- ಕಾಲು-ಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಸಂಸದೆ ಡಾ.ಪ್ರಭಾ
ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 8ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಸೋಮವಾರ ನಗರದಲ್ಲಿ ಚಾಲನೆ ನೀಡಿದರು.
ನಗರದ ತಮ್ಮ ಗೃಹ ಕಚೇರಿ ಶಿವ ಪಾರ್ವತಿ ಆವರಣದಲ್ಲಿ ತಮ್ಮ ಮನೆಯ ಮುದ್ದಿನ ಪುಂಗನೂರು ಕರುಗಳಿಗೆ ಲಸಿಕೆ ಕೊಡಿಸುವ ಮೂಲಕ ರಾಷ್ಟ್ರೀಯಜಾನುವಾರ ರೋಗ ನಿಯಂತ್ರಣ ಕಾರ್ಯಕ್ರಮದ 8ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು.ಜಾನುವಾರುಗಳನ್ನು ಬಾಧಿಸುವ ಕಾಲುಬಾಯಿ ರೋಗವು ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ರೋಗವಾಗಿದೆ. ರೈತರಿಗೆ ತೀವ್ರ ಆರ್ಥಿಕ ಸಂಕಷ್ಟಗಳನ್ನು ತಂದೊಡ್ಡುವ, ರಾಸುಗಳಿಗೆ ಕಾಡುವ ಕಾಲುಬಾಯಿ ರೋಗವನ್ನು ನಿಯಂತ್ರಿಸಿ, ಅದನ್ನು ನಿರ್ಮೂಲನೆ ಮಾಡಲು ಪ್ರತಿ 6 ತಿಂಗಳಿಗೊಮ್ಮೆ ರೋಗದ ವಿರುದ್ಧ ತಪ್ಪದೇ ಲಸಿಕೆ ಹಾಕಿಸಬೇಕು ಎಂದು ಸಂಸದರು ತಿಳಿಸಿದರು.
ಪ್ರತಿಯೊಬ್ಬರೂ ತಮ್ಮ ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕೆಯನ್ನು ಹಾಕಿಸಿ, ರೋಗ ಬರದಂತೆ ಜಾನುವಾರುಗಳನ್ನು ರಕ್ಷಿಸಬೇಕು. ಆಗಬಹುದಾದ ಆರ್ಥಿಕ ನಷ್ಟದಿಂದಲೂ ಪಾರಾಗಬೇಕು. ದಾವಣಗೆರೆ ಜಿಲ್ಲೆ ಹಾಗೂ ಕರ್ನಾಟಕ ರಾಜ್ಯವನ್ನು ಕಾಲುಬಾಯಿ ರೋಗಮುಕ್ತ ವಲಯವನ್ನಾಗಿಸಬೇಕು. ಇಲಾಖೆ ಅಧಿಕಾರಿ, ಸಿಬ್ಬಂದಿ ಆಯಾ ಗ್ರಾಮಕ್ಕೆ ಭೇಟಿ ನೀಡುವ ವೇಳೆ ರೈತರು, ಹೈನುಗಾರಿಕೆ ಮಾಡುವವರು. ಜಿಲ್ಲಾದ್ಯಂತ ಒಂದು ತಿಂಗಳ ಕಾಲ ಲಸಿಕಾ ಅಭಿಯಾನ ನಡೆಯಲಿದ್ದು, ಗ್ರಾಮೀಣ ಕುಟುಂಬಗಳು ಸಹಕರಿಸಿ, ಅಭಿಯಾನ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
- - -
ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಕಾಲು-ಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಚಾಲನೆ ನೀಡಿದರು.