು.