ಇ-ಖಾತಾ ಅಭಿಯಾನ ಬಳಸಿಕೊಳ್ಳಿ

KannadaprabhaNewsNetwork |  
Published : Feb 26, 2025, 01:00 AM IST
25ಬಿಜಿಪಿ-1 | Kannada Prabha

ಸಾರಾಂಶ

ಅನಧಿಕೃತ ಸ್ವತ್ತುಗಳಿಗೆ ಖಾತಾ ನೀಡುವ ಸಂಬಂಧ ಕಾಯ್ದೆ ಮತ್ತು ನಿಯಮಗಳಿಗೆ ತಿದ್ದುಪಡಿ ತಂದಿದ್ದು, ಅನಧಿಕೃತ ಸ್ವತ್ತುಗಳ (ಬಿ–ಖಾತಾ) ಮಾಲೀಕರು ತಮ್ಮ ಸ್ವತ್ತಿನ ಕಂದಾಯ ಪಾವತಿಸುವುದು ಸೇರಿದಂತೆ ಸಂಬಂಧಪಟ್ಟ ದಾಖಲೆಗಳನ್ನು ನೀಡಿ ಇ–ಖಾತಾ ಪಡೆಯಬಹುದಾಗಿದೆ. ಇದಕ್ಕಾಗಿ ಮೂರು ತಿಂಗಳ ಕಾಲ ಖಾತೆ ಅಭಿಯಾನ ನಡೆಯಲಿದೆ.

ಕನ್ನಡಪ್ರಭ ವಾರ್ತೆ ಬಾಗೇಪಲ್ಲಿ

ಅನಧಿಕೃತ ಸ್ವತ್ತುಗಳ ಮಾಲೀಕರ ಅನುಕೂಲಕ್ಕಾಗಿ ಹಾಗೂ ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸುವ ಉದ್ದೇಶದಿಂದ ಮಾ. 2 ಭಾನುವಾರ ಪಟ್ಟಣದ ಪುರಸಭೆ ಆವರಣದಲ್ಲಿ ಇ- ಖಾತಾ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಇದರ ಸೌಲಭ್ಯ ಪಡೆಯುವಂತೆ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಮನವಿ ಮಾಡಿದರು.

ಪಟ್ಟಣದ ಪುರಸಭೆ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾತನಾಡಿದ ಅವರು, ಬಾಗೇಪಲ್ಲಿ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿನ ಅನಧಿಕೃತ ಸ್ವತ್ತುಗಳಿಗೆ ಖಾತಾ ನೀಡುವ ಸಂಬಂಧ ಕಾಯ್ದೆ ಮತ್ತು ನಿಯಮಗಳಿಗೆ ತಿದ್ದುಪಡಿ ತಂದಿದ್ದು, ಅನಧಿಕೃತ ಸ್ವತ್ತುಗಳ (ಬಿ–ಖಾತಾ) ಮಾಲೀಕರು ತಮ್ಮ ಸ್ವತ್ತಿನ ಕಂದಾಯ ಪಾವತಿಸುವುದು ಸೇರಿದಂತೆ ಸಂಬಂಧಪಟ್ಟ ದಾಖಲೆಗಳನ್ನು ನೀಡಿ ಇ–ಖಾತಾ ಪಡೆಯಬಹುದಾಗಿದೆ ಎಂದರು,

ದಾಖಲೆ ಸಲ್ಲಿಸಿ ಖಾತಾ ಮಾಡಿಸಿ

ಪಟ್ಟಣದ ವ್ಯಾಪ್ತಿಯಲ್ಲಿ ನಿವೇಶನ, ವಸತಿ ಕಟ್ಟಡ, ವಾಣಿಜ್ಯ ಕಟ್ಟಡಗಳು, ಮನೆಯ ಆಸ್ತಿಗಳು, ಖಾಲಿ ನಿವೇಶನ ಹೊಂದಿರುವವರು ದಾಖಲೆ ಸಮೇತ ಪುರಸಭೆ ಕಚೇರಿಗೆ ತೆರಳಿ ಅರ್ಜಿ ಸಲ್ಲಿಸಿದರೆ ಕೂಡಲೇ ಇ–ಖಾತಾ ಮಾಡಿಕೊಡುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಮೂರು ತಿಂಗಳ ಕಾಲ ಖಾತೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ನೇರವಾಗಿ ಸಾರ್ವಜನಿಕರೇ ಪುರಸಭೆ ಕಚೇರಿಗೆ ತೆರಳಿ ದಾಖಲೆಗಳನ್ನು ಸಲ್ಲಿಸಿ ಇ–ಖಾತಾ ಪಡೆದುಕೊಳ್ಳಬೇಕು ಎಂದರು.

ಸರ್ಕಾರದ ಆದೇಶದಂತೆ ವಿಳಂಬ ಮಾಡದೆ ಅನಧಿಕೃತ ಸ್ವತ್ತುಗಳ ಮಾಲೀಕರಿಗೆ ಸರ್ಕಾರ ನೀಡಿರುವ ಅವಧಿಯೊಳಗೆ ಇ- ಖಾತಾ ಮಾಡಿಸಿಕೊಡುವಂತೆ ಪುರಸಭೆ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ಸಲ್ಲಿಸಬೇಕಾದ ದಾಖಲೆಗಳು

ಪುರಸಭೆ ಮುಖ್ಯಾಧಿಕಾರಿ ಎಂ.ಶ್ರೀನಿವಾಸ್ ಮಾತನಾಡಿ, ಸ್ವತ್ತಿನ ಮಾಲೀಕರು ಪುರಸಭೆಗೆ ಭೇಟಿ ನೀಡಿ, ಸ್ವತ್ತಿನ ಮಾಲೀಕತ್ವದ ದಾಖಲೆಗಳಾದ ನೋಂದಾಯಿತ ಪತ್ರಗಳು, ಚಾಲ್ತಿ ಸಾಲಿನವರೆಗೆ ಕಂದಾಯ ಪಾವತಿ ರಶೀದಿ, ಋಣಭಾರ ಪ್ರಮಾಣ ಪತ್ರ ಹಾಗೂ ಮಾಲೀಕರ ಫೋಟೋ, ಆಧಾರ್ ಕಾರ್ಡ್ ಸಲ್ಲಿಸಿ ಇ–ಖಾತಾ ಪಡೆಯಬಹುದಾಗಿದೆ ಎಂದರು. ಈ ಸಂದರ್ಭದಲ್ಲಿ ಪುರಸಭೆ ಅದ್ಯಕ್ಷ ಎ. ಶ್ರೀನಿವಾಸ್, ಉಪಾಧ್ಯಕ್ಷ ಸುಜಾತ ನರಸಿಂಹ ನಾಯ್ಡು ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಳಮೀಸಲು ಹೆಚ್ಚಳ: ಸಿದ್ದು vs ಬೆಲ್ಲದ್‌ ಜಟಾಪಟಿ
ಎಚ್ಚೆತ್ತ ಬೆಂ.ವಿವಿ: ಲೋಪ ಸರಿಪಡಿಸಿ 400 ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ