ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆ ಹಾಗೂ ವಿವಿಧ ಸಹಕಾರ ಸಂಸ್ಥೆಗಳ ಸಹಯೋಗದೊಂದಿಗೆ ನ. 14ರಿಂದ 20ರವರೆಗೆ 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಉಡುಪಿ ಜಿಲ್ಲೆಯಾದ್ಯಂತ ನಡೆಯಲಿದೆ ಎಂದು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ತಿಳಿಸಿದರು.
ಉಡುಪಿ: ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆ ಹಾಗೂ ವಿವಿಧ ಸಹಕಾರ ಸಂಸ್ಥೆಗಳ ಸಹಯೋಗದೊಂದಿಗೆ ನ. 14ರಿಂದ 20ರವರೆಗೆ 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಉಡುಪಿ ಜಿಲ್ಲೆಯಾದ್ಯಂತ ನಡೆಯಲಿದೆ ಎಂದು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ತಿಳಿಸಿದರು.ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿ, ‘ಸಹಕಾರ ಸಂಸ್ಥೆಗಳ ಬಲಪಡೆಯುವಿಕೆಯಲ್ಲಿ ಉತ್ತಮ ವಾತಾವರಣ, ತಂತ್ರಜ್ಞಾನ, ಕೌಶಲ್ಯಾಧಾರಿತ ವೃತ್ತಿಪರ ಸೇವೆ’ ಎಂಬ ಧ್ಯೇಯ ವಾಕ್ಯದೊಂದಿಗೆ ಈ ಬಾರಿಯ ಸಹಕಾರಿ ಸಪ್ತಾಹ ನಡೆಯಲಿದೆ.
ಶನಿವಾರ ಸಂತೆಕಟ್ಟೆಯ ಬೃಂದಾವನ ಹೋಟೆಲ್ ರೂಫ್ ಟಾಪ್ ಹಾಲ್‌ನಲ್ಲಿ ಸಪ್ತಾಹವನ್ನು ಸಹಕಾರ ರತ್ನ ಜಯಕರ ಶೆಟ್ಟಿ ಇಂದ್ರಾಳಿ ಉದ್ಘಾಟಿಸಲಿದ್ದು, ಕರಾವಳಿ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಅಧ್ಯಕ್ಷ ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಯಶ್‌ಪಾಲ್ ಸುವರ್ಣ, ಸಹಕಾರ ಇಲಾಖೆ ಉಪನಿಬಂಧಕಿ ಲಾವಣ್ಯ, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆ ಉಪನಿರ್ದೆಶಕ ಎಂ. ಎಂ. ಆನಂದ ಮೊದಲಾದವರು ಭಾಗವಹಿಸಲಿದ್ದಾರೆ ಎಂದರು.15ರಂದು ಕೋಟೇಶ್ವರದ ಶಾರದ ಕಲ್ಯಾಣ ಮಂಟಪದಲ್ಲಿ ‘ಗಣೀಕರಣ, ಮಾಹಿತಿ ತಂತ್ರಜ್ಞಾನ ಮತ್ತು ಡಿಜಿಟಲೀಕರಣ ಪ್ರಕ್ರಿಯೆಗಳು ಸಹಕಾರ ಸಂಘಗಳ ಬೆಳವಣಿಗೆಗೆ ಪೋಷಕ’ ಎಂಬ ಕಾರ್ಯಾಗಾರ ನಡೆಯಲಿದ್ದು, ಕೃಷಿ ಪತ್ತಿನ ಸಹಕಾರ ಸಂಘದ ನಿವೃತ್ತ ನೌಕರಿಗೆ ಸನ್ಮಾನ ಕಾರ್ಯಕ್ರಮ ಜರಗಲಿದೆ. ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ. ಮಹೇಶ್ ಹೆಗ್ಡೆ ಮೊಳಹಳ್ಳಿ ಉದ್ಘಾಟಿಸಲಿದ್ದಾರೆ.16ರಂದು ಕೋಟ ಬಿ.ಸಿ ಹೊಳ್ಳ ಸಹಕಾರ ಸಭಾಭವನದಲ್ಲಿ ‘ಸಹಕಾರ ಶಿಕ್ಷಣ ತರಬೇತಿ- ಪ್ರಚಾರ ಮೂಲಕ ಸಹಕಾರ ಸಂಸ್ಥೆಗಳಲ್ಲಿ ಪರಿಣಾಮಕಾರಿ ಬದಲಾವಣೆ’ ಕಾರ್ಯಾಗಾರ ಆಯೋಜಿಸಲಾಗಿದ್ದು, ಜಯಕರ ಶೆಟ್ಟಿ ಕಾರ್ಯಾಗಾರ ಉದ್ಘಾಟಿಸಲಿದ್ದಾರೆ.17ರಂದು ಬೆಳಗ್ಗೆ 9.30ಕ್ಕೆ ಬಜಗೋಳಿ ಗಣಪತಿ ಸಭಾಭವನದಲ್ಲಿ ‘ಸಹಕಾರ ಸಂಸ್ಥೆಗಳ ಮೂಲಕ ಮೌಲ್ಯವರ್ಧನೆ- ಬ್ರಾಂಡ್ ನಿರ್ಮಾಣ’ ಕಾರ್ಯಾಗಾರವನ್ನು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ.18ರಂದು ಬೆಳಗ್ಗೆ 9.30ಕ್ಕೆ ಪಡುಬಿದ್ರಿ ಸಹಕಾರಿ ಸೊಸೈಟಿಯಲ್ಲಿ ‘ಸಾರ್ವಜನಿಕ ಮತ್ತು ಖಾಸಗಿ ಸಹಕಾರಿ ಪಾಲುದಾರಿಕೆ ಬಲಪಡಿಸುವಿಕೆ’ ಕಾರ್ಯಾಗಾರ ಏರ್ಪಡಿಸಲಾಗಿದೆ. ವಕೀಲ ಸುಧೀರ್ ಕುಮಾರ್ ಮರೋಳಿ ಉದ್ಘಾಟಿಸಲಿದ್ದಾರೆ.19 ರಂದು 2.30ಕ್ಕೆ ಕೋಟೇಶ್ವರದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ‘ಮಹಿಳೆಯರು, ಯುವಜನರು ಮತ್ತು ಸಮಾಜದ ಅಬಲವರ್ಗಗಳು ಸಹಕಾರ ಕ್ಷೇತ್ರದಲ್ಲಿ ಪಾಲ್ಗೊಳ್ಳುವಿಕೆ’ ಕಾರ್ಯಾಗಾರವನ್ನು ಶಾಸಕ ಕಿರಣ್ ಕೊಡಿ ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರು.20ರಂದು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ‘ಪರಿಸರ ಸಂರಕ್ಷಣೆ, ಲಿಂಗ ಸಮಮಾನತೆ ಮತ್ತು ವಿಶ್ವ ಶಾಂತಿಗಾಗಿ ಸಹಕಾರ ಸಂಸ್ಥೆಗಳು’ ಎಂಬ ವಿಷಯದಲ್ಲಿ ಕಾರ್ಯಾಗಾರ ಮತ್ತು ರಾಜ್ಯ ಮಟ್ಟದ ಸಪ್ತಾಹ ಸಮಾರೋಪ ಕಾರ್ಯಕ್ರಮ ನಡೆಯಲಿದ್ದು, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ನೇತೃತ್ವ ವಹಿಸಲಿದ್ದಾರೆ ಎಂದು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಯೂನಿಯನ್ ನಿರ್ದೇಶಕ ಸುಧೀರ್ ಕುಮಾರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್, ಶ್ರೀಧರ ಪಿ.ಎಸ್. ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.