ಸರ್ಕಾರಿ ಆಸ್ತಿ ಕಾವಲಿಗೆ ಲ್ಯಾಂಡ್ ಬೀಟ್ ತಂತ್ರಾಂಶ ಬಳಕೆ: ಡಾ.ಎಂ.ವಿ.ವೆಂಕಟೇಶ್‌

KannadaprabhaNewsNetwork |  
Published : Feb 29, 2024, 02:01 AM IST
ಕ್ಯಾಪ್ಷನಃ28ಕೆಡಿವಿಜಿ34, 35ಃದಾವಣಗೆರೆಯ ದೊಡ್ಡಬಾತಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಭೇಟಿ ನೀಡಿ ಅಲ್ಲಿನ ಸರ್ವೆ ನಂಬರ್ 34 ರಲ್ಲಿನ ಸರ್ಕಾರಿ ಸ್ಮಶಾನದ ಜಮೀನನ್ನು ಸ್ವತಃ ಆಪ್ ಮೂಲಕ ಸರ್ವೆ ಮಾಡಿ ವೀಕ್ಷಿಸಿದರು. | Kannada Prabha

ಸಾರಾಂಶ

ದಾವಣಗೆರೆಯ ದೊಡ್ಡಬಾತಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಭೇಟಿ ನೀಡಿ ಅಲ್ಲಿನ ಸರ್ವೆ ನಂಬರ್ 34 ರಲ್ಲಿನ ಸರ್ಕಾರಿ ಸ್ಮಶಾನದ ಜಮೀನನ್ನು ಸ್ವತಃ ಆಪ್ ಮೂಲಕ ಸರ್ವೆ ಮಾಡಿ ವೀಕ್ಷಿಸಿದರು.

ಕನ್ನಡ ಪ್ರಭ ವಾರ್ತೆ ದಾವಣಗೆರೆಸರ್ಕಾರಿ ಆಸ್ತಿಗಳೆಂದರೆ ಯಾರು ಬೇಕಾದರೂ ಒತ್ತುವರಿ ಮಾಡಬಹುದು ಮತ್ತು ಯಾರೂ ಕೇಳುವವರಿಲ್ಲ ಎಂಬ ಭಾವನೆ ಇತ್ತು. ಆದರೆ ಸರ್ಕಾರಿ ಆಸ್ತಿಗಳ ಕಾವಲಿಗೆ ಲ್ಯಾಂಡ್ ಬೀಟ್ ವ್ಯವಸ್ಥೆ ಜಾರಿಗೆ ಬಂದಿದ್ದು ಮುಂದಿನ ದಿನಗಳಲ್ಲಿ ಸರ್ಕಾರಿ ಆಸ್ತಿಗಳ ಒತ್ತುವರಿಗೆ ಅವಕಾಶ ಇಲ್ಲ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು.

ಅವರು ಬುಧವಾರ ದಾವಣಗೆರೆ ಕಸಬಾ ಹೋಬಳಿಯ ದೊಡ್ಡಬಾತಿ ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿನ ಸರ್ವೆ ನಂಬರ್ 34 ರಲ್ಲಿನ ಸರ್ಕಾರಿ ಸ್ಮಶಾನದ ಜಮೀನನ್ನು ಸ್ವತಃ ಆಪ್ ಮೂಲಕ ಸರ್ವೆ ಮಾಡಿ ಒತ್ತುವರಿ ಇಲ್ಲದಿರುವುದನ್ನು ಖಚಿತಪಡಿಸಿಕೊಂಡು ಜಿಯೋ ಫೆನ್ಸಿಂಗ್ ಮಾಡಿದರು.

ಈ ಆಪ್ ಮೂಲಕ ಪ್ರಾಯೋಗಿಕ ಸರ್ವೆಯನ್ನು ದೊದ್ದಬಾತಿಯಲ್ಲಿ ಜಿಲ್ಲಾಧಿಕಾರಿಯವರು ಖುದ್ದು ಕೈಗೊಂಡು ಸರ್ವೆ ನಂಬರ್ 34 ರಲ್ಲಿ ಸರ್ಕಾರಿ ಸ್ಮಶಾನ ಭೂಮಿ ಒತ್ತುವರಿ ಯಾಗಿದೆಯೋ ಇಲ್ಲವೋ ಎಂಬ ಮಾಹಿತಿಯನ್ನು ಖಚಿತಪಡಿಸಿಕೊಂಡರು. ಈ ಭೂಮಿಯು ಒತ್ತುವರಿಯಾಗಿರುವುದಿಲ್ಲ ಎಂಬುದು ಇದರಿಂದ ಮಾಹಿತಿ ಲಭ್ಯವಾಯಿತು. ಆಪ್ ಮೂಲಕ ಎಲ್ಲಾ ಸರ್ಕಾರಿ ಜಮೀನು, ಜಾಗಗಳನ್ನು ಸರ್ವೆ ಮಾಡಿ ಜಿಯೋ ಫೆನ್ಸಿಂಗ್ ಮಾಡುವ ಮೂಲಕ ದತ್ತಾಂಶ ಸಂಗ್ರಹಕ್ಕೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ತಹಶೀಲ್ದಾರ್ ಡಾ.ಅಶ್ವಥ್, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿಗಳು ಉಪಸ್ಥಿತರಿದ್ದರು.

ಜಿಯೋ ಫೆನ್ಸಿಂಗ್‌ನಿಂದಾಗಿ ಒತ್ತುವರಿ ಆಸ್ತಿ ವಿವರ ಲಭ್ಯ

ಸರ್ಕಾರಿ ಆಸ್ತಿಗಳ ಸಂರಕ್ಷಣೆ ಮಾಡಲು ಸರ್ಕಾರ ಹೊಸ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಿದೆ. ಈ ತಂತ್ರಾಂಶದ ಮೂಲಕ ಗ್ರಾಮ ಆಡಳಿತಾಧಿಕಾರಿಗಳು ಸರ್ಕಾರದ ಎಲ್ಲಾ ಜಮೀನುಗಳಿಗೆ ಜಿಯೋ ಫೆನ್ಸಿಂಗ್ ಮಾಡುತ್ತಾರೆ. ಈ ಆಪ್ ಮೂಲಕ ಜಿಯೋ ಫೆನ್ಸಿಂಗ್ ಮಾಡಿ, ಒತ್ತುವರಿ ಮಾಡಿದ್ದಲ್ಲಿ ಅಂತಹ ಆಸ್ತಿಗಳ ವಿವರ ಲಭ್ಯವಾಗುತ್ತದೆ. ಈ ಸ್ಥಳಗಳಿ ಗೆ ನಿಗದಿತ ಅವಧಿಯಲ್ಲಿ ಭೇಟಿ ನೀಡಲು ಯಾವ ರೀತಿ ಪೊಲೀಸ್ ಬೀಟಿಂಗ್ ವ್ಯವಸ್ಥೆ ಇರುತ್ತದೆ, ಅದೇ ರೀತಿ ಸರ್ಕಾರಿ ಆಸ್ತಿಗಳ ಸಂರಕ್ಷಣೆ ಮಾಡಲು ಬೀಟಿಂಗ್ ವ್ಯವಸ್ಥೆಯನ್ನು ಆಪ್‌ನಲ್ಲಿ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಳಗಾವಿ ರೈತ, ಬೆಂಗಳೂರು ಸಂಸ್ಥೆಗೆ ಮೋದಿ ಭೇಷ್‌
ಹಳ್ಳಿಯ ಜನರು ಅಡುಗೆಗೆ ಸೌದೆ ಬಳಸಿ - ನಗರ ಜನರು ಎಲೆಕ್ಟ್ರಿಕ್‌ ಸ್ಟವ್ ಉಪಯೋಗಿಸಿ : ಮುನಿಯಪ್ಪ