ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನ ಕದಲೂರು ಗ್ರಾಮದಲ್ಲಿ ಪಶು ವೈದ್ಯಕೀಯ ಮತ್ತು ಸೇವಾ ಇಲಾಖೆ, ಜಿಲ್ಲಾ ಹಾಲು ಒಕ್ಕೂಟದ ಸಹಯೋಗದಲ್ಲಿ ರಾಸುಗಳಿಗೆ ಕಾಲುಬಾಯಿ ಜ್ವರದ ಲಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಇತ್ತೀಚೆಗೆ ರಾಸುಗಳಲ್ಲಿ ಕಂಡು ಬರುತ್ತಿರುವ ರೋಗರುಜಿನಗಳಿಂದ ಆರೈಕೆ ಮಾಡಬೇಕು. ಹೖನೋದ್ಯಮವನ್ನೇ ಉಪಕಸುಬಾಗಿ ಮಾಡಿಕೊಂಡಿರುವ ರೈತ ಕುಟುಂಬಗಳು ರಾಸುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸಲಹೆ ಮಾಡಿದರು. ಲಕ್ಷಾಂತರ ರು.ಖರ್ಚು ಮಾಡಿ ರಾಸುಗಳನ್ನು ಖರೀದಿ ಮಾಡುವ ರೈತರು ವಿಮೆ ಮಾಡಿಸಲು ಆದ್ಯತೆ ನೀಡಬೇಕು. ಜೊತೆಗೆ ರಾಸುಗಳ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದರು.ಪಶು ವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕ ಡಾ.ಸುರೇಶ್ ಮಾತನಾಡಿ, ತಾಲೂಕಿನಲ್ಲಿ ಜಾನುವಾರುಗಳಿಗೆ ಶೇಕಡ ನೂರರಷ್ಟು ಕಾಲುಬಾಯಿ ಜ್ವರದ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಪ್ರತಿ ಗ್ರಾಮದ ಮನೆ ಮನೆಗೆ ತೆರಳಿ ಇಲಾಖೆ ಸಿಬ್ಬಂದಿ ಲಸಿಕೆ ಹಾಕುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದರು.