ನವೆಂಬರ್ 20ರ ವರೆಗೆ ಕಾಲುಬಾಯಿ ರೋಗ ನಿಯಂತ್ರಣ ಲಸಿಕಾ ಅಭಿಯಾನ

KannadaprabhaNewsNetwork |  
Published : Nov 06, 2024, 11:56 PM ISTUpdated : Nov 06, 2024, 11:57 PM IST
32 | Kannada Prabha

ಸಾರಾಂಶ

ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 6 ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ 20ರ ವರೆಗೆ ಕೊಡಗು ಜಿಲ್ಲೆಯಾದ್ಯಂತ ನಡೆಯುತ್ತಿದ್ದು, ಈ ಸಂಬಂಧ ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಪಶುಪಾಲನಾ ಇಲಾಖೆ ಜಂಟಿ ನಿರ್ದೇಶಕ ಡಾ.ಪ್ರಸನ್ನ ಕುಮಾರ್ ಮಂಗಳವಾರ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 6 ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ 20ರ ವರೆಗೆ ಕೊಡಗು ಜಿಲ್ಲೆಯಾದ್ಯಂತ ನಡೆಯುತ್ತಿದ್ದು, ಈ ಸಂಬಂಧ ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಪಶುಪಾಲನಾ ಇಲಾಖೆ ಜಂಟಿ ನಿರ್ದೇಶಕ ಡಾ.ಪ್ರಸನ್ನ ಕುಮಾರ್ ಮಂಗಳವಾರ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಾನುವಾರುಗಳಿಗೆ ಕಾಲುಬಾಯಿ ಜ್ವರ ರೋಗ ನಿಯಂತ್ರಣದ 6ನೇ ಸುತ್ತಿನ ಲಸಿಕಾ ಅಭಿಯಾನ ನಡೆಯುತ್ತಿದ್ದು, ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 6ನೇ ಸುತ್ತಿನ ಕಾಲುಬಾಯಿ ಜ್ವರ ರೋಗ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ದನ ಮತ್ತು ಎಮ್ಮೆಗೆ ಕಾಲುಬಾಯಿ ರೋಗ ಕಾಣಿಸಿಕೊಳ್ಳಲಿದ್ದು, ಸರ್ಕಾರದ ನಿರ್ದೇಶನದಂತೆ ಜಾನುವಾರುಗಳಿಗೆ ಲಸಿಕೆ ಹಾಕುವಂತೆ ಪಶುಪಾಲನೆ ಇಲಾಖೆಯ ಜಂಟಿ ನಿರ್ದೇಶಕರು ಕೋರಿದ್ದಾರೆ.

ಕಾಲುಬಾಯಿ ರೋಗ ನಿಯಂತ್ರಿಸಲು ಜಾನುವಾರುಗಳಿಗೆ ಲಸಿಕೆ ನೀಡುವುದು ಅತ್ಯಗತ್ಯ. ಈ ರೋಗದ ವಿರುದ್ಧ ಪ್ರತೀ 6 ತಿಂಗಳಿಗೊಮ್ಮೆ ಜಾನುವಾರುಗಳಿಗೆ ಲಸಿಕೆ ಕೊಡಿಸಿ ರೋಗ ಬರದಂತೆ ತಡೆಯುವುದು ಅತ್ಯಗತ್ಯವಾಗಿದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಕಾಲುಬಾಯಿ ಜ್ವರ ನಿಯಂತ್ರಣ ಕಾರ್ಯಕ್ರಮದ ಅಭಿಯಾನದಲ್ಲಿ 6ನೇ ಸುತ್ತಿನಲ್ಲಿ ಲಸಿಕೆ ವಿತರಣೆಗಾಗಿ ಈಗಾಗಲೇ 57 ಸಾವಿರ ಲಸಿಕೆ ಪೂರೈಕೆಯಾಗಿದೆ. ಈಗಾಗಲೇ 5 ನೇ ಸುತ್ತಿನಲ್ಲಿ 2,450 ಲಸಿಕೆ ಉಳಿದಿದ್ದು, ಒಟ್ಟು 59,450 ಲಸಿಕೆ ದಾಸ್ತಾನು ಇದೆ ಎಂದು ಪಶುಪಾಲನೆ ಇಲಾಖೆಯ ಉಪ ನಿರ್ದೇಶಕರಾದ ಲಿಂಗರಾಜು ದೊಡ್ಡಮನಿ ಅವರು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಪಶು ವೈದ್ಯಾಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆ ನೀಡುತ್ತಿದ್ದು, ರೈತರು, ಜಾನುವಾರು ಮಾಲೀಕರು ಜಾನುವಾರುಗಳಿಗೆ ಲಸಿಕೆ ನೀಡಲು ಸಹಕರಿಸುವಂತೆ ಮನವಿ ಮಾಡಿದರು. ಜಾನುವಾರು ಗಣತಿ:

ಜಿಲ್ಲೆಯಲ್ಲಿ 20 ನೇ ಜಾನುವಾರು ಗಣತಿಯಂತೆ ದನ ಹಾಗೂ ಎಮ್ಮೆಗಳ ಸಂಖ್ಯೆ 76,920 ಇದ್ದು, ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಲಸಿಕೆಯು ಸಂಪೂರ್ಣವಾಗಿ ಉಚಿತವಾಗಿದ್ದು, ಯಾವುದೇ ರೀತಿಯ ಶುಲ್ಕವಿರುವುದಿಲ್ಲ. ಇದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಲಸಿಕಾದಾರರು ಜಾನುವಾರು ಮಾಲೀಕರ ಮನೆಗೆ ಬಂದಾಗ ಸಹಕಾರ ನೀಡಿ ನಾಲ್ಕು ತಿಂಗಳ ಮೇಲ್ಪಟ್ಟ ಎಲ್ಲಾ ದನ, ಎಮ್ಮೆಗಳಿಗೆ ಲಸಿಕೆ ಹಾಕಿಸುವಂತೆ ಕೋರಿದರು.

6 ನೇ ಸುತ್ತಿಗೆ ಈಗಾಗಲೇ 70 ಸಾವಿರ ಸಿರಿಂಜ್ ಪೂರೈಕೆಯಾಗಿದೆ. ಕಾಲುಬಾಯಿ ಲಸಿಕಾ ಕಾರ್ಯಕ್ರಮ ಕೈಗೊಳ್ಳಲು ಜಿಲ್ಲೆಯಲ್ಲಿ 13 ತಾಂತ್ರಿಕ ಅಧಿಕಾರಿಗಳು, 31 ಅರೆ ತಾಂತ್ರಿಕ ಸಿಬ್ಬಂದಿ, 7 ಡಿ ದರ್ಜೆ ನೌಕರರು, 13 ಹೊರಗುತ್ತಿಗೆ ನೌಕರರು, 4 ಮೈತ್ರಿ ಸಿಬ್ಬಂದಿ, ಒಬ್ಬ ಕೆಎಂಎಫ್ ಒಟ್ಟು 69 ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಲಿಂಗರಾಜ ದೊಡ್ಡಮನಿ ವಿವರಿಸಿದರು.

ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 6 ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮವು ಅ.21 ರಿಂದ ಆರಂಭವಾಗಿದ್ದು, ಇದುವರೆಗೆ ಶೇ.36 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಲ್ಪಕಲಾ ಅಕಾಡೆಮಿ ಗೌರವ-ಶಿಲ್ಪಶ್ರೀ ಪ್ರಶಸ್ತಿ ಪ್ರಕಟ
ಹಿರಿಯ ಕವಿಗಳ ಬರಹದಿಂದ ಹೆಚ್ಚು ಪ್ರಭಾವಿತ: ಪ್ರೊ.ರಂಗಸ್ವಾಮಿ