ವಿ.ಸೋಮಣ್ಣ - ಬಿ.ವೈ.ವಿಜಯೇಂದ್ರ ವಿರುದ್ಧ ಸ್ಪರ್ಧಿಸುವು ಅಚ್ಚರಿಯಲ್ಲ: ಪರಮೇಶ್ವರ್

KannadaprabhaNewsNetwork |  
Published : Apr 14, 2024, 01:46 AM ISTUpdated : Apr 14, 2024, 09:23 AM IST
ಅಧಿಕಾರಕ್ಕಾಗಿ ಊರೂರು ಅಲೆಯುವ ಸೋಮಣ್ಣ | Kannada Prabha

ಸಾರಾಂಶ

 ವಿ.ಸೋಮಣ್ಣ ಈ ಚುನಾವಣೆಯಲ್ಲಿ ಸೋತರೆ, ಮುಂದಿನ ಚುನಾವಣೆಯಲ್ಲಿ ಬಿ.ವೈ.ವಿಜಯೇಂದ್ರ ಅವರ ವಿರುದ್ಧ ಶಿಕಾರಿಪುರದಲ್ಲಿ ಸ್ಪರ್ಧೆ ಮಾಡುತ್ತಾರೆ. ಅಧಿಕಾರಕ್ಕಾಗಿ ಈ ರೀತಿ ಊರೂರು ಅಲೆಯುವ ವ್ಯಕ್ತಿ ತುಮಕೂರು ಜಿಲ್ಲೆಗೆ ಬೇಕೆ ? ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರಶ್ನಿಸಿದ್ದಾರೆ.

 ತುಮಕೂರು : ರಾಜಕೀಯ ಅಧಿಕಾರಕ್ಕಾಗಿ ಗೋವಿಂದರಾಜ ನಗರ, ವರುಣ, ಚಾಮರಾಜನಗರ, ತುಮಕೂರು ಎಂದು ಅಲೆಯುತ್ತಿರುವ ವಿ.ಸೋಮಣ್ಣ ಈ ಚುನಾವಣೆಯಲ್ಲಿ ಸೋತರೆ, ಮುಂದಿನ ಚುನಾವಣೆಯಲ್ಲಿ ಬಿ.ವೈ.ವಿಜಯೇಂದ್ರ ಅವರ ವಿರುದ್ಧ ಶಿಕಾರಿಪುರದಲ್ಲಿ ಸ್ಪರ್ಧೆ ಮಾಡುತ್ತಾರೆ. 

ಅಧಿಕಾರಕ್ಕಾಗಿ ಈ ರೀತಿ ಊರೂರು ಅಲೆಯುವ ವ್ಯಕ್ತಿ ತುಮಕೂರು ಜಿಲ್ಲೆಗೆ ಬೇಕೆ ? ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರಶ್ನಿಸಿದ್ದಾರೆ.ನಗರದ ಕುಣಿಗಲ್ ರಸ್ತೆಯ ಖಾಸಗಿ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ಕುರುಬ ಸಮಾಜದ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಡೀ ದೇಶವೇ ಒಪ್ಪಿಕೊ ಳ್ಳುವಂತಹ ಸಿದ್ದರಾಮಯ್ಯನವರ ವಿರುದ್ಧ ವರುಣಾದಲ್ಲಿ ಸ್ಪರ್ಧಿಸುವ ಇವರು, ಮುಂದೊಂದು ದಿನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜೇಂದ್ರ ವಿರುದ್ದವೇ ಶಿಕಾರಿಪುರದಲ್ಲಿ ಸ್ಪರ್ಧಿಸಿದರೂ ಆಶ್ಚರ್ಯ ಪಡಬೇಕಾಗಿಲ್ಲ ಎಂದರು.

ಇಂದು ನಡೆಯುತ್ತಿರುವ ಚುನಾವಣೆ ಸಂವಿಧಾನದ ಫಲದಿಂದ ರಾಜಕೀಯ ಅಧಿಕಾರ ದಕ್ಕಿಸಿಕೊಂಡಿರುವ ಅಹಿಂದ ಸಮುದಾಯ ಮತ್ತು ಜಾತಿಯ ಕಾರಣಕ್ಕೆ ನಿರಂತರ ಅಧಿಕಾರ ಅನುಭವಿಸುತ್ತಿರುವ ಮೇಲ್ವರ್ಗಗಳ ನಡುವೆ ನಡೆಯುತ್ತಿರುವ ಸಂಘರ್ಷವಾಗಿದೆ. ಈಗ ನಾವು ಎಚ್ಚೆತ್ತುಕೊಳ್ಳದೆ ಹೋದರೆ ಮುಂದೆಂದು ನಾವು ಅಧಿಕಾರದ ಅಂಚಿಗೂ ಬರಲು ಸಾಧ್ಯವಿಲ್ಲ. ಈ ಎಚ್ಚರಿಕೆಯನ್ನು ಎಲ್ಲಾ ಅಹಿಂದ ವರ್ಗಗಳು ಹೊಂದಿ,ಸಾಮಾಜಿಕ ನ್ಯಾಯ ಪ್ರತಿಪಾದಿಸುವ ಕಾಂಗ್ರೆಸ್ ಪಕ್ಷಕ್ಕೆ ಮತ ಚಲಾಯಿಸುವ ಮೂಲಕ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಮನವಿ ಮಾಡಿದರು.

ಹಿಂದುಳಿದ ವರ್ಗದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿರುವುದು ಮತ್ತು ಅವರ ಜನಪರ ಆಡಳಿತ ವೈಖರಿಯನ್ನು ಬಹುತೇಕರಿಗೆ ಸಹಿಸಲಾಗುತ್ತಿಲ್ಲ. ಹೀಗಾಗಿ, ಸಮಾಧಾನ ವಿಲ್ಲದೇ ಅವರ ವಿರುದ್ಧ ಅನವಶ್ಯಕ ಟೀಕೆಗಳನ್ನು ಮಾಡುತ್ತಿದ್ದಾರೆ. ೧೫ ಬಾರಿ ಬಜೆಟ್ ಮಂಡಿಸಿದ್ದಾರೆ. ಯಾವ ಸಮುದಾಯಕ್ಕೆ, ಯಾವ ವಲಯಕ್ಕೆ ಎಷ್ಟು ಹಣ ಖರ್ಚು ಮಾಡಬೇಕು ಎಂಬ ಬುದ್ಧಿವಂತಿಕೆ ಇದೆ. ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕ ೫೨ ಸಾವಿರ ಕೋಟಿ ರು.ಖರ್ಚು ಮಾಡುತ್ತಿದ್ದೇವೆ. ಹಿಂದುಳಿದ ವರ್ಗದ ವ್ಯಕ್ತಿ ಬುದ್ಧಿವಂತಿಕೆಯಿಂದ ಆಡಳಿತ ನಡೆಸು ತ್ತಾನೆ ಎಂದರೆ ಹೇಗೆ ಸಹಿಸುತ್ತಾರೆ ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಕುರುಬ ಸಮುದಾಯದ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ ಎಂಬ ಕಾರಣಕ್ಕೆ ಜಿಲ್ಲೆಯಲ್ಲಿ ಕುರುಬ ಸಮುದಾಯದ ಮುಖಂಡರಿಗೆ ಅಧಿಕಾರವನ್ನು ನಿರಾಕರಿಸ ಲಾಗುದು. ಜಿಲ್ಲೆಯಲ್ಲಿಯೂ ಸಹ ಕುರುಬ ಸಮುದಾಯದವರಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಲಾಗುವುದು. ಜಿಲ್ಲೆಯಲ್ಲಿ 11 ವಿಧಾನಸಭಾ ಕ್ಷೇತ್ರಗಳಲ್ಲಿ 1 ಅಥವಾ 2 ರಲ್ಲಿ ಕುರುಬ ಸಮುದಾಯದ ಮುಖಂಡರಿಗೆ ಎಂಎಲ್‌ಎ ಟಿಕೆಟ್ ನೀಡಬೇಕೆಂಬ ಆಲೋಚನೆ ಇತ್ತು. ಮುಂದಿನ ದಿನಗಳಲ್ಲಿ ಪರಿಗಣಿಸುವ ಮೂಲಕ ಈ ಕೊರತೆ ಸರಿಪಡಿಸಲಾಗುವುದು ಎಂದು ಡಾ.ಜಿ.ಪರಮೇಶ್ವರ್ ಭರವಸೆ ನೀಡಿದರು.

ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡ ಮಾತನಾಡಿ, 2014ರ ಲೋಕಸಭಾ ಚುನಾವಣೆಯಲ್ಲಿ ಅನೇಕ ಅಹಿಂದ ಸಮುದಾಯಗಳು ನನ್ನ ಬೆನ್ನಿಗೆ ನಿಂತು ಗೆಲುವು ಸಾಧಿಸಲು ಕಾರಣವಾಗಿವೆ. ಈ ಬಾರಿಯ ಚುನಾವಣೆಯಲ್ಲಿಯೂ ಕುರುಬ ಸಮುದಾಯ ನನ್ನ ಗೆಲುವಿನಲ್ಲಿ ಪಾತ್ರ ವಹಿಸಬೇಕು. ನಿಮ್ಮ ನಂಬಿಕೆಯನ್ನು ಹುಸಿಗೊಳಿಸದೆ, ರಾಜ್ಯದ, ಜಿಲ್ಲೆ ಘನತೆಯನ್ನು ಎತ್ತಿ ಹಿಡಿಯುವ ಕೆಲಸ ಮಾಡುತ್ತೇನೆ.

 ಸಂಸತ್ತಿನಲ್ಲಿ ಜಿಲ್ಲೆಯ ಕೊಬ್ಬರಿ, ನೀರಾವರಿ,ರೈತರ ಆತ್ಮಹತ್ಯೆ, ಎಚ್.ಎಂ.ಟಿ, ಎಚ್.ಎ.ಎಲ್, ಮಹದಾಯಿ, ಮೇಕೆದಾಟು ಯೋಜನೆಗಳ ಕುರಿತು ಮಾತನಾಡಿದ್ದೇನೆ. ವಿಶ್ವಸಂಸ್ಥೆಯಲ್ಲಿ ಭಾರತದ ಪ್ರತಿನಿಧಿಯಾಗಿ ಮಾತನಾಡಿದ್ದೇನೆ. ತಮ್ಮ ಸಂಸದ ಜೀವನದಲ್ಲಿಯೇ ಒಮ್ಮೆಯೂ ಮಾತನಾಡಿದ ವ್ಯಕ್ತಿಯ ಮಾತು ಕೇಳಿ ಹೊರಗಿನವರಿಗೆ ಮತ ಹಾಕುವುದರಿಂದ ಜಿಲ್ಲೆಯ ಸ್ವಾಭಿಮಾನಕ್ಕೆ ಧಕ್ಕೆಯಾಗಲಿದೆ ಎಂದರು.ಶಾಸಕ ಎಸ್.ಅರ್.ಶ್ರೀನಿವಾಸ್ ಮಾತನಾಡಿ, ಈ ದೇಶದ ಸಮರ್ಥ ಒಬಿಸಿ ನಾಯಕ ಎಂದರೆ ಅದು ಸಿದ್ದರಾಮಯ್ಯ, ಮಹಾನ್ ಸುಳ್ಳುಗಾರ ಮೋದಿಯನ್ನು ಎದುರಿಸುವ ಸಾಮರ್ಥ್ಯ ಇರುವುದು ಸಿದ್ದರಾಮಯ್ಯ ಅವರಿಗೆ ಮಾತ್ರ. ಹಾಗಾಗಿ ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಿಸುವ ಮೂಲಕ ಅವರ ಕೈ ಬಲಪಡಿಸಬೇಕಿದೆ ಎಂದರು. 

ಅಹಿಂದ ಮುಖಂಡ ರಾಮಚಂದ್ರಪ್ಪ, ಮಾಜಿ ಶಾಸಕ ಡಾ.ರಫೀಕ್ ಅಹಮದ್, ರಾಜ್ಯ ವಕ್ತಾರ ನಿಕೇತರಾಜ್ ಮೌರ್ಯ ಮಾತನಾಡಿದರು.

ವೇದಿಕೆಯಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಮುರಳಿಧರ್ ಹಾಲಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ, ಇಕ್ಬಾಲ್ ಅಹಮದ್, ಕೆಪಿಸಿಸಿ ಸಾಮಾಜಿಕ ಜಾಲತಾಣ ಘಟಕದ ಮುಖ್ಯಸ್ಥ ನಿಕೇತ್‌ರಾಜ್ ಮೌರ್ಯ, ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ರಾಮಚಂದ್ರ, ಎಸ್.ನಾಗಣ್ಣ,ಕುರುಬ ಸಂಘದ ಜಿಲ್ಲಾಧ್ಯಕ್ಷ ಸುರೇಶ್, ಕಾಂಗ್ರೆಸ್ ಮುಖಂಡರಾದ ಇಕ್ಬಾಲ್ ಅಹ್ಮದ್, ಸೋಮಶೇಖರ್, ರುದ್ರಪ್ಪ,ಟಿ.ಇ.ರಘುರಾಮ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ