ಕನ್ನಡಪ್ರಭ ವಾರ್ತೆ ಅಜ್ಜಂಪುರ
ಮಂಗಳವಾರ ಅಜ್ಜಂಪುರದ ಬೀರಲಿಂಗೇಶ್ವರ ಸಮುದಾಯ ಭವನದಲ್ಲಿ ನಡೆದ ಶ್ರೀ ವಿದ್ಯಾಪಬ್ಲಿಕ್ ಶಾಲೆಯ ವಾರ್ಷಿಕೋತ್ಸವದಲ್ಲಿ ಮಾತನಾಡಿ, ಯಾವುದೇ ವೇದಿಕೆಗಳು ಸಿಕ್ಕಾಗ ಮಕ್ಕಳು ಉಪಯೋಗಿಸಿಕೊಂಡರೆ ನಿಮ್ಮಲ್ಲಿರುವ ಸೂಕ್ತವಾಗಿರುವ ಪ್ರತಿಭೆಗಳು ಹೊರಬರಲು ಸಾಧ್ಯ ಎಂದರು.
ಪಟ್ಟಣ ಪಂಚಾಯಿತಿ ಸದಸ್ಯ ನಿಸ್ಸಾರ್ ಅಹಮದ್ ಮಾತನಾಡಿ, ಮಕ್ಕಳು ಶಿಕ್ಷಣ ಪಡೆದು ಉನ್ನತ ವಿದ್ಯಾಭ್ಯಾಸ ಮಾಡಿ ಉನ್ನತ ಹುದ್ದೆಗೇರಿ ತಂದೆ, ತಾಯಿಗಳಿಗೆ ಕೀರ್ತಿ ತರಬೇಕೆಂದು ಸಲಹೆ ನೀಡಿದರು.ಈ ಸಮಾರಂಭದಲ್ಲಿ ಉಪಾಧ್ಯಕ್ಷ ಕವಿತಾ ಕೇಶವಮೂರ್ತಿ ಸುಮಲತ ಮಲ್ಲಿಕಾರ್ಜುನ್, ಬಿಂದು, ಯತೀಶ್, ತೀರ್ಥಪ್ರಸಾದ್, ಅಧ್ಯಕ್ಷರಾದ ಎ.ಜೆ.ರೇವಣ್ಣನವರು ಮಕ್ಕಳಿಗೆ ಹಿತವಚನ ಹೇಳಿದರು.
ಸಂಸ್ಥೆಯ ಕಾರ್ಯದರ್ಶಿ ಎ.ಎಲ್.ನಾಗೇಶ್ ಸ್ವಾಗತ ಮತ್ತು ಪ್ರಾಸ್ತಾವಿಕವಾಗಿ ಮಾತನಾಡಿದರು.
ಆಡಳಿತ ವರ್ಗದ ನಿರ್ದೇಶಕಿ ರೇಖಾ ಶಾಲಾ ಶಿಕ್ಷಕರಿಗೆ ಸಿಬ್ಬಂದಿ ವರ್ಗದವರಿಗೆ ನೆನಪಿನ ಕಾಣಿಕೆಯೊಂದಿಗೆ ಗೌರವಿಸಿದರು. ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಕ್ರೀಡಾ ಸ್ಪರ್ಧೆಯಲ್ಲಿ ಗೆದ್ದವರಿಗೆ ಬಹುಮಾನ ವಿತರಣೆ ಮಾಡಲಾಯಿತು. ಶಾಲಾ ಮಕ್ಕಳಿಂದ ರೈತ ನೃತ್ಯಗೀತೆ ಅತ್ಯುತ್ತಮವಾಗಿ ಮೂಡಿಬಂದಿತು.