ಕನಕಪುರ: ಶಾಲಾ ಮಕ್ಕಳನ್ನು ಯಾವುದೇ ಕೆಲಸ ಕಾರ್ಯಗಳಿಗೆ ಬಳಸಿಕೊಳ್ಳಬಾರದು ಎಂಬ ಸರ್ಕಾರಿ ಆದೇಶವಿದ್ದರೂ ತಾಲೂಕಿನ ಹುಲಿಬೆಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳನ್ನು ನೀರಿನ ತೊಂಬೆಗೆ ಇಳಿಸಿ ಸ್ವಚ್ಛ ಮಾಡಿಸಿಕೊಂಡಿರುವ ಮುಖ್ಯಶಿಕ್ಷಕಿ ರಾಜಲಕ್ಷ್ಮೀ ಮೇಲೆ ಶಿಕ್ಷಣ ಇಲಾಖೆ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಪೋಷಕರು ಆಗ್ರಹಿಸಿದ್ದಾರೆ.
ವಿಷಯ ತಿಳಿಯುತ್ತಿದಂತೆ ಪೋಷಕರು ಹಾಗೂ ಕರ್ನಾಟಕ ಸ್ವಾಭಿಮಾನಿ ಸಮ ಸಮಾಜದ ಸಂಘಟನೆ ಜಿಲ್ಲಾ ಸಂಯೋಜಕ ಜೀವನಮೂರ್ತಿ ಶಾಲೆ ಬಳಿ ಜಮಾಯಿಸಿ ಮುಖ್ಯ ಶಿಕ್ಷಕಿ ರಾಜಲಕ್ಷ್ಮೀಯನ್ನು ತರಾಟೆಗೆ ತೆಗೆದುಕೊಂಡು, ಮುಖ್ಯ ಶಿಕ್ಷಕಿ ರಾಜಲಕ್ಷ್ಮೀ ಅವರಿಗೆ ಮೊದಲಿಂದಲೂ ಮಕ್ಕಳ ಮೇಲೆ ಕಾಳಜಿ ಇಲ್ಲ. ಮಕ್ಕಳನ್ನು ಯಾವುದೇ ಕೆಲಸ ಕಾರ್ಯಗಳಿಗೆ ಬಳಸಿಕೊಳ್ಳಬಾರದು ಎಂದು ಗೊತ್ತಿದ್ದರೂ ಮಕ್ಕಳ ಕೈಯಲ್ಲೇ ನೀರಿನ ತೊಂಬೆ ಸ್ವಚ್ಛತೆ ಮಾಡಿಸಿರುವುದು ಸರಿಯಲ್ಲ. ಮಕ್ಕಳಿಗೆ ಏನಾದರೂ ತೊಂದರೆ ಆದರೆ ಯಾರು ಹೊಣೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದರು.
ಶಾಲೆಯಲ್ಲಿ ಮಕ್ಕಳಿಗೆ ಕೊಡುವ ಬಿಸಿಯೂಟದಲ್ಲಿ ಹುಳು ಸಿಕ್ಕಿದ್ದು, ಈ ಬಗ್ಗೆಯೂ ಸಾಕಷ್ಟು ಬಾರಿ ಗಮನಕ್ಕೆ ತಂದಿದ್ದರೂ ಪ್ರಯೋಜನವಾಗಿಲ್ಲ. ಕೂಡಲೇ ಇವರ ಮೇಲೆ ಶಿಸ್ತು ಕ್ರಮ ಕೈಗೊಂಡು ಇಲ್ಲಿಂದ ವರ್ಗಾವಣೆ ಮಾಡಬೇಕು. ಇಲ್ಲದಿದ್ದರೆ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪೋಷಕರು ಎಚ್ಚರಿಕೆ ಕೊಟ್ಟಿದ್ದಾರೆ.ಕೋಟ್............
-ಬಿ.ಜಿ.ರಾಮಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ, ಕನಕಪುರ
ಕೆ ಕೆ ಪಿ ಸುದ್ದಿ3(2):ಹುಲಿಬೆಲೆ ಸರ್ಕಾರಿ ಶಾಲೆ ಆವರಣದಲ್ಲಿ ನಿರ್ಮಾಣ ಮಾಡಿರುವ ನೀರಿನ ತೊಂಬೆ