ಲಸಿಕೆಯಿಂದ ರೋಗ ನಿರೋಧಕ ಶಕ್ತಿ: ಡಾ. ಮಂತರ್ ಗೌಡ

KannadaprabhaNewsNetwork |  
Published : Jun 29, 2026, 02:45 AM IST
೨೭ಎಸ್‌ಪಿಟಿ೦೧: ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ನಡೆದ ಪಲ್ಸ್ ಪೊಲಿಯೋ ಕಾರ್ಯಕ್ರಮಕ್ಕೆ ಶಾಸಕ ಡಾ. ಮಂತರ್ ಗೌಡ ಮಗುವಿಗೆ ಪೊಲಿಯೋ ಹನಿ ಹಾಕುವ ಮೂಲಕ ಚಾಲನೆ ನೀಡಿದರು | Kannada Prabha

ಸಾರಾಂಶ

ಕೊಡಗು ಜಿಲ್ಲಾ ಆರೋಗ್ಯ ಇಲಾಖೆ, ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆ ಹಾಗೂ ರೋಟರಿ ಸಂಸ್ಥೆ ಸಹಯೋಗದಲ್ಲಿ ಭಾನುವಾರ ಆಸ್ಪತ್ರೆ ಆವರಣದಲ್ಲಿ ಪಲ್ಸ್ ಪೊಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಶಾಸಕ ಡಾ. ಮಂತರ್ ಗೌಡ ಮಗುವಿಗೆ ಪಲ್ಸ್ ಪೊಲಿಯೋ ಹನಿ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದರು.

ಸೋಮವಾರಪೇಟೆ: ಕೊಡಗು ಜಿಲ್ಲಾ ಆರೋಗ್ಯ ಇಲಾಖೆ, ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆ ಹಾಗೂ ರೋಟರಿ ಸಂಸ್ಥೆ ಸಹಯೋಗದಲ್ಲಿ ಭಾನುವಾರ ಆಸ್ಪತ್ರೆ ಆವರಣದಲ್ಲಿ ಪಲ್ಸ್ ಪೊಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಶಾಸಕ ಡಾ. ಮಂತರ್ ಗೌಡ ಮಗುವಿಗೆ ಪಲ್ಸ್ ಪೊಲಿಯೋ ಹನಿ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಶಾಸಕರು, ೨೦೨೫ರಲ್ಲಿ ಜಿಲ್ಲೆಯಲ್ಲಿ ೩೯೬೮೯ ಮಕ್ಕಳಿಗೆ ಲಸಿಕೆ ಹಾಕಲಾಗಿತ್ತು. ಈಬಾರಿ ೨೯೦೧೧ ಮಕ್ಕಳಿಗೆ ಲಸಿಕೆ ಹಾಕುವ ಯೋಜನೆಯಿದೆ. ಈ ಹಿಂದೆ ಪೋಲಿಯೋ ಲಸಿಕೆ ಹಾಕಸಿದ್ದರೂ ಸಹ ಪ್ರತಿಯೊಂದು ಪಲ್ಸ್ ಪೋಲಿಯೋ ಅಭಿಯಾನದಲ್ಲಿ ಕಡ್ಡಾಯವಾಗಿ ೫ ವರ್ಷಗಳ ವರೆಗೆ ಮಗುವಿಗೆ ಎರಡು ಹನಿ ಲಸಿಕೆ ನೀಡಬೇಕು. ಇದರಿಂದ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಹಾಗೂ ಪೋಲಿಯೋ ಸೋಂಕು ಹರಡುವ ಅಪಾಯ ತಡೆಯಬಹುದು ಎಂದು ತಿಳಿಸಿದರು.

ದೇಶವನ್ನು ಪೋಲಿಯೋ ಮುಕ್ತವಾಗಿಡುವ ಉದ್ದೇಶದಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಇಂದು ಜಿಲ್ಲೆಯಾದ್ಯಂತ ವ್ಯಾಪ್ತಿಯ ವಿವಿಧ ಪಲ್ಸ್ ಪೋಲಿಯೋ ಕೇಂದ್ರಗಳಲ್ಲಿ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹನಿಗಳನ್ನು ಹಾಕಲಾಗುತ್ತಿದೆ. ಪೋಷಕರು ಲಸಿಕಾ ಕೇಂದ್ರಗಳಿಗೆ ತಪ್ಪದೆ ತಮ್ಮ ಮಕ್ಕಳನನ್ನು ಕರೆದುಕೊಂಡು ಹೋಗಿ ಲಸಿಕೆ ಹಾಕಿಸಬೇಕು. ಲಸಿಕೆಯಿಂದ ತಪ್ಪಿಸಿಕೊಂಡ ಮಕ್ಕಳಿಗೆ ಮನೆ ಮನೆಗೆ ತೆರಳಿ ಲಸಿಕೆ ಹಾಕಲಾಗುವುದು. ಹಾಡಿಗಳಲ್ಲಿ, ಅಲೆಮಾರಿ ಮತ್ತು ಪ್ರವಾಸಿಗರ ಮಕ್ಕಳಿಗೆ ತಪ್ಪಿಸದಂತೆ ಲಸಿಕೆ ಹಾಕುವ ಮೂಲಕ ಶೇ. ೧೦೦ ರಷ್ಟು ಫಲಿತಾಂಶ ನೀಡಬೇಕೆಂದ ಅವರು, ಪಲ್ಸ್ ಪೋಲಿಯೋ ಅಭಿಯಾನ ಯಶಸ್ಸಿಗೆ ಸಾರ್ವಜನಿಕರ ಸಹಕಾರ ಅಗತ್ಯವಾಗಿ ನೀಡಬೇಕೆಂದರು.ಆರೋಗ್ಯ ಇಲಾಖೆಯ ಉಪನಿರ್ದೇಶಕರು ಹಾಗೂ ಪಲ್ಸ್ ಪೊಲಿಯೋ ಯೋಜನೆಯ ಕೊಡಗು ಜಿಲ್ಲಾ ಉಸ್ತುವಾರಿ ಡಾ. ಎಂ.ಸಿ. ರವಿ ಮಾತನಾಡಿ, ದೇಶದಲ್ಲಿ ಈಗಾಗಲೇ ಪೊಲಿಯೋ ಪಿಡುಗನ್ನು ತಡೆಯಲಾಗಿದೆ. ಆದರೂ ಮುಂಜಾಗ್ರತಾ ಕ್ರಮವಾಗಿ ಪೊಲಿಯೋ ಹನಿ ಹಾಕುವ ಕೆಲಸ ಮುಂದುವರಿಸಲಾಗಿದೆ ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ಸತೀಶ್‌ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಇಂದೂಧರ್, ಆಸ್ಪತ್ರೆ ವೈದ್ಯಾಧಿಕಾರಿ ಜಮೀರ್, ರೋಟರಿ ಸಂಸ್ಥೆ ಅಧ್ಯಕ್ಷೆ ವೀಣಾ ಮನೋಹರ್, ನಿಯೋಜಿತ ಅಧ್ಯಕ್ಷ ಬಿ.ಎಸ್. ಸುಂದರ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿಲ್ಲೆಯ 2.10 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ
ಕೆಎಂಸಿ ಕಾಲೇಜು ತಂಡಕ್ಕೆ ಕಿಮ್ಸ್ ಪಿ.ಜಿ. ಮೆಡಿಕ್ವಿಜ್ ೨೦೨೬ ಪ್ರಶಸ್ತಿ