ನಿಮ್ಮ ಹಣ, ನಿಮ್ಮ ಹಕ್ಕು ಅಭಿಯಾನ ಸದುಪಯೋಗಪಡಿಸಿಕೊಳ್ಳಿ-ಜಿಲ್ಲಾಧಿಕಾರಿ

KannadaprabhaNewsNetwork |  
Published : Dec 07, 2025, 03:15 AM IST
6ಎಚ್‌ವಿಆರ್3 | Kannada Prabha

ಸಾರಾಂಶ

ಭಾರತ ಸರ್ಕಾರವು ನಿಮ್ಮ ಹಣ, ನಿಮ್ಮ ಹಕ್ಕು ಎಂಬ ಶೀರ್ಷಿಕೆಯ ಸಮಗ್ರ ಅಭಿಯಾನವನ್ನು ಪ್ರಾರಂಭಿಸಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಹೇಳಿದರು.

ಹಾವೇರಿ: ಭಾರತ ಸರ್ಕಾರವು ನಿಮ್ಮ ಹಣ, ನಿಮ್ಮ ಹಕ್ಕು ಎಂಬ ಶೀರ್ಷಿಕೆಯ ಸಮಗ್ರ ಅಭಿಯಾನವನ್ನು ಪ್ರಾರಂಭಿಸಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಹೇಳಿದರು.ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯಲ್ಲಿ ಹಕ್ಕು ಪಡೆಯದ ಠೇವಣಿಗಳ ಇತ್ಯರ್ಥಕ್ಕಾಗಿ `ಅಪ್ಕಿ ಪೂಂಜಿ, ಆಪ್ಕಾ ಅಧಿಕಾರ್'''''''' (ನಿಮ್ಮ ಹಣ, ನಿಮ್ಮ ಹಕ್ಕು ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಹಣಕಾಸು ಸಚಿವಾಲಯದ ಹಣಕಾಸು ಸೇವೆಗಳ ಇಲಾಖೆಯಿಂದ ಸಂಯೋಜಿಸಲ್ಪಟ್ಟ ಈ ಉಪಕ್ರಮವು ಸೇರಿದಂತೆ ನಿಯಂತ್ರಕ ಸಂಸ್ಥೆಗಳ ಸಹಯೋಗದೊಂದಿಗೆ ಡಿ.31ರವರೆಗೆ ಕಾರ್ಯನಿರ್ವಹಿಸುತ್ತದೆ ಎಂದರು. ಈ ಅಭಿಯಾನವು ವ್ಯಕ್ತಿಗಳು ತಮ್ಮ ಹಕ್ಕು ಪಡೆಯದ ಠೇವಣಿಗಳನ್ನು ಮತ್ತು ಬ್ಯಾಂಕುಗಳು ವಿಮಾ ಕಂಪನಿಗಳು, ಪಿಂಚಣಿ ನಿಧಿಗಳು ಮತ್ತು ಮಾರುಕಟ್ಟೆ ಮಧ್ಯವರ್ತಿಗಳಂತಹ ವಿವಿಧ ಸಂಸ್ಥೆಗಳಿಂದ ಪ್ರಸ್ತುತ ಹೊಂದಿರುವ ಇತರ ನಿಷ್ಕ್ರೀಯ ಹಣಕಾಸು ಸ್ವತ್ತುಗಳನ್ನು ಹಿಂಪಡೆಯಲು ಸಹಾಯ ಮಾಡಲು ನಿರ್ದಿಷ್ಟವಾಗಿ ವಿನ್ಯಾಸಗೊಳಿಸಲಾಗಿದೆ. ನಮ್ಮ ಹಾವೇರಿ ಜಿಲ್ಲೆಯಲ್ಲಿ 1,55,001 ಖಾತೆಗಳಲ್ಲಿ 29.65 ಕೋಟಿ ರು. ಮೊತ್ತದ ಠೇವಣಿ ಇದೆ. ಹಾವೇರಿ ತಾಲೂಕು ಪಂಚಾಯತ ಸಭಾಭವನದಲ್ಲಿ ಇಂದು ಆಯೋಜಿಸಿರುವ ಶಿಬಿರದಲ್ಲಿ ಸಾರ್ವಜನಿಕರು ಮತ್ತು ಸಂಸ್ಥೆಗಳು ಭಾಗವಹಿಸಿ ಠೇವಣಿ ಪಡೆಯಬೇಕು ಎಂದರು.ಉದ್ದೇಶ: ಹಕ್ಕು ಪಡೆಯದ ಹಣಕಾಸು ಸ್ವತ್ತುಗಳನ್ನು ಅವುಗಳ ನಿಜವಾದ ಮಾಲೀಕರಿಗೆ ಹಿಂದಿರುಗಿಸುವುದು ಮತ್ತು ಬ್ಯಾಂಕುಗಳು, ವಿಮಾ ಕಂಪನಿಗಳು, ಪಿಂಚಣಿ ನಿಧಿಗಳು ಮತ್ತು ಮಾರುಕಟ್ಟೆ ಮಧ್ಯವರ್ತಿಗಳು ಹೊಂದಿರುವ ಹಕ್ಕು ಪಡೆಯದ ಠೇವಣಿಗಳು ಮತ್ತು ಇತರ ನಿಷ್ಕೃೀಯ ಹಣಕಾಸು ಸ್ವತ್ತುಗಳನ್ನು ಮರಳಿ ಪಡೆಯಲು ನಾಗರಿಕರಿಗೆ ಸಹಾಯ ಮಾಡುವುದಾಗಿದೆ.ಭಾರತ ಸರ್ಕಾರದಿಂದ ಪ್ರಾರಂಭಿಸಲಾದ ಅಭಿಯಾನ, ಹಣಕಾಸು ಸೇವೆಗಳ ಇಲಾಖೆಯಿಂದ ಸಂಯೋಜಿಸಲ್ಪಟ್ಟಿದೆ. ಹಣಕಾಸು ಸಚಿವಾಲಯದ ಸಹಯೋಗದೊಂದಿಗೆ ಕಾರ್ಯಗತಗೊಳಿಸಲಾಗಿದೆ. ಡಿ.31ರ ವರೆಗೆ ಅಭಿಯಾನ ಜರುಗಲಿದೆ. ಸಾರ್ವಜನಿಕರು ಈ ಅಭಿಯಾನದ ಸದುಪಯೋಗ ಪಡಿಸಿಕೊಳ್ಳಬೇಕೆಂದು ಬ್ಯಾಂಕ್ ಆಫ್ ಬರೋಡಾ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ (ಲೀಡ್ ಬ್ಯಾಂಕ್) ಪ್ರಧಾನ ವ್ಯವಸ್ಥಾಪಕ ಪ್ರಭುದೇವ ಎನ್.ಜಿ ತಿಳಿಸಿದರು. ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜರುಗಿದ ಶಿಬಿರದಲ್ಲಿ ಆರ್‌ಬಿಐನ ಎಜಿಎಂ. ಸೂರಜ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪರಮೇಶ್ವರ ಹುಬ್ಬಳ್ಳಿ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆದರ್ಶ ಸಮಾಜ ನಿರ್ಮಾಣದಲ್ಲಿ ವಕೀಲರ ಪಾತ್ರ ಮಹತ್ವದ್ದು: ನ್ಯಾಯಾಧೀಶೆ ನಾಗವೇಣಿ
ಅಂಬೇಡ್ಕರ್ ಸಮಾಜ ಸುಧಾರಣೆಯ ಮಾದರಿ ಅನನ್ಯ: ಮರಿರಾಮಪ್ಪ