ಮಂಗನ ಕಾಯಿಲೆಗೆ 5 ವರ್ಷದ ಬಾಲಕಿ ಬಲಿ ಬಲಿ

ಸಾರಾಂಶ

ಉತ್ತರ ಕನ್ನಡ ಜಿಲ್ಲೆಯಲ್ಲಿ ಶಂಕಿತ ಮಂಗನಕಾಯಿಲೆಗೆ ಐದು ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅರೆಂದೂರಿನ ಬಾಲಕಿಯು ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾಳೆ.

ಸಿದ್ದಾಪುರ :  ಉತ್ತರ ಕನ್ನಡ ಜಿಲ್ಲೆಯಲ್ಲಿ ಶಂಕಿತ ಮಂಗನಕಾಯಿಲೆಗೆ ಐದು ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅರೆಂದೂರಿನ ಬಾಲಕಿಯು ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾಳೆ.

ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಕೆಯ ಸಾವಿನಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ವರ್ಷ ಜನವರಿಯಿಂದ ಈವರೆಗೆ ಒಂಬತ್ತು ಮಂದಿ ಬಲಿಯಾದಂತಾಗಿದೆ.

ಸಿದ್ದಾಪುರ ತಾಲೂಕೊಂದರಲ್ಲೇ ಈವರೆಗೆ ಎಂಟು ಮಂದಿ ಬಲಿಯಾಗಿದ್ದು, ಶಿರಸಿಯಲ್ಲೂ ಒಬ್ಬ ವ್ಯಕ್ತಿ ಮಂಗನಕಾಯಿಲೆಗೆ ಈ ವರ್ಷ ಸಾವಿಗೀಡಾಗಿದ್ದಾರೆ. ಈ ವರ್ಷ ಜನವರಿಯಿಂದ ಜಿಲ್ಲೆಯಲ್ಲಿ ಸುಮಾರು 90ಕ್ಕೂ ಹೆಚ್ಚು ಮಂಗನಕಾಯಿಲೆ ಪ್ರಕರಣಗಳು ಪತ್ತೆಯಾಗಿವೆ.

Share this article