‘ಸುವರ್ಣ ಗಂಗೆ’ಯಾದ ಉತ್ತರ ವಿವಿ ಸ್ನಾತಕೋತ್ತರ ಕೇಂದ್ರ

KannadaprabhaNewsNetwork |  
Published : Oct 31, 2025, 01:15 AM IST
      ಸಿಕೆಬಿ-2 ಕೋಲಾರ ತಾಲ್ಲೂಕಿನ ಮಂಗಸಂದ್ರದಲ್ಲಿರುವ ಬೆಂಗಳೂರು ಉತ್ತರ ವಿ.ವಿ ಸ್ನಾತಕೋತ್ತರ ಕೇಂದ್ರದಲ್ಲಿ  ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್‌ ಹಾಸ್ಟೆಲ್‌ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು   | Kannada Prabha

ಸಾರಾಂಶ

ಕೋಲಾರ ಜಿಲ್ಲೆ ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದು, ಇಲ್ಲಿನ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಕಲಿತ ವಿದ್ಯಾರ್ಥಿಗಳಲ್ಲಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ನ್ಯಾಯಾಧೀಶರ ಹುದ್ದೆ ಅಲಂಕರಿಸಿದ್ದಾರೆ. ವಿದ್ಯಾರ್ಥಿಗಳು ಓದಿನಲ್ಲಿ ಆಸಕ್ತಿ ವಹಿಸಿ ಉತ್ತಮ ಅಂಕ ಗಳಿಸಿ ಜೀವನದಲ್ಲಿ ಯಶಸ್ಸು ಸಾಧಿಸಬೇಕು. ಅಲ್ಲದೆ, ಓದಿಗೆ ಪ್ರೋತ್ಸಾಹ ನೀಡುತ್ತಿರುವ ಪೋಷಕರು ಹಾಗೂ ಶಿಕ್ಷಕರನ್ನು ವಿದ್ಯಾರ್ಥಿಗಳು ನೆನೆಯಬೇಕು.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಕೋಲಾರ ತಾಲೂಕಿನ ಮಂಗಸಂದ್ರದಲ್ಲಿರುವ ಬೆಂಗಳೂರು ಉತ್ತರ ವಿವಿಯ ಸ್ನಾತಕೋತ್ತರ ಕೇಂದ್ರಕ್ಕೆ ಈಗ ‘ಸುವರ್ಣ ಗಂಗೆ’ ಎಂದು ನಾಮಕರಣ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.

ಕೋಲಾರ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಉನ್ನತ ಶಿಕ್ಷಣ ಇಲಾಖೆ, ನಗರದ ಮಹಿಳಾ ಸರ್ಕಾರಿ ಕಾಲೇಜು ಹಾಗೂ ಸರ್ಕಾರಿ ಪ್ರಥಮದರ್ಜೆ ಕಾಲೇಜು ಆಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ನೂತನ ಕಟ್ಟಡಗಳ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್‌ ರೊಂದಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಕಾಲೇಜುಗಳ ಅಭಿವೃದ್ಧಿಗೆ ₹103 ಕೋಟಿ

ಕೋಲಾರದಲ್ಲಿ ಒಟ್ಟು 103 ಕೋಟಿ ರೂಗಳ ಅನುದಾನದಲ್ಲಿ ವಿವಿಧ ಕಾಲೇಜು, ವಿಶ್ವವಿದ್ಯಾಲಯಗಳ ಕಟ್ಟಡ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಮಹಿಳಾ ಸರ್ಕಾರಿ ಕಾಲೇಜು ಅಭಿವೃದ್ಧಿಗೆ 43.67 ಕೋಟಿ ರೂ ಅನುದಾನ ಒದಗಿಸಲಾಗಿದೆ. ಇದರಲ್ಲಿ ಮೊದಲ ಹಂತದ ಕಾಮಗಾರಿಗೆ 21.17 ಕೋಟಿ ರೂ, ಎರಡನೇ ಹಂತದ ಕಾಮಗಾರಿಗೆ 20 ಕೋಟಿ ರೂ ಮತ್ತು ಮೂರನೇ ಹಂತದಲ್ಲಿ ಪಿ.ಜಿ ಬ್ಲಾಕ್ ಹಾಗೂ ಸೈನ್ಸ್ ಬ್ಲಾಕ್‍ನ ಮೊದಲ ಮತ್ತು ಎರಡನೇ ಮಹಡಿಗಳ ನಿರ್ಮಾಣಕ್ಕಾಗಿ 2.50 ಕೋಟಿ ರೂಗಳ ಅನುದಾನ ಮೀಸಲಿಡಲಾಗಿದೆ ಎಂದರು.

₹40 ಕೋಟಿ ವೆಚ್ಚದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ನೂತನ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಅರಹಳ್ಳಿ ಸರ್ಕಾರಿ ಕಾನೂನು ಕಾಲೇಜು ಆವರಣದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ 6.82 ಕೋಟಿ ರು.ಗಳ ವೆಚ್ಚದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ. ಈ ಕಾಲೇಜಿನ ವಿದ್ಯಾರ್ಥಿನಿಯರು ಸರ್ಕಾರದ ದೀಪಿಕಾ ಯೋಜನೆಯನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.ಜಿಲ್ಲೆಗೆ ವೈದ್ಯಕೀಯ ಕಾಲೇಜುಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ, ಅಂತರಗಂಗೆಯಿಂದ ಕೋಲಾರಮ್ಮ ಕೆರೆವರೆಗೆ 100 ಕೋಟಿ ರು. ಗಳ ವೆಚ್ಚದಲ್ಲಿ ಕಾಲುವೆ ನಿರ್ಮಾಣ ಹಾಗೂ ಕೋಲಾರ ನಗರಕ್ಕೆ ರಿಂಗ್ ರಸ್ತೆ ನಿರ್ಮಾಣಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಮುಖ್ಯಮಂತ್ರಿ ವಿಶೇಷ ಅನುದಾನ ನೀಡಲಿದ್ದಾರೆ ಎಂದು ತಿಳಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್‌ ಮಾತನಾಡಿ, ಈ ಜಿಲ್ಲೆ ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದು, ಇಲ್ಲಿನ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಕಲಿತ ವಿದ್ಯಾರ್ಥಿಗಳಲ್ಲಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ನ್ಯಾಯಾಧೀಶರ ಹುದ್ದೆ ಅಲಂಕರಿಸಿದ್ದಾರೆ. ವಿದ್ಯಾರ್ಥಿಗಳು ಓದಿನಲ್ಲಿ ಆಸಕ್ತಿ ವಹಿಸಿ ಉತ್ತಮ ಅಂಕ ಗಳಿಸಿ ಜೀವನದಲ್ಲಿ ಯಶಸ್ಸು ಸಾಧಿಸಬೇಕು. ಅಲ್ಲದೆ, ಓದಿಗೆ ಪ್ರೋತ್ಸಾಹ ನೀಡುತ್ತಿರುವ ಪೋಷಕರು ಹಾಗೂ ಶಿಕ್ಷಕರನ್ನು ವಿದ್ಯಾರ್ಥಿಗಳು ನೆನೆಯಬೇಕು’ ಎಂದರು.

ವಿದ್ಯಾವಂತ ಜಿಲ್ಲೆ ಆಗಲಿದೆ

ಶಾಸಕ ಕೊತ್ತೂರು ಜಿ.ಮಂಜುನಾಥ್ ಮಾತನಾಡಿ, ‘ನಗರದ ಹೃದಯ ಭಾಗದಲ್ಲಿರುವ ಕಾಲೇಜುಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಇನ್ನೂ ನೂರು ಕೋಟಿಗೂ ಹೆಚ್ಚಿನ ಅನುದಾನ ತಂದು ಜಿಲ್ಲೆಯ ಎಲ್ಲಾ ಸರ್ಕಾರಿ ಕಾಲೇಜುಗಳನ್ನು ಅಭಿವೃದ್ಧಿ ಪಡಿಸಿ ಉತ್ತಮ ವಿದ್ಯಾವಂತರನ್ನಾಗಿ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಜಿಲ್ಲೆಯು ಸಂಪೂರ್ಣ ವಿದ್ಯಾವಂತ ಜಿಲ್ಲೆಯಾಗಲಿದೆ ಎಂದು ಹೇಳಿದರು.ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ನಗರಸಭೆ ಅಧ್ಯಕ್ಷೆ ಲಕ್ಷ್ಮಿದೇವಮ್ಮ, ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಹನೀಫ್, ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಶಿವಕುಮಾರ್, ಸಿಂಡಿಕೇಟ್ ಸದಸ್ಯರು, ಜಿಲ್ಲಾಧಿಕಾರಿ ಎಂ.ಆರ್.ರವಿ, ಕುಲಪತಿ ಪ್ರೊ.ನಿರಂಜನ ವಾನಳ್ಳಿ, ಕುಲಸಚಿವರಾದ ಡಾ.ಎನ್.ಲೋಕನಾಥ್, ಸಿ.ಎನ್.ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್, ಮಹಿಳಾ ಕಾಲೇಜಿನ ಪ್ರಾಂಶುಪಾಲ ಗಂಗಾಧರ್ ರಾವ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಮುನಿಶಾಮಪ್ಪ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ