ಗದಗ: ಹೆಣ್ಣುಮಕ್ಕಳು ತರುಣಾವಸ್ಥೆಯಲ್ಲಿ ಆರೋಗ್ಯ ಮತ್ತು ಸ್ವಚ್ಛತೆಯ ಬಗ್ಗೆ ತೋರುವ ನಿರ್ಲಕ್ಷ್ಯ ಭವಿಷ್ಯದಲ್ಲಿ ಗಂಭೀರ ಕಾಯಿಲೆಗಳಿಗೆ ದಾರಿಯಾಗಬಹುದು. ಗರ್ಭಾಶಯ ಕ್ಯಾನ್ಸರ್‌ನಂತಹ ರೋಗಗಳನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿ, ಲಭ್ಯವಿರುವ ಲಸಿಕೆ ಪಡೆಯುವ ಮೂಲಕ ತಡೆಗಟ್ಟಬಹುದು ಸ್ತ್ರೀರೋಗ ತಜ್ಞೆ ಡಾ. ಮಹಾಲಕ್ಷ್ಮಿ ಅಯ್ಯನಗೌಡ ತಿಳಿಸಿದರು.
ವಿದ್ಯಾರ್ಥಿನಿಯರು ಋತುಚಕ್ರದ ಅವಧಿಯಲ್ಲಿ ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಹಾಗೂ ಪೌಷ್ಟಿಕ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳಬೇಕು. ಕ್ಯಾನ್ಸರ್ ಲಕ್ಷಣಗಳು ಕಂಡುಬಂದಲ್ಲಿ ಮುಚ್ಚಿಡದೆ ತಕ್ಷಣ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಇದೇ ವೇಳೆ ಸೆಕ್ಯುರ್ ಆಸ್ಪತ್ರೆಯ ವತಿಯಿಂದ ವಿದ್ಯಾರ್ಥಿನಿಯರಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಸಮಾಲೋಚನೆ ನಡೆಸಲಾಯಿತು.
ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ. ಎ.ಕೆ. ಮಠ ಮಾತನಾಡಿ, ಚಿಕಿತ್ಸೆಗಿಂತ ಮುನ್ನೆಚ್ಚರಿಕೆ ವಹಿಸುವುದು ಉತ್ತಮ. ಇಂತಹ ಜಾಗೃತಿ ಶಿಬಿರಗಳು ವಿದ್ಯಾರ್ಥಿನಿಯರಲ್ಲಿ ಆತ್ಮವಿಶ್ವಾಸ ಮತ್ತು ಆರೋಗ್ಯದ ಅರಿವು ಮೂಡಿಸುತ್ತವೆ ಎಂದರು.ಉಪಪ್ರಾಚಾರ್ಯೆ ಡಾ. ವೀಣಾ ಇ. ಮಾತನಾಡಿ, ಮಹಿಳೆಯರ ಆರೋಗ್ಯ ಸುಧಾರಿಸಿದಾಗ ಮಾತ್ರ ನಿಜವಾದ ಸಬಲೀಕರಣ ಸಾಧ್ಯ ಎಂದರು.
ಜಯಂತಿಯನ್ನು ವ್ಯವಸ್ಥಿತವಾಗಿ ಆಚರಿಸಲು ಕ್ರಮ ವಹಿಸಿ
ತಾಲೂಕು ಮಟ್ಟದಲ್ಲಿ ತಹಸೀಲ್ದಾರರ ಅಧ್ಯಕ್ಷತೆಯಲ್ಲಿ ಜಯಂತಿಯ ಆಚರಣೆಗೆ ಕ್ರಮ ವಹಿಸಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು, ಗ್ರಾಪಂ, ಶಾಲಾ- ಕಾಲೇಜುಗಳಲ್ಲಿ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಿಸಬೇಕು. ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ, ಪದವಿಯಲ್ಲಿ ಚಿನ್ನದ ಪದಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಸಮಾಜದ ಹಿರಿಯರಿಗೆ ಸನ್ಮಾನ ಕಾರ್ಯಕ್ರಮ ಜರುಗಲಿದೆ. ಶಿಷ್ಟಾಚಾರದನ್ವಯ ಆಮಂತ್ರಣ ಮುದ್ರಣಕ್ಕೆ ಕ್ರಮ ವಹಿಸಬೇಕು ಎಂದರು.ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಕುರಿತು ಆಳವಾಗಿ ಅಧ್ಯಯನ ಮಾಡಿದವರಿಂದ ಉಪನ್ಯಾಸ ಕಾರ್ಯಕ್ರಮವು ಜರುಗುವುದು. ಒಟ್ಟಾರೆಯಾಗಿ ಹೇಮರಡ್ಡಿ ಮಲ್ಲಮ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಕ್ರಮ ವಹಿಸಬೇಕೆಂದರು.