ಇಂದು ಉತ್ತರ ಕನ್ನಡ ಜಿಲ್ಲೆಯ 5 ತಾಲೂಕಿನ ಶಾಲೆ- ಕಾಲೇಜಿಗೆ ರಜೆ

Published : Jul 08, 2024, 06:42 AM IST
nancy tiwari

ಸಾರಾಂಶ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಾರವಾರ:  ಉತ್ತರ ಕನ್ನಡ ಜಿಲ್ಲೆಯಲ್ಲಿ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜು. 8, 10 ಹಾಗೂ 11ರಂದು ಭಾರಿ ಮಳೆಯಾಗಲಿದೆ ಹಾಗೂ ಅಘನಾಶಿನಿ ನದಿ ನೀರಿನ ಮಟ್ಟದಲ್ಲೂ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

ಜಿಲ್ಲೆಯ ಕರಾವಳಿಯ 5 ತಾಲೂಕಿಗೆ ಜು. 8ರಂದು ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ. ಆದೇಶ ಹೊರಡಿಸಿದ್ದಾರೆ. ಈ ತಾಲೂಕಿನಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ ಮತ್ತು ಕಾರವಾರ ತಾಲೂಕಿನ ಎಲ್ಲ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

PREV
Get the latest news, developments and stories from Uttara Kannada district (ಉತ್ತರ ಕನ್ನಡ ಸುದ್ದಿ) — covering local politics, environment, coastal community, infrastructure, tourism, disasters, culture and social issues on Kannada Prabha News.

Recommended Stories

ಶ್ರವಣ, ಕೀರ್ತನೆ ಭಕ್ತಿಯ ಬಹುಮುಖ್ಯ ವಿಧ: ಸ್ವರ್ಣವಲ್ಲೀ ಶ್ರೀ
ಪ್ರತಿ ಸಲದ ರಕ್ತದಾನದಿಂದ ಮೂರು ಜೀವ ಉಳಿಸಲು ಸಾಧ್ಯ: ಜಯಕರ್ ಶೆಟ್ಟಿ