ಪ್ಲಾಸ್ಟಿಕ್‌ ಬಳಕೆಯು ಭವಿಷ್ಯಕ್ಕೆ ಕಂಟಕ: ಡಾ. ದಿವಾಕರ್‌

KannadaprabhaNewsNetwork |  
Published : Nov 17, 2024, 01:17 AM IST
1111 | Kannada Prabha

ಸಾರಾಂಶ

ಎನ್‌ಐಎಎಸ್ ಸಹ ಪ್ರಾಧ್ಯಾಪಕ ವಿ. ವಿ. ಬಿನೋಯ್ ಮಾತನಾಡಿ ವಿಜ್ಞಾನಿಯು ಮಗುವಾಗಿದ್ದು ಎಂದಿಗೂ ಪ್ರೌಢ ವ್ಯವಸ್ಥೆಗೆ ತಲುಪಲಾರ. ಅವನು ಜೀವನದ ಕೊನೆಯ ಹಂತದವರೆಗೂ ಪ್ರಶ್ನಿಸುವ ಮನೋಭಾವವನ್ನು ಬಿಟ್ಟುಕೊಡುವುದಿಲ್ಲ ಎಂದರು.

ಕನ್ನಡಪ್ರ ವಾರ್ತೆ ಮೂಡುಬಿದಿರೆ

ಪ್ರಪಂಚದ ಎಲ್ಲೆಡೆ ಬಳಸಲಾಗುವ ಪ್ಲಾಸ್ಟಿಕ್ ಕೊನೆಗೆ ಸಾಗರವನ್ನು ಸೇರುತ್ತಿದೆ. ಭವಿಷ್ಯದಲ್ಲಿ ಅತ್ಯಂತ ಕಠಿಣ ದಿನಗಳನ್ನು ಎದುರಿಸುವ ಸಾಧ್ಯತೆ ಇದೆ ಎಂದು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿನ ಮುಂದುವರಿದ ಅಧ್ಯಯನಗಳ ರಾಷ್ಟ್ರೀಯ ಸಂಸ್ಥೆ (ಎನ್‌ಐಎಎಸ್)ಯ ಇಸ್ರೋ ಮುಖ್ಯ ಪ್ರಾಧ್ಯಾಪಕ ಡಾ.ಪಿ. ಜಿ. ದಿವಾಕರ್ ಅಭಿಪ್ರಾಯಪಟ್ಟರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮತ್ತು ಎನ್‌ಐಎಎಸ್ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡ ವಿದ್ಯಾರ್ಥಿ- ವಿಜ್ಞಾನಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹವಾಮಾನ ಬದಲಾವಣೆಯು ಇತ್ತೀಚಿನ ದಿನಗಳಲ್ಲಿ ತೀವ್ರ ಸಮಸ್ಯೆಯಾಗಿದ್ದು, ವಾತಾವರಣದಲ್ಲಿ ಇಂಗಾಲದ ಡೈ ಆಕ್ಸೈಡ್ ಹೆಚ್ಚಳವೇ ಇದಕ್ಕೆ ಪ್ರಮುಖ ಕಾರಣ ಎಂದರು.

ವಿದ್ಯಾರ್ಥಿಗಳನ್ನು ವಿಜ್ಞಾನಿಗಳನ್ನಾಗಿ ಮಾಡಲು ಎನ್‌ಐಎಎಸ್ ಆಯೋಜಿಸಿರುವ ‘ಕರಾವಳಿ ಭಾಗದ ಹವಾಮಾನ ಬದಲಾವಣೆ’ಯ ಅಧ್ಯಯನ ಯೋಜನೆಯು ಸಹಕರಿಯಾಗಲಿದೆ. ಶಿಕ್ಷಣದ ಮೂಲಕ ಯುವಜನಾಂಗದಲ್ಲಿ ವಿಜ್ಞಾನ ಮತ್ತು ಅನ್ವೇಷಣೆಯತ್ತ ಒಲವು ಮೂಡಿಸಬೇಕು ಎಂದರು. ಇಸ್ರೋ ಜಿಯೋ ಎಐಯನ್ನು ಬಿಡುಗಡೆಗೊಳಿಸಳಿದ್ದು ಇದರಲ್ಲಿ ಮುಂದಿನ ೧೦ ವರ್ಷದದಲ್ಲಿ ವಿಶ್ವದ ವಾತಾವರಣ ಹೇಗಿರುತ್ತವೆ ಎಂಬ ದತ್ತಾಂಶ ಲಭ್ಯವಾಗಲಿದೆ ಎಂದರು.

ಎನ್‌ಐಎಎಸ್ ಸಹ ಪ್ರಾಧ್ಯಾಪಕ ವಿ. ವಿ. ಬಿನೋಯ್ ಮಾತನಾಡಿ ವಿಜ್ಞಾನಿಯು ಮಗುವಾಗಿದ್ದು ಎಂದಿಗೂ ಪ್ರೌಢ ವ್ಯವಸ್ಥೆಗೆ ತಲುಪಲಾರ. ಅವನು ಜೀವನದ ಕೊನೆಯ ಹಂತದವರೆಗೂ ಪ್ರಶ್ನಿಸುವ ಮನೋಭಾವವನ್ನು ಬಿಟ್ಟುಕೊಡುವುದಿಲ್ಲ ಎಂದರು.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ ಇಸ್ರೋ ಮತ್ತು ಎನ್‌ಐಎಎಸ್ ಸಂಸ್ಥೆಗಳು ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಮಹತ್ವಪೂರ್ಣ ಕೆಲಸ ಮಾಡುತ್ತಿದೆ. ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಹೆಚ್ಚಾಗಿ ತಿಳಿದುಕೊಳ್ಳಬೇಕು ಇಂತಹ ಕಾರ್ಯಾಗಾರಗಳಲ್ಲಿ ಭಾಗವಹಿಸುವುದು ವಿದ್ಯಾರ್ಥಿಗಳಿಗೆ ಉನ್ನತ ಭವಿಷ್ಯವನ್ನು ನೀಡುತ್ತದೆ ಎಂದು ಹೇಳಿದರು.ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್, ಆಳ್ವಾಸ್ ಎಂಜಿನಿಯರ್ ಮತ್ತು ತಂತ್ರಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ಫೆರ್ನಾಂಡಿಸ್, ಎನ್‌ಐಎಎಸ್ ಯೋಜನಾ ಸಹವರ್ತಿ ಪೌಲ್ ಜೋಶಿ, ಪ್ರಿಯಾಂಕಾ ಮತ್ತಿತರರು ಇದ್ದರು. ಕಾರ್ಯಕ್ರಮದ ಸಂಯೋಜಕ ಡಾ. ವಿನಯ್ ಎಸ್. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಕಸಿತ ಭಾರತ ನಿರ್ಮಾಣವೇ ವಿಬಿ-ಜಿ ರಾಮ್-ಜಿ ಗುರಿ: ಹರಿಪ್ರಕಾಶ ಕೋಣೆಮನೆ
ಅಕ್ರಮ ಮದ್ಯ ಮಾರಾಟ ತಡೆಗೆ ಒತ್ತಾಯಿಸಿ ಪ್ರತಿಭಟನೆ