ನಗರಕೆರೆ ಗ್ರಾಪಂ ಅಧ್ಯಕ್ಷರಾಗಿ ವಿ.ಎನ್.ಗಿರೀಶ್ ಆಯ್ಕೆ

KannadaprabhaNewsNetwork | Published : Nov 21, 2024 1:00 AM

ಸಾರಾಂಶ

ಹಿಂದಿನ ಅಧ್ಯಕ್ಷೆ ಶಿಲ್ಪಜಯಲಿಂಗು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ವಿ.ಎನ್.ಗಿರೀಶ್ ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಗಳಾದ, ತಾಪಂ ಇಒ ರಾಮಲಿಂಗಯ್ಯ ಘೋಷಣೆ ಮಾಡಿದರು.

ಕನ್ನಡಪ್ರಭ ವಾರ್ತೆ ಮದ್ದೂರು

ತಾಲೂಕಿನ ನಗರಕೆರೆ ಗ್ರಾಪಂ ನೂತನ ಅಧ್ಯಕ್ಷರಾಗಿ ವಿ.ಎನ್.ಗಿರೀಶ್ ಅವಿರೋಧವಾಗಿ ಆಯ್ಕೆಯಾದರು.

ಸಂಘದ ಸಭಾಂಗಣದಲ್ಲಿ ಬುಧವಾರ ನಡೆದ ಚುನಾವಣೆಯಲ್ಲಿ ಹಿಂದಿನ ಅಧ್ಯಕ್ಷೆ ಶಿಲ್ಪಜಯಲಿಂಗು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ವಿ.ಎನ್.ಗಿರೀಶ್ ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಗಳಾದ, ತಾಪಂ ಇಒ ರಾಮಲಿಂಗಯ್ಯ ಘೋಷಣೆ ಮಾಡಿದರು.

ನೂತನ ಅಧ್ಯಕ್ಷ ವಿ.ಎನ್.ಗಿರೀಶ್ ಸದಸ್ಯರಿಂದ ಅಭಿನಂದನೆ ಸ್ವೀಕರಿಸಿದ ವಿ.ಎನ್.ಗಿರೀಶ್ ಮಾತನಾಡಿ, ಗ್ರಾಪಂ ವ್ಯಾಪ್ತಿಯಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಸದಸ್ಯರು ಹಾಗೂ ಅಧಿಕಾರಿಗಳ ವಿಶ್ವಾಸಕ್ಕೆ ಪಡೆದು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದರು.

ಸರ್ಕಾರದಿಂದ ಬರುವ ಎಲ್ಲಾ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಂಡು ಅನುಕೂಲ ಕಲ್ಪಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ವೇಳೆ ಗ್ರಾಪಂ ಉಪಾಧ್ಯಕ್ಷೆ ಜಯರತ್ನಮ್ಮ, ಸದಸ್ಯರಾದ ಎನ್.ಡಿ.ಶಿವಚರಣ್, ಚಂದ್ರಕಲಾ, ಎ.ಟಿ.ಉಮಾ, ಗೌರಮ್ಮ, ಎನ್.ಅರ್.ಶಿಲ್ಪ, ಯು.ಆರ್.ಶ್ವೇತ, ಯು.ಆರ್.ಮಹದೇವ, ಯು.ಎಸ್.ಗಿರೀಶ್, ಜಿ.ಆರ್.ಅನಿತಾ, ಬಿ.ಸಿ.ಲಕ್ಷ್ಮಿ, ಸುಮಿತ್ರ, ಚಂದ್ರಬಾಯಿ, ರುದ್ರಯ್ಯ, ಮಲ್ಲೇಶ್ಗೌಡ, ಕಿರಣ್ ಕುಮಾರ್, ಸುರೇಶ್, ಮುಖಂಡರಾದ ಶಂಕರಯ್ಯ, ಲಿಂಗರಾಜು, ರಾಜಣ್ಣ, ಸುಂದರೇಶ್, ಉಮಾಶಂಕರ್, ಗೋವಿಂದು, ಕಾಂತರಾಜು, ಜಯಕುಮಾರ್ ಇದ್ದರು.

ನ.26 ಮತ್ತು 27 ರಂದು ಕೃಷಿ ಮೇಳ

ಮಂಡ್ಯ: ತಾಲೂಕಿನ ವಿ.ಸಿ.ಫಾರ್ಮ್ ವಲಯ ಕೃಷಿ ಸಂಶೋಧನಾ ಕೇಂದ್ರದಲ್ಲಿ ನ.26 ಮತ್ತು 27 ರಂದು ಕೃಷಿ ಮೇಳ ನಡೆಯಲಿದೆ. ವಲಯ ಕೃಷಿ ಸಂಶೋಧನಾ ಕೇಂದ್ರ, ಕೃಷಿ ಮಹಾವಿದ್ಯಾಲಯ ಮತ್ತು ಕೃಷಿ ವಿಜ್ಞಾನ ಕೇಂದ್ರ, ರಾಜ್ಯ ಕೃಷಿ, ತೋಟಗಾರಿಕೆ, ರೇಷ್ಮೆ, ಅರಣ್ಯ, ಪಶುಸಂಗೋಪನೆ, ಮೀನುಗಾರಿಕೆ ಇಲಾಖೆಗಳು ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ ಮತ್ತು ತುಮಕೂರು ಜಿಲ್ಲೆ ಹಾಗೂ ಮೈಸೂರು ಕಾವೇರಿ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ ಇವರುಗಳು ಸಹಯೋಗದಲ್ಲಿ ಎರಡು ದಿನಗಳ ನಡೆಯಲಿರುವ ಕೃಷಿ ಮೇಳವನ್ನು ನ.26 ರಂದು ಬೆಳಗ್ಗೆ 9.30ಕ್ಕೆ ಉದ್ಘಾಟನೆಯಾಗಲಿದೆ. ನ.27 ರಂದು ಮಧ್ಯಾಹ್ನ 3.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ.

ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ, ಸಂಸದ ಎಚ್.ಡಿ.ಕುಮಾರಸ್ವಾಮಿ ಘನ ಉಪಸ್ಥಿತಿಯಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸುವರು. ಜಿಲ್ಲೆಯ ಶಾಸಕರು, ಬೆಂಗಳೂರು ಹೊಸಕೋಟೆ ಶಾಸಕ ಹಾಗೂ ಕೃಷಿ ವಿವಿ ವ್ಯವಸ್ಥಾಪನಾ ಮಂಡಳಿ ಸದಸ್ಯ ಶರತ್ ಬಚ್ಚೇಗೌಡ, ಗಾಣದಾಳು ಗ್ರಾಪಂ ಅಧ್ಯಕ್ಷ ಎಂ.ಬಿ.ಕುಳ್ಳೇಗೌಡ, ಬೆಂಗಳೂರು ಕೃಷಿ ವಿವಿ ಕುಲಪತಿ ಡಾ.ಎಸ್.ವಿ.ಸುರೇಶ್ ಭಾಗವಹಿಸಲಿದ್ದಾರೆ.

Share this article