ಲಸಿಕೆ ಹಾಕಿಸಿ ಕಾಲುಬಾಯಿ ರೋಗದಿಂದ ಜಾನುವಾರು ರಕ್ಷಿಸಿ

KannadaprabhaNewsNetwork |  
Published : Oct 22, 2024, 12:09 AM IST
ಮೂಡಲಗಿ ಕಲ್ಲೋಳಿ ಪಟ್ಟಣದ ಪಶು ಆಸ್ಪತ್ರೆ ಆವರಣದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 6ನೇ ಸುತ್ತಿನ ಜಾನುವಾರುಗಳ ಉಚಿತ ಕಾಲುಬಾಯಿ ರೋಗ ಲಸಿಕಾ ಅಭಿಯಾನದ ಕರಪತ್ರಗಳನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಬಿಡುಗಡೆಗೊಳಿಸಿದರು. | Kannada Prabha

ಸಾರಾಂಶ

ಜಾನುವಾರುಗಳು ರೈತರ ಜೀವಾಳವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಕಾಲುಬಾಯಿ ರೋಗ ನಿಯಂತ್ರಣಕ್ಕೆ ರೈತರು ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.

ಕನ್ನಡಪ್ರಭ ವಾರ್ತೆ ಮೂಡಲಗಿ

ಜಾನುವಾರುಗಳು ರೈತರ ಜೀವಾಳವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಕಾಲುಬಾಯಿ ರೋಗ ನಿಯಂತ್ರಣಕ್ಕೆ ರೈತರು ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.

ಭಾನುವಾರ ಕಲ್ಲೋಳಿ ಪಟ್ಟಣದ ಪಶುಆಸ್ಪತ್ರೆ ಆವರಣದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 6ನೇ ಸುತ್ತಿನ ಜಾನುವಾರುಗಳ ಉಚಿತ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಕಾಲುಬಾಯಿ ರೋಗ ನಿಯಂತ್ರಣಕ್ಕೆ ಲಸಿಕೆ ಹಾಕಿಸುವುದೊಂದೇ ಮಾರ್ಗವಾಗಿದ್ದು, ರೋಗದಿಂದ ಪೂರ್ಣ ಸುರಕ್ಷತೆಗಾಗಿ ವರ್ಷದಲ್ಲಿ ಕನಿಷ್ಠ ಎರಡು ಬಾರಿ ಲಸಿಕೆ ಹಾಕುವುದು ಅವಶ್ಯಕವಾಗಿದೆ. ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಕೂಡ ಪ್ರತಿ ಆರು ತಿಂಗಳಿಗೊಮ್ಮೆ ನಡೆಸಲಾಗುವ ಸಾಮೂಹಿಕ ಲಸಿಕಾಕರಣ ಕಾರ್ಯಕ್ರಮದಲ್ಲಿ ತಪ್ಪದೇ ಎಲ್ಲ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು ಎಂದ ಅವರು, ಲಸಿಕಾ ಕಾರ್ಯಕ್ರಮದಲ್ಲಿ ತಾಲೂಕಿನಲ್ಲಿ ಒಟ್ಟು 1,06,117 ಜಾನುವಾರು ಮತು ಕಲ್ಲೋಳಿ ಪಶು ಚಿಕಿತ್ಸಾಲಯ ವ್ಯಾಪ್ತಿಯಲ್ಲಿ 8696 ಜಾನುವಾರುಗಳಿಗೆ ಉಚಿತವಾಗಿ ಲಸಿಕೆ ನೀಡಲಾಗುತ್ತದೆ ಎಂದು ತಿಳಿಸಿದರು.ಇಲಾಖೆಯ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ರೈತರ ಮನೆಗೆ ಬಂದು ಲಸಿಕೆ ನೀಡುತ್ತಾರೆ. ಅವರಿಗೆ ಅಗತ್ಯ ಸಹಕಾರ ನೀಡಿ. ಜಾನುವಾರು ಸಾಕುತ್ತಿರುವ ಎಲ್ಲ ರೈತರು ಅಭಿಯಾನದ ಸದುಪಯೋಗ ಪಡೆಯಬೇಕು ಎಂದು ಮನವಿ ಮಾಡಿದರು.ತಾಲೂಕು ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆ ಸಹಾಯಕ ನಿರ್ದೆಶಕ ಡಾ ಮೋಹನ ಕಮತ, ಪ್ರಮುಖರಾದ ಪ್ರಭು ಕಡಾಡಿ, ಬಸವರಾಜ ಕಡಾಡಿ, ಹಣಮಂತ ಸಂಗಟಿ, ಶಂಕರ ಗೋರೋಶಿ, ಈರಣ್ಣ ಮುನ್ನೋಳಿಮಠ, ಶಿವಪ್ಪ ಬಿ. ಪಾಟೀಲ, ಶಿವಾನಂದ ಹೆಬ್ಬಾಳ, ಅಜೀತ ಚಿಕ್ಕೋಡಿ, ದಶಗೀರ ಕಮತನೂರ, ಸೋಮನಿಂಗ ಹಡಗಿನಾಳ, ರಾಮಣ್ಣ ಉಳ್ಳಾಗಡ್ಡಿ, ಮಲ್ಲಪ್ಪ ಖಾನಗೌಡ್ರ, ತುಕಾರಾಮ ಪಾಲಕಿ, ಡಾ. ಸುರೇಶ ತಪಶೆಟ್ಟಿ, ಡಾ. ನೀಲಕಂಠ ಕಪ್ಪಲಗುದ್ದಿ, ಡಾ. ಶಿವಾನಂದ ಸಂಸುದ್ದಿ ಸೇರಿ ಇಲಾಖೆ ಸಿಬ್ಬಂದಿ, ರೈತರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೋಹಿನಿ ಸಿದ್ದೇಗೌಡ ನೊಂದವರ ಪರ ಗಟ್ಟಿ ಧ್ವನಿಯಾಗಿದ್ದರು
ಪೌರಕಾರ್ಮಿಕರು ಆರೋಗ್ಯದ ಕಡೆಗೂ ಗಮನಹರಿಸಬೇಕಾದುದು ಅಗತ್ಯ: ಶ್ವೇತಾ