೫ ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸಿ: ಶಾಸಕಿ ಅನ್ನಪೂರ್ಣ

KannadaprabhaNewsNetwork |  
Published : Jun 29, 2026, 02:00 AM IST
ಸಂಡೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾನುವಾರ ಶಾಸಕಿ ಅನ್ನಪೂರ್ಣ ಈ. ತುಕಾರಾಂ ಪೊಲಿಯೊ ಲಸಿಕೆ ಹಾಕುಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. | Kannada Prabha

ಸಾರಾಂಶ

ತಾಲೂಕಿನಲ್ಲಿ ೫ ವರ್ಷದೊಳಗಿನ ಮಕ್ಕಳ ಸಂಖ್ಯೆ ೩೫,೮೧೮ ಇದೆ.

ಸಂಡೂರು: ಭಾರತ ಪೊಲಿಯೊ ಮುಕ್ತ ದೇಶವಾಗಿದೆ. ಇನ್ನು ಕೆಲ ದೇಶಗಳಲ್ಲಿ ಪೊಲಿಯೊ ಭೀತಿ ಇರುವ ಕಾರಣ ದೇಶದಲ್ಲಿ ಈ ಪೊಲಿಯೊ ಕಾಯಿಲೆ ಮರುಕಳಿಸಬಾರದೆಂದು ಮುನ್ನೆಚ್ಚರಿಕಾ ಕ್ರಮವಾಗಿ ಲಸಿಕೆ ಹಾಕಲಾಗುತ್ತಿದೆ. ಎಲ್ಲ ಪಾಲಕರು ತಮ್ಮ ೫ ವರ್ಷದೊಳಗಿನ ಮಕ್ಕಳಿಗೆ ಪೊಲಿಯೊ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಬೇಕು ಎಂದು ಶಾಸಕಿ ಅನ್ನಪೂರ್ಣ ತುಕಾರಾಂ ತಿಳಿಸಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾನುವಾರ ನಡೆದ ರಾಷ್ಟ್ರೀಯ ಪಲ್ಸ್ ಪೊಲಿಯೊ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ತಾಲೂಕು ಆರೋಗ್ಯ ಅಧಿಕಾರಿ ಡಾ.ವೀರೇಂದ್ರಕುಮಾರ್ ಮಾತನಾಡಿ, ತಾಲೂಕಿನಲ್ಲಿ ೫ ವರ್ಷದೊಳಗಿನ ಮಕ್ಕಳ ಸಂಖ್ಯೆ ೩೫,೮೧೮ ಇದೆ. ೫ ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೊಲಿಯೊ ಲಸಿಕೆ ಹಾಕಲು ೨೦೦ ಬೂತ್‌ಗಳನ್ನು ಹಾಗೂ ೩ ಟ್ರಾನ್ಸಿಟ್ ಬೂತ್‌ಗಳನ್ನು ತೆರೆಯಲಾಗಿದೆ. ೪೦೬ ವ್ಯಾಕ್ಸಿನೇಟರ್‌ಗಳನ್ನು ಹಾಗೂ ೩೮ ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ ಎಂದರು.

ತಹಶೀಲ್ದಾರ್ ಜಿ.ಅನಿಲ್‌ಕುಮಾರ್, ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ.ಪವನ್‌ಕುಮಾರ್, ಮಕ್ಕಳ ತಜ್ಞ ಡಾ. ನವೀನ್‌ಕುಮಾರ್, ಡಾ.ಕಿರಣ್‌ಕುಮಾರ್, ಆಯುಷ್ ವೈದ್ಯಾಧಿಕಾರಿ ಡಾ.ಎಂ. ವಿರೂಪಾಕ್ಷ, ಪುರಸಭೆ ಮುಖ್ಯಾಧಿಕಾರಿ ಬಿ. ವಿನಯ್‌ಕುಮಾರ್‌ಗೌಡ, ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿ, ಹಲವು ತಾಯಂದಿರು ಉಪಸ್ಥಿತರಿದ್ದರು. ಜಯಶ್ರೀ ಸ್ವಾಗತಿಸಿದರು. ಈಶ್ವರಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಸಂಡೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾನುವಾರ ಶಾಸಕಿ ಅನ್ನಪೂರ್ಣ ತುಕಾರಾಂ ಪೊಲಿಯೊ ಲಸಿಕೆ ಹಾಕುಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾವೇರಿ ಜಿಲ್ಲಾಸ್ಪತ್ರೆಗೆ ಇರುವುದು ಒಂದೇ ಆ್ಯಂಬುಲೆನ್ಸ್
ಹೊರಗುತ್ತಿಗೆ ನೌಕರರ ನೂತನ ಕನಿಷ್ಠ ವೇತನ ಆದೇಶ ತಕ್ಷಣ ಜಾರಿಗೊಳಿಸಲು ಆಗ್ರಹ