ಕನ್ನಡಪ್ರಭ ವಾರ್ತೆ ಕೋಲಾರಜಿಲ್ಲೆಯಲ್ಲಿ ಅನೇಕ ಸಮುದಾಯ ಭವನಗಳನ್ನು ನಿರ್ಮಾಣ ಮಾಡಿದ್ದು, ಸಮರ್ಪಕ ಬಳಕೆ ಆಗುತ್ತಿಲ್ಲ. ಇವುಗಳನ್ನು ರಾಜ್ಯದಲ್ಲಿಯೇ ಮಾದರಿಯಾಗುವಂತೆ ಮಾಡಲು ಈ ಭವನಗಳನ್ನು ಜ್ಞಾನ ಮತ್ತು ಕೌಶಲ ಅಭಿವೃದ್ಧಿ ಕೇಂದ್ರಗಳನ್ನಾಗಿ ಮಾರ್ಪಡಿಸಿ ಸ್ಥಳೀಯ ಯುವಜನತೆ ಬಳಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ತಿಳಿಸಿದರು.ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು. ಡಿಜಿಟಲ್ ಗ್ರಂಥಾಲಯ ಸ್ಥಾಪಿಸಿ
ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ಮಾತನಾಡಿ, ಪರಿಶಿಷ್ಟ ಜಾತಿ/ ಪಂಗಡದವರ ವಿರುದ್ಧ ದೌರ್ಜನ್ಯ ಪ್ರಕರಣಗಳನ್ನು ಶೀಘ್ರ ಇತ್ಯರ್ಥ ಮಾಡಬೇಕು. ಪ್ರತಿ ಎರಡನೇ ಭಾನುವಾರ ಈ ಕುರಿತು ಸಭೆ ನಡೆಸಲಾಗುವುದು ಎಂದರು.
ಈಗಾಗಲೇ ಮುಳಬಾಗಿಲು ಮತ್ತು ಶ್ರೀನಿವಾಸಪುರ ತಾಲೂಕುಗಳಲ್ಲಿ ಪರಿಶಿಷ್ಟರ ಕುಂದು ಕೊರತೆ ಸಭೆಗಳನ್ನು ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ತಾಲೂಕುಗಳಲ್ಲಿ ಕುಂದು ಕೊರತೆಗಳ ಸಭೆ ನಡೆಸುವಂತೆ ಜಿಲ್ಲಾಧಿಕಾರಿ ಸೂಚಿಸಿದರುವಸತಿ ಶಾಲೆ ಜತೆಗೆ ಸರ್ಕಾರಿ ಶಾಲೆ
ಬಂಗಾರಪೇಟೆ ತಾಲೂಕು ವಸತಿ ಶಾಲೆಯಲ್ಲಿ ಸರ್ಕಾರಿ ಶಾಲೆಯ ಮಕ್ಕಳನ್ನು ಜೊತೆಗೂಡಿಸಿ ಶಾಲೆ ನಡೆಸುತ್ತಿದ್ದು, ಈ ಬಗ್ಗೆ ಶಿಕ್ಷಣ ಇಲಾಖೆ ವಾರದೊಳಗೆ ಕೈಗೊಳ್ಳಲಿದೆ. ೨ ವಾರದೊಳಗಾಗಿ ಶಾಲೆ ನಡೆಸಲು ಅನುಕೂಲಕರವಾಗಿರುವ ಬಾಡಿಗೆ ಕಟ್ಟಡವನ್ನು ಹುಡುಕಿ ಶಾಲಾ ಮಕ್ಕಳನ್ನು ಸ್ಥಳಾಂತರಿಸಲು ಕ್ರಮವಹಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖಾಧಿಕಾರಿಗಳಿಗೆ ಸೂಚಿಸಿದರು.ಮೆನು ಚಾರ್ಟ್ ಪ್ರಕಟಿಸಿ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕರು, ಅಂಗನವಾಡಿ ಕೇಂದ್ರಗಳಲ್ಲಿ ಬಾಣಂತಿಯರಿಗೆ ಮತ್ತು ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ಮೇನು ಚಾರ್ಟ್‌ನ್ನು ಗೋಡೆ ಬರಹದಲ್ಲಿ ಬರೆಸಿ ಸಾರ್ವಜನಿಕರ ಗಮನಕ್ಕೆ ತರಲು ಸಭೆಗೆ ಮಾಹಿತಿ ನೀಡಲು ಸದಸ್ಯರು ಕೋರಿದರು. ಜಿಲ್ಲೆಯಲ್ಲಿ ೨೧೮೦ ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಮೆನು ಚಾರ್ಟನ್ನು ಗೋಡೆಮೇಲೆ ಪ್ರದರ್ಶಿಸಲಾಗಿದೆಂದು ಉಪನಿರ್ದೇಶಕರು ಸಭೆಗೆ ತಿಳಿಸಿದರು.ಸಭೆಯಲ್ಲಿ ಜಿಪಂ ಸಿಇಓ ಡಾ.ಪ್ರವೀಣ್ ಪಿ.ಬಾಗೇವಾಡಿ, ಕೆಜಿಎಫ್ ಎಸ್‌ಪಿ ಶಿವಂಶು ರಜಪೂತ್, ಎಡಿಸಿ ಎಸ್.ಎಂ..ಮಂಗಳ, ಎಸಿ ಡಾ.ಎಸ್.ಮೈತ್ರಿ, ಡಿವೈಎಸ್ಪಿ ವಸಂತ್ ಕುಮಾರ್, ಸರ್ಕಾರಿ ಅಭಿಯೋಜಕ ಮಾಧವ ಪದ್ಮನಾಭ ಗಾವ್ಕರ್ ಇದ್ದರು.
.