ಕನ್ನಡಪ್ರಭ ವಾರ್ತೆ ಚಾಮರಾಜನಗರ
ಕರ್ನಾಟಕ ಮಾನವ ಅಭಿವೃದ್ಧಿ ವರದಿ-೨೦೧೫ರ ಪ್ರಕಾರ ಇತರೆ ಸಮುದಾಯಗಳಿಗೆ ಹೋಲಿಸಿಕೊಂಡರೆ ದಲಿತರು ಅತ್ಯಂತ ಶೋಚನೀಯ ಸ್ಥಿತಿಯಲ್ಲಿದ್ದಾರೆ. ರಾಜ್ಯದ ಸರಾಸರಿ ಅಭಿವೃದ್ಧಿಗಿಂತಲೂ ದಲಿತರು ಕಡಿಮೆ ಅಭಿವೃದ್ಧಿ ಹೊಂದಿರುವುದು ಕಂಡುಬಂದಿದೆ. ಹೀಗಿರುವಾಗ ದಲಿತರಿಗೆ ಮೀಸಲಿಡುವ ಹಣವನ್ನು ಅಸಮಾನತೆಯ ಅಂತರವನ್ನು ಕಡಿಮೆ ಮಾಡುವ ಯೋಜನೆಗಳಲ್ಲಿ ವಿನಿಯೋಗಿಸಬೇಕೇ ಹೊರತು ಎಲ್ಲರ ಅಭಿವೃದ್ಧಿಗೆ ರೂಪಿಸುವ ಯೋಜನೆಗಳಿಗೆ ಉಪಯೋಗಿಸಬಾರದು ಎಂದರು.
೨೦೨೩-೨೪ನೇ ಸಾಲಿನಿಂದಲೂ ಸುಮಾರು ₹೨೫೦೦೦ ಕೋಟಿಯನ್ನು ಗ್ಯಾರಂಟಿಗಳಿಗೂ, ₹೧೫೦೦೦ ಕೋಟಿಯನ್ನು ಅನ್ಯ ಉದ್ದೇಶಕ್ಕೂ ಬಳಸಿರುವುದು ಕಾಯ್ದೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದಂತೆ ಆಗುತ್ತದೆ. ಸರ್ಕಾರ, ಮುಖ್ಯಮಂತ್ರಿ, ಸಮಾಜ ಕಲ್ಯಾಣ ಸಚಿವರೂ ಸೇರಿದಂತೆ ಇತರ ಮಂತ್ರಿಗಳೂ ಈ ಕ್ರಮವನ್ನು ಸಮರ್ಥಿಸಿಕೊಳ್ಳುತ್ತಿರುವುದು ದುರಂತ ಮತ್ತು ಖಂಡನೀಯ ಎಂದರು.ತಕ್ಷಣ ಗ್ಯಾರಂಟಿಗಳಿಗೆ ಬಳಸಿರುವ ಎಸ್ಸಿಎಸ್ಪಿ/ಟಿಎಸ್ಪಿ ಹಣವನ್ನು ದಲಿತರ ಅಭಿವೃದ್ಧಿಗೆ ಹಿಂದಿರುಗಿಸಬೇಕು. ಕಾಯ್ದೆಯ ೭ಡಿ ಸೆಕ್ಷನ್ ರದ್ದುಪಡಿಸಿದಂತೆ ೭ಸಿ ಯನ್ನೂ ರದ್ದುಪಡಿಸಬೇಕು, ಸಂವಿಧಾನ ವಿಧಿ ೪೬ರ ಆಶಯವನ್ನು ಪಾಲಸಬೇಕೆಂದು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಜಿಲ್ಲಾ ಸಂಚಾಲಕ ರಂಗಸ್ವಾಮಿ, ನಂಜುಂಡಸ್ವಾಮಿ, ದೊರೆಸ್ವಾಮಿ, ಜಿಲ್ಲಾ ಸಂಘಟನಾ ಸಂಚಾಲಕ ಕಾಡಹಳ್ಳಿ ನಾಗರಾಜು, ನಿಜಧ್ವನಿ ಗೋವಿಂದರಾಜು, ರಾಮಸಮುದ್ರ ಸುರೇಶ್, ತಾಲೂಕು ಸಂಚಾಲಕ ಅನಿಲ್ ಕುಮಾರ್ , ಮಂಜುನಾಥ್, ಜಿಲ್ಲಾ ಸಂಘಟನಾ ಸಂಚಾಲಕ ದೊರೆಸ್ವಾಮಿ, ಇದಾಯತ್ ಉಲ್ಲಾ ಷರೀಪ್ ಇತರರು ಭಾಗವಹಿಸಿದ್ದರು.