ಪೋಲಿಯೋ ತಡೆಗೆ ಮಕ್ಕಳಿಗೆ ಲಸಿಕೆ ಹಾಕಿಸಿ

KannadaprabhaNewsNetwork | Published : Mar 4, 2024 1:21 AM

ಸಾರಾಂಶ

ಬಸವನಬಾಗೇವಾಡಿ: ಪಟ್ಟಣದ ಬಸವೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ತಾಲೂಕು ವೈದ್ಯಾಧಿಕಾರಿ ಡಾ.ಎಸ್.ಎಸ್.ಓತಗೇರಿ, ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಸಾಬೀರ ಪಟೇಲ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ:

ಪಟ್ಟಣದ ಬಸವೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ತಾಲೂಕು ವೈದ್ಯಾಧಿಕಾರಿ ಡಾ.ಎಸ್.ಎಸ್.ಓತಗೇರಿ, ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಸಾಬೀರ ಪಟೇಲ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಡಾ.ಎಸ್.ಎಸ್.ಓತಗೇರಿ, ಅಖಂಡ ಬಸವನಬಾಗೇವಾಡಿ ತಾಲೂಕಿನಲ್ಲಿ ಐದು ವರ್ಷದೊಳಗಿನ 43,617 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ತಾಲೂಕಿನಲ್ಲಿ ಆಯಕಟ್ಟಿನ ಸ್ಥಳದಲ್ಲಿನ ಪೋಲಿಯೋ ಭೂತಗಳಲ್ಲಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಾಗುತ್ತಿದೆ. ನಾಳೆಯಿಂದ ಮೂರು ದಿನಗಳ ಕಾಲ ಮನೆ ಮನೆಗೆ ತೆರಳಿ ಉಳಿದ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಾಗುವುದು. ಈ ಕಾರ್ಯದಲ್ಲಿ 230 ತಂಡಗಳು ಕಾರ್ಯನಿರ್ವಹಿಸುತ್ತಿವೆ. 51 ಮೇಲ್ವಿಚಾರಕರು ಇದರ ಉಸ್ತುವಾರಿ ಮಾಡಲಿದ್ದಾರೆ. ಈಗ ಒಂದು ವರ್ಷದಲ್ಲಿ ಒಂದು ಸುತ್ತು ಮಾತ್ರ ಪೋಲಿಯೋ ಲಸಿಕೆ ಹಾಕಲಾಗುತ್ತಿದೆ ಎಂದರು.ಡಾ.ಸಾಬೀರ ಪಟೇಲ ಮಾತನಾಡಿ, 2023-24 ನೇ ಸಾಲಿನಲ್ಲಿ ಭಾರತ ಪೋಲಿಯೋ ಮುಕ್ತದೇಶವಾಗಿದೆ. ನೆರೆ ದೇಶಗಳಾದ ಪಾಕಿಸ್ತಾನ, ಅಪಘಾನಿಸ್ತಾನ, ಬಾಂಗ್ಲಾದೇಶಗಳಲ್ಲಿ ಪೋಲಿಯೋ ಪ್ರಕರಣಗಳು ಕಂಡು ಬರುತ್ತಿವೆ. ಅಲ್ಲಿಂದ ಪೋಲಿಯೋ ವೈರಸ್ ದೇಶಕ್ಕೆ ಬರುವ ಸಾಧ್ಯತೆ ಇರುವದರಿಂದಾಗಿ ಮುಂಜಾಗ್ರತಾ ಕ್ರಮವಾಗಿ ಸರ್ಕಾರ ಪೋಲಿಯೋ ಲಸಿಕೆ ವರ್ಷದಲ್ಲಿ ಒಂದು ಸಲ ಮಾಡುತ್ತಿದೆ. ಪಾಲಕರು ಇದರ ಸದುಪಯೋಗ ಪಡೆದುಕೊಂಡು ಐದು ವರ್ಷದೊಳಿಗಿರುವ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು. ಕೊಳ್ಳಬೇಕು. ಈ ಲಸಿಕೆಯಿಂದ ಯಾವುದೇ ದುಷ್ಪರಿಣಾಮವಿಲ್ಲ. ಭಯ ಪಡಬಾರದು, ಏನಾದರೂ ಸಮಸ್ಯೆಯಾದರೆ ವೈದ್ಯರನ್ನು, ಇಲಾಖೆಯ ಅಧಿಕಾರಿಗಳನ್ನ ಸಂಪರ್ಕಿಸುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಡಾ.ಶಾಕೀರ ಪಟೇಲ, ಆರೋಗ್ಯ ಇಲಾಖೆಯ ರಾಜಶೇಖರ ಚಿಂಚೋಳಿ, ಚಂದ್ರಶೇಖರ ಹದಿಮೂರ, ಅಣ್ಣಪ್ಪ ಬಿದ್ನಾಳ, ಪ್ರಾಣೇಶ ದೇಶಪಾಂಡೆ, ಸಿದ್ದು ಬಾವಿಕಟ್ಟಿ, ಮಹಾದೇವಿ ಬೇವನೂರ, ಶಿವಲೀಲಾ ದೊಡಮನಿ, ಸುಜಾತಾ ಕಿಶೇರಿ, ಆಶಾ ಕಾರ್ಯಕರ್ತೆಯರು, ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Share this article