ಡ್ರಗ್ಸ್‌ ಬಗ್ಗೆ ಮಾಹಿತಿ ನೀಡಲು ಕ್ಯೂಆರ್‌ ಕೋಡ್‌ ಬಳಸಿ : ಸ್ವರೂಪ ಟಿ.ಕೆ.

KannadaprabhaNewsNetwork |  
Published : Nov 07, 2026, 02:30 AM IST
ತಂಬಾಕು ಮುಕ್ತ ಯುವ ಅಭಿಯಾನ 4.0 ಅಭಿಯಾನದ ಪೋಸ್ಟರ್ ಬಿಡುಗಡೆ | Kannada Prabha

ಸಾರಾಂಶ

ಮಾದಕ ವಸ್ತುಗಳ ಸಾಗಾಟ, ಮಾರಾಟ, ಬಳಕೆಯನ್ನು ನಿಯಂತ್ರಿಸಿ, ಉಡುಪಿಯನ್ನು ಮಾದಕ ವ್ಯಸನ ಮುಕ್ತ ಜಿಲ್ಲೆಯನ್ನಾಗಿ ಮಾಡುವುದಕ್ಕಾಗಿ, ಪೊಲೀಸ್ ಇಲಾಖೆ ಕ್ಯೂಆರ್ ಕೋಡನ್ನು ಅಭಿವೃದ್ಧಿಪಡಿಸಿದ್ದು, ಮಾದಕ ವಸ್ತುಗಳ ಮಾರಾಟ, ಬಳಕೆ ಮತ್ತಿತರ ಚಟುವಟಿಕೆಗಳು ಕಂಡುಬಂದಲ್ಲಿ ಸಾರ್ವಜನಿಕರು ಈ ಕ್ಯೂಆರ್ ಕೋಡ್‌ನ ಮೂಲಕ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು, ಮಾಹಿತಿ ನೀಡಿದವರ ವಿವರಗಳನ್ನು ಗೌಪ್ಯವಾಗಿಡಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು.

ಉಡುಪಿ : ಮಾದಕ ವಸ್ತುಗಳ ಸಾಗಾಟ, ಮಾರಾಟ, ಬಳಕೆಯನ್ನು ನಿಯಂತ್ರಿಸಿ, ಉಡುಪಿಯನ್ನು ಮಾದಕ ವ್ಯಸನ ಮುಕ್ತ ಜಿಲ್ಲೆಯನ್ನಾಗಿ ಮಾಡುವುದಕ್ಕಾಗಿ, ಪೊಲೀಸ್ ಇಲಾಖೆ ಕ್ಯೂಆರ್ ಕೋಡನ್ನು ಅಭಿವೃದ್ಧಿಪಡಿಸಿದ್ದು, ಮಾದಕ ವಸ್ತುಗಳ ಮಾರಾಟ, ಬಳಕೆ ಮತ್ತಿತರ ಚಟುವಟಿಕೆಗಳು ಕಂಡುಬಂದಲ್ಲಿ ಸಾರ್ವಜನಿಕರು ಈ ಕ್ಯೂಆರ್ ಕೋಡ್‌ನ ಮೂಲಕ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು, ಮಾಹಿತಿ ನೀಡಿದವರ ವಿವರಗಳನ್ನು ಗೌಪ್ಯವಾಗಿಡಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು.

ಅವರು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎನ್.ಸಿ.ಓ.ಆರ್.ಡಿ. ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈ ಕ್ಯೂ ಆರ್ ಕೋಡ್‌ಗೆ ವ್ಯಾಪಕ ಪ್ರಚಾರ ನೀಡಬೇಕು ರೈಲ್ವೆ ನಿಲ್ದಾಣ, ಬಸ್ಸು ನಿಲ್ದಾಣ, ಕಾಲೇಜು - ಹಾಸ್ಟೆಲು, ಸರಕಾರಿ ಕಚೇರಿಗಳು, ಖಾಸಗಿ ಮತ್ತು ಸರಕಾರಿ ಆಸ್ಪತ್ರೆಗಳು, ಮೆಡಿಕಲ್ ಶಾಪ್‌ ಇತ್ಯಾದಿ ಹೆಚ್ಚು ಜನರು ಸೇರುವ ಪ್ರದೇಶದಲ್ಲಿ ಎದ್ದು ಕಾಣುವಂತೆ ಪ್ರದರ್ಶಿಸಬೇಕು ಎಂದವರು ಸೂಚಿಸಿದರು. ಕಳೆದ ಸಭೆಯಲ್ಲಿಯೇ ಈ ಸೂಚನೆ ನೀಡಲಾಗಿದ್ದರೂ ಇದರ ಅನುಷ್ಠಾನ ಪೂರ್ಣ ಪ್ರಮಾಣದಲ್ಲಿ ಆಗಿಲ್ಲ ಎಂದವರು ಅಸಮಾಧಾನ ವ್ಯಕ್ತಪಡಿಸಿದರು.ಔಷಧಿ ಅಂಗಡಿಗಳಲ್ಲಿ ಅಮಲು ಬರಿಸುವಂತಹ ಔಷಧಿಗಳನ್ನು ಮಾರುವಂತಿಲ್ಲ, “ವೈದ್ಯರ ನಿರ್ದೇಶನವಿಲ್ಲದೇ ಔಷಧ ಮಾರಾಟ ನಿಷೇಧಿಸಲಾಗಿದೆ” ಎಂಬ ಸೂಚನಾ ಫಲಕಗಳನ್ನು ಕಡ್ಡಾಯವಾಗಿ ಔಷಧಿ ಅಂಗಡಿಗಳಲ್ಲಿ ಪ್ರದರ್ಶಿಸಬೇಕು. ಸಂದೇಹಾಸ್ಪದವಾಗಿ ಕೆಮ್ಮಿನ ಸಿರಪ್‌ಗಳನ್ನು ಖರೀದಿಸುವವರ ಬಗ್ಗೆ ನಿಗಾ ವಹಿಸಬೇಕು, ಔಷಧಿ ಅಂಗಡಿಗಳಲ್ಲಿ ಸಿಸಿ ಕ್ಯಾಮರ ಅಳವಡಿಸಿ, ನಿರಂತರ ಚಾಲನೆಯಲ್ಲಿಟ್ಟಿರಬೇಕು. ಸಿಸಿಟಿವಿ ಫೂಟೇಜ್‌ಗಳು ಕನಿಷ್ಠ 3 ತಿಂಗಳವರೆಗೆ ಸಂಗ್ರಹ ಇರುವಂತೆ ನೋಡಿಕೊಳ್ಳಬೇಕು. ಔಷಧ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಈ ಬಗ್ಗೆ ಕ್ರಮವಹಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್, ಡಿ.ಹೆಚ್.ಓ ಡಾ. ಬಸವರಾಜ್ ಹುಬ್ಬಳ್ಳಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ತಂಬಾಕು ಮುಕ್ತ ಯುವ ಅಭಿಯಾನ 4.0 ಅಭಿಯಾನದ ಪೋಸ್ಟರ್ ಅನ್ನು ಜಿಲ್ಲಾಧಿಕಾರಿ ಮತ್ತು ಇತರ ಅಧಿಕಾರಿಗಳು ಬಿಡುಗಡೆಗೊಳಿಸಿ ಅಭಿಯಾನಕ್ಕೆ ಚಾಲನೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಬ್ಬಿಗೆ ಸ್ಥಳೀಯ ರಿಕವರಿ ಆಧಾರದಲ್ಲಿ ನ್ಯಾಯಯುತ ಬೆಲೆ ನೀಡಲು ಆಗ್ರಹ
ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದರೆ ಸೂಕ್ತ ಕ್ರಮ