ಕನ್ನಡಪ್ರಭ ವಾರ್ತೆ, ಚಿತ್ರದುರ್ಗ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಗರ ಸಿ.ವಲಯದ ಕಾಮನಬಾವಿ ಬಡಾವಣೆ ಕಾರ್ಯಕ್ಷೇತ್ರದಲ್ಲಿ ಆಯೋಜಿಸಿದ್ದ ವಿಶ್ವ ಜಲದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಕಲ ಜೀವರಾಶಿಗಳಿಗೂ ನೀರು ಬೇಕು. ಮಳೆ ನೀರನ್ನು ಹರಿದು ಹೋಗಲು ಬಿಡದೆ ಭೂಮಿಯಲ್ಲಿ ಇಂಗಿಸುವ ಕೆಲಸವಾದಾಗ ಅಂತರ್ಜಲ ಮಟ್ಟ ಹೆಚ್ಚಲಿದೆ ಎಂದರು.
ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ರಾಜ್ಯಾದ್ಯಂತ ನಾಲ್ಕು ನೂರು ಶುದ್ದ ನೀರಿನ ಘಟಕಗಳನ್ನು ನಿರ್ಮಿಸಲಾಗಿದೆ. 714 ಕೆರೆಗಳ ಹೂಳೆತ್ತಲಾಗಿದೆ. ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಏಳು ಲಕ್ಷ ಸಸಿಗಳನ್ನು ನಾಟಿ ಮಾಡಲಾಗಿದೆ. ಗಿಡ-ಮರಗಳನ್ನು ಕಡಿದು ಪರಿಸರವನ್ನು ನಾಶಪಡಿಸುವುದರಿಂದ ಸಕಾಲಕ್ಕೆ ಮಳೆಯಾಗುವುದಿಲ್ಲ. ಹಾಗಾಗಿ ಪ್ರತಿಯೊಬ್ಬರೂ ಪರಿಸರವನ್ನು ಕಾಪಾಡಬೇಕಾಗಿದೆ ಎಂದು ತಿಳಿಸಿದರು.ಈಗಿನಿಂದಲೇ ನೀರನ್ನು ಉಳಿತಾಯ ಮಾಡಿದರೆ ಮುಂದಿನ ಪೀಳಿಗೆಗೆ ಜಲವನ್ನು ಸಂರಕ್ಷಿಸಬಹುದು. ನಲ್ಲಿ ಮತ್ತು ಪೈಪ್‍ಗಳಲ್ಲಿ ನೀರು ಸೋರಿಕೆಯಾಗುವುದನ್ನು ತಡೆಯಬೇಕು. ಮನೆಯಲ್ಲಿ ಬಳಕೆಯಾಗುವ ನೀರನ್ನು ಚರಂಡಿಗೆ ಬಿಡದೆ ಗಿಡ ಮರಗಳಿಗೆ ಸೇರುವಂತೆ ಹಿಂಗು ಗುಂಡಿ ಮಾಡಿಕೊಳ್ಳಬೇಕು. ಮಳೆ ನೀರು, ಹನಿ ನೀರಾವರಿ ಪದ್ಧತಿಯನ್ನು ಅಳವಡಿಸಿಕೊಳ್ಳುವುದು ಒಳ್ಳೆಯದು ಎಂದರು.ಜನಜಾಗೃತಿ ವೇದಿಕೆ ಸದಸ್ಯೆ ರೂಪ ಜನಾರ್ಧನ್, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಯೋಜನಾಧಿಕಾರಿ ಬಿ.ಅಶೋಕ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಸುಧಾ ಇನ್ನೂ ಅನೇಕರು ವೇದಿಕೆಯಲ್ಲಿದ್ದರು.