ಆಹಾರದಲ್ಲಿ ಪ್ಲಾಸ್ಟಿಕ್ ಬಳಕೆಯಿಂದ ಮನುಷ್ಯನಿಗೆ ಮಾರಕ ಕಾಯಿಲೆ: ಪಿ.ಎಸ್.ಗಣೇಶ್ ಪ್ರಭು

KannadaprabhaNewsNetwork |  
Published : Jun 10, 2025, 03:51 AM IST
9ಕೆಎಂಎನ್ ಡಿ14 | Kannada Prabha

ಸಾರಾಂಶ

ಸರ್ಕಾರ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಎಷ್ಟೇ ಕಟ್ಟು ನಿಟ್ಟಿನ ಕ್ರಮ ವಹಿಸಿದರೂ ಸ್ಥಳೀಯ ಆಡಳಿತ ಈ ಬಗ್ಗೆ ಯಾವುದೇ ಮುಂಜಾಗೃತ ಕ್ರಮ ವಹಿಸದೇ ಇರುವುದು ಜನರು ಅನಾರೋಗ್ಯಕ್ಕೆ ತುತ್ತಾಗಲು ಕಾರಣವಾಗಿದೆ. ಟೀ ಹೋಟೆಲ್‌ಗಳಲೂ ಪ್ಲಾಸ್ಟಿಕ್ ಕವರ್‌ನಲ್ಲಿ ಟೀ ಪಾರ್ಸಲ್ ನೀಡುತ್ತಾರೆ.

ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಮನುಷ್ಯ ತಿನ್ನವ ಆಹಾರಕ್ಕೆ ಪ್ಲಾಸ್ಟಿಕ್ ಬಳಕೆ ಹೆಚ್ಚು ಮಾಡುತ್ತಿರುವುದರಿಂದ ಮನುಷ್ಯರು ಮಾರಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ ಎಂದು ಆಸ್ಟರ್ ಜಿ.ಮಾದೇಗೌಡ ಆಸ್ಪತ್ರೆ ಜನರಲ್ ಮ್ಯಾನೇಜರ್ ಪಿ.ಎಸ್.ಗಣೇಶ್ ಪ್ರಭು ಆತಂಕ ವ್ಯಕ್ತಪಡಿಸಿದರು.

ಹನುಮಂತನಗರದಲ್ಲಿ ಆಸ್ಟರ್ ಜಿ.ಮಾದೇಗೌಡ ಆಸ್ಪತ್ರೆ, ಭಾರತಿ ಇನ್ಸಿಟ್ಯೂಟ್ ಆಫ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಸಹಯೋಗದೊಂದಿಗೆ ಪ್ಲಾಸ್ಟಿಕ್ ಮತ್ತು ಇ-ತ್ಯಾಜ್ಯಗಳ ಸಂಗ್ರಹಣೆ ಮತ್ತು ಸಸಿ ನೆಡುವ ಕಾರ್ಯಕ್ರಮ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಹೋಟೇಲ್‌ಗಳಲ್ಲಿ ಇಡ್ಲಿಯನ್ನು ಪ್ಲಾಸ್ಟಿಕ್ ಕವರ್ ಹಾಕಿ ಬೇಯಿಸುತ್ತಿದ್ದಾರೆ. ಇದರಿಂದ ಕ್ಯಾನ್ಸರ್ ನಂತಹ ಮಾರಕ ರೋಗ ವ್ಯಾಪಿಸಲಿದೆ. ಈ ಬಗ್ಗೆ ಆಹಾರ ಇಲಾಖೆ ಅಧಿಕಾರಿಗಳು ಹೋಟೆಲ್‌ಗಳ ವಿರುದ್ಧ ಯಾವುದೇ ಕ್ರಮ ಜರುಗಿಸುತಿಲ್ಲ. ಸ್ಥಳೀಯ ಗ್ರಾಪಂ ಕೂಡ ಸಂಬಂಧ ಇಲ್ಲವೆಂಬಂತೆ ಇದೆ ಎಂದು ಬೇಸರ ವ್ಯಕ್ತಪಡಿಸಿದರು.

ಸರ್ಕಾರ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಎಷ್ಟೇ ಕಟ್ಟು ನಿಟ್ಟಿನ ಕ್ರಮ ವಹಿಸಿದರೂ ಸ್ಥಳೀಯ ಆಡಳಿತ ಈ ಬಗ್ಗೆ ಯಾವುದೇ ಮುಂಜಾಗೃತ ಕ್ರಮ ವಹಿಸದೇ ಇರುವುದು ಜನರು ಅನಾರೋಗ್ಯಕ್ಕೆ ತುತ್ತಾಗಲು ಕಾರಣವಾಗಿದೆ. ಟೀ ಹೋಟೆಲ್‌ಗಳಲೂ ಪ್ಲಾಸ್ಟಿಕ್ ಕವರ್‌ನಲ್ಲಿ ಟೀ ಪಾರ್ಸಲ್ ನೀಡುತ್ತಾರೆ. ಆಹಾರ ಸುರಕ್ಷತೆಯ ಬಗ್ಗೆ ಸಂಬಂಧಪಟ್ಟ ಇಲಾಖೆ ಜಾನ ಕುರುಡು ಪ್ರದರ್ಶನ ಮಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಭಾರತಿ ಇನ್ಸಿಟ್ಯೂಟ್ ಆಫ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಪ್ರಾಂಶುಪಾಲ ಡಾ. ಶಾಂತಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಆಸ್ಪತ್ರೆ ಮಾರ್ಕೆಟಿಂಗ್ ವ್ಯವಸ್ಥಾಪಕ ಅನಿಲ್ ಕುಮಾರ್, ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಲಕ್ಷ್ಮೀಶ್, ರಾಘವೇಂದ್ರ, ಮಧುಕುಮಾರ್ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಹಾಗೂ ಕಾಲೇಜಿನ ಸಿಬ್ಬಂದಿ ವರ್ಗ ದವರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

PREV

Recommended Stories

ಸಾಂಬ್ರಾ ವಿಮಾನ ನಿಲ್ದಾಣದವರೆಗೆ ಚತುಷ್ಪಥ ರಸ್ತೆ
ಮುಷ್ಕರಕ್ಕೆ ನೌಕರರಿಂದ ಮಿಶ್ರ ಪ್ರತಿಕ್ರಿಯೆ