ಕೃಷಿಯಲ್ಲಿ ವಿಜ್ಞಾನ ಬಳಕೆ ಅನಿವಾರ್ಯ: ಡಾ.ಬಸವನಗೌಡ

KannadaprabhaNewsNetwork |  
Published : Mar 01, 2025, 01:02 AM IST
ಕ್ಯಾಪ್ಷನ28ಕೆಡಿವಿಜಿ32 ಜಗಳೂರು ತಾ. ಬಸಪ್ಪನಹಟ್ಟಿಯಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಯಲ್ಲಿ ಡಾ.ಎಂ.ಜಿ. ಬಸವನಗೌಡ ಮಾತನಾಡಿದರು. | Kannada Prabha

ಸಾರಾಂಶ

ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಕೃಷಿಯಲ್ಲಿ ವಿಜ್ಞಾನ ಬಳಕೆ ಅನಿವಾರ್ಯವಾಗಿದೆ ಎಂದು ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಜ್ಞಾನಿ ಡಾ. ಎಂ.ಜಿ. ಬಸವನಗೌಡ ಅಭಿಪ್ರಾಯಪಟ್ಟರು.

ಕನ್ನಡಪ್ರಭ ವಾರ್ತೆ ದಾವಣಗೆರೆ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಕೃಷಿಯಲ್ಲಿ ವಿಜ್ಞಾನ ಬಳಕೆ ಅನಿವಾರ್ಯವಾಗಿದೆ ಎಂದು ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಜ್ಞಾನಿ ಡಾ. ಎಂ.ಜಿ. ಬಸವನಗೌಡ ಅಭಿಪ್ರಾಯಪಟ್ಟರು.

ಜಗಳೂರು ತಾಲೂಕು ಬಸಪ್ಪನಹಟ್ಟಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ''''ರಾಷ್ಟ್ರೀಯ ವಿಜ್ಞಾನ ದಿನ'''' ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾಂಪ್ರದಾಯಕ ಕೃಷಿಯಿಂದ ಇಂದು ತಂತ್ರಜ್ಞಾನದ ಕೃಷಿಗೆ ಬದಲಾಗಬೇಕಾಗಿದೆ. ಒಂದೆಡೆ ಉತ್ಪಾದನೆ ಹೆಚ್ಚಿಸುವ ಸವಾಲಾದರೆ, ಮತ್ತೊಂದೆಡೆ ಭೂಮಿಯ ಫಲವತ್ತತೆ ಕಾಪಾಡಿಕೊಳ್ಳುವ ಅನಿವಾರ್ಯತೆ ಇದೆ. ಹಾಗಾಗಿ, ಕೃಷಿಯಲ್ಲಿ ಇಂದು ಸಮಗ್ರ ಮತ್ತು ಸುಸ್ಥಿರತೆ ಕಾಪಾಡಲು ವೈಜ್ಞಾನಿಕ ಅಂಶಗಳ ಅಳವಡಿಕೆ ಅಗತ್ಯ ಎಂದು ತಿಳಿಸಿದರು.

ಕೇಂದ್ರದ ಬೇಸಾಯ ತಜ್ಞ ಬಿ.ಒ. ಮಲ್ಲಿಕಾರ್ಜುನ ಮಾತನಾಡಿ, ಇಂದು ಕೃಷಿಯಲ್ಲಿ ಡ್ರೋನ್‌ಗಳ ಬಳಕೆಯಿಂದ ಔಷಧ ಸಿಂಪರಣಾ ವೆಚ್ಚ ಕಡಿಮೆ ಆಗುತ್ತಿದೆ. ಅಲ್ಲದೇ, ಸಮಯದ ಉಳಿತಾಯವೂ ಆಗುತ್ತಿದೆ ಎಂದರು.

ಗೃಹ ವಿಜ್ಞಾನಿ ಡಾ.ಸುಪ್ರಿಯಾ ಪಿ. ಪಾಟೀಲ್ ಮಾತನಾಡಿ, ಅಪೌಷ್ಠಿಟಿಕತೆಯಿಂದ ಮಹಿಳಾ ಮತ್ತು ಮಕ್ಕಳನ್ನು ಪಾರು ಮಾಡಲು ಸತ್ವವುಳ್ಳ ಹಣ್ಣು- ತರಕಾರಿಗಳ ಸೇವನೆ ಅವಶ್ಯಕ. ಪರಿಶಿಷ್ಠ ಪಂಗಡ ಉಪ ಯೋಜನೆಯಲ್ಲಿ 50 ಪೌಷ್ಠಿಕ ಕೈತೋಟ ನಿರ್ಮಾಣದಿಂದ ಗ್ರಾಮದ ಜನತೆಯಲ್ಲಿ ಉತ್ತಮ ಆರೋಗ್ಯ ಕಾಣುತ್ತಿದ್ದೇವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರಾದ ಕೃಷ್ಣಮೂರ್ತಿ, ಶಶಿಧರ, ಸಣ್ಣಸೊರಯ್ಯ, ರೈತ ಮಹಿಳೆಯರು ಭಾಗವಹಿಸಿದ್ದರು.

- - - -28ಕೆಡಿವಿಜಿ32:

ಜಗಳೂರು ತಾಲೂಕಿನ ಬಸಪ್ಪನಹಟ್ಟಿಯಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ದಿನ ಕಾರ್ಯಕ್ರಮದಲ್ಲಿ ಡಾ. ಎಂ.ಜಿ. ಬಸವನಗೌಡ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''