ಅಣ್ಣನಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಗೆ ಮಗು : ಬಂಧಿಸಿ ಪೋಕ್ಸೊ ಪ್ರಕರಣ ದಾಖಲು

ಸಾರಾಂಶ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಬುಧವಾರ ನಡೆದಿದ್ದು, ಘಟನೆ ಸಂಬಂಧ ಆರೋಪಿಯನ್ನು ಮುಂಡಗೋಡ ಪೊಲೀಸರು ಬಂಧಿಸಿ ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ.

 ಮುಂಡಗೋಡ(ಉತ್ತರ ಕನ್ನಡ): ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಬುಧವಾರ ನಡೆದಿದ್ದು, ಘಟನೆ ಸಂಬಂಧ ಆರೋಪಿಯನ್ನು ಮುಂಡಗೋಡ ಪೊಲೀಸರು ಬಂಧಿಸಿ ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ. 

ಮುಂಡಗೋಡ ತಾಲೂಕಿನ ಕುಂದರ್ಗಿ ಗ್ರಾಮದ ಗಿರೀಶ ಭೋವಿ (19) ಬಂಧಿತ ಆರೋಪಿ. ಸಂತ್ರಸ್ತ ಬಾಲಕಿಗೆ ಸಂಬಂಧದಲ್ಲಿ ಅಣ್ಣನಾಗಿರುವ ಈತ, 9 ತಿಂಗಳ ಹಿಂದೆ ಬಾಲಕಿ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದ. ಇದರಿಂದ ಗರ್ಭ ಧರಿಸಿದ್ದ ಬಾಲಕಿ ಯಲ್ಲಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ.

Share this article