ಕನ್ನಡಪ್ರಭ ವಾರ್ತೆ ಪಾಂಡವಪುರ
ತಾಲೂಕಿನ ವಡ್ಡರಹಳ್ಳಿ ಗ್ರಾಮದ ವಿ.ಎಸ್.ನಿಂಗೇಗೌಡರು ಕಳೆದ 25 ವರ್ಷಗಳಿಂದಲೂ ಹಲವು ಸಹಕಾರಿ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಅಧ್ಯಕ್ಷ, ನಿರ್ದೇಶಕರಾಗಿ 25 ವರ್ಷ, ಕೆ.ಬೆಟ್ಟಹಳ್ಳಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಲ್ಲಿ 25 ವರ್ಷಗಳಿಂದ ಅಧ್ಯಕ್ಷ, ನಿರ್ದೇಶಕರಾಗಿ, ಜಿಲ್ಲಾ ಸಹಕಾರ ಯೂನಿಯನ್‌ನಲ್ಲಿ 10 ವರ್ಷಗಳ ಕಾಲ ಅಧ್ಯಕ್ಷ, ನಿರ್ದೇಶಕರಾಗಿ, ಆರ್‌ಬಿಜಿ ಇಫ್ಕೋ ಸಂಸ್ಥೆಯಲ್ಲಿ ಸುಮಾರು 10 ವರ್ಷಗಳ ಕಾಲ ಸದಸ್ಯರಾಗಿ ಸೇವೆ ಮಾಡಿದ್ದಾರೆ.
ಕೆ.ಬೆಟ್ಟಹಳ್ಳಿ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ಕಾರ್ಯದರ್ಶಿಯಾಗಿ, ತಾಪಂ ಸದಸ್ಯರಾಗಿ, ಫ್ರೆಂಚ್‌ರಾಕ್ಸ್ ಲಯನ್ಸ್ ಕ್ಲಬ್‌ನಲ್ಲಿ ಕಾರ್ಯದರ್ಶಿ ಹಾಗೂ ಸಕ್ರೀಯ ಸದಸ್ಯರಾಗಿ ಹಲವು ವರ್ಷಗಳಿಂದ ಸೇವೆ ಸಲ್ಲಿಸಿದ್ದಾರೆ.ಪ್ರಸ್ತುತ ತಾಲೂಕು ಟಿಎಪಿಸಿಎಂಎಸ್ ಸಂಸ್ಥೆ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಅಲ್ಲದೇ, ಸಹಕಾರ ಇಲಾಖೆ ಹಾಗೂ ಸಹಕಾರ ಮಹಾಮಂಡಳಿ ನೀಡುವ ಹಲವು ತರಬೇತಿಗಳಲ್ಲಿ ಭಾಗವಹಿಸಿ ಅನುಭವ ಪಡೆದುಕೊಂಡಿದ್ದಾರೆ.
ಸಹಕಾರ ರತ್ನ ಪ್ರಶಸ್ತಿಗೆ ಭಾಜನರಾದ ವಿ.ಎಸ್.ನಿಂಗೇಗೌಡರನ್ನು ಕ್ಷೇತ್ರದ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಮನ್ಮುಲ್ ನಿರ್ದೇಶಕ ಸಿ.ಶಿವಕುಮಾರ್, ಜಿಪಂ ಮಾಜಿ ಸದಸ್ಯ ಸಿ.ಅಶೋಕ್ ಸೇರಿದಂತೆ ಅನೇಕ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಪಾಂಡವಪುರ
ಮಹಾಸಭೆಯಲ್ಲಿ ಪೋಷಕರು ಹಾಗೂ ಶಿಕ್ಷಕರೊಂದಿಗೆ ಸಂವಾದ ಏರ್ಪಡಿಸಿರುವುದರಿಂದ ಪ್ರತಿಯೊಬ್ಬ ಮಕ್ಕಳ ಪೋಷಕರು ತಪ್ಪದೇ ಮಹಾಸಭೆಗೆ ಆಗಮಿಸಬೇಕು ಎಂದು ಮನವಿ ಮಾಡಲಾಯಿತು.
ಈ ವೇಳೆ ಎಸ್ ಡಿಎಂಸಿ ಅಧ್ಯಕ್ಷ ಹಾರೋಹಳ್ಳಿ ಮಾಕೇಗೌಡ ಹಾಗೂ ಎಸ್ ಡಿಎಂಸಿ ಸದಸ್ಯರೂ, ಪತ್ರಕರ್ತರಾದ ಎನ್.ಕೃಷ್ಣೇಗೌಡರು, ಪೋಷಕರ ಜತೆ ಮಾತನಾಡಿ, ಶಾಲೆಗೆ ಗೈರಾಗದೆ ತಪ್ಪದೇ ಹಾಜರಾಗುವಂತೆ ತಮ್ಮ ಮಕ್ಕಳಿಗೆ ತಿಳಿವಳಿಕೆ ಹಾಗೂ ಬುದ್ಧಿ ಹೇಳುವಂತೆ ಪೋಷಕರಿಗೆ ತಿಳಿ ಹೇಳಿ ಶಾಲೆಗೆ ಮಕ್ಕಳನ್ನು ಕಳಿಸುವಂತೆ ಮನವಿ ಮಾಡಿದರು.