ನಗರಕ್ಕೆನಾಳೆ ಹಳಕಟ್ಟಿ ಜನ್ಮದಿನೋತ್ಸವ ಮತ್ತು ವಚನ ಸಂಪುಟ ಶತಮಾನೋತ್ಸವ

KannadaprabhaNewsNetwork |  
Published : Jul 13, 2024, 01:32 AM IST
35 | Kannada Prabha

ಸಾರಾಂಶ

ಡಾ. ಫಕೀರಪ್ಪ ಗುರುಬಸಪ್ಪ ಹಳಕಟ್ಟಿ ಅವರ ಜನ್ಮದಿನೋತ್ಸವ ಹಾಗೂ ವಚನ ಸಂಪುಟಗಳ ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದೆ

ಕನ್ನಡಪ್ರಭ ವಾರ್ತೆ ಮೈಸೂರು

ಜಾಗತಿಕ ಲಿಂಗಾಯತ ಮಹಾಸಭಾ ಮೈಸೂರು ಜಿಲ್ಲಾ ಘಟಕ ಹಾಗೂ ಬಸವಪರ ಸಂಘಟನೆಗಳು, ಬಿಜಾಪುರದ ಡಾ.ಫ.ಗು. ಹಳಕಟ್ಟಿ ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಜು. 14 ರಂದು ಬೆಳಗ್ಗೆ 10.30ಕ್ಕೆ ಹೊಸಮಠದ ನಟರಾಜ ಸಭಾ ಭವನದಲ್ಲಿ ಡಾ.ಫ.ಗು. ಹಳಕಟ್ಟಿ ಜನ್ಮದಿನವನ್ನು ವಚನ ಸಂರಕ್ಷಣಾ ದಿನವಾಗಿ ಆಚರಿಸುತ್ತಿದೆ.

ಡಾ. ಫಕೀರಪ್ಪ ಗುರುಬಸಪ್ಪ ಹಳಕಟ್ಟಿ ಅವರ ಜನ್ಮದಿನೋತ್ಸವ ಹಾಗೂ ವಚನ ಸಂಪುಟಗಳ ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದೆ. ಹೊಸಮಠದ ಶ್ರೀ ಚಿದಾನಂದ ಸ್ವಾಮೀಜಿ ಸಾನ್ನಿಧ್ಯವಹಿಸಲಿದ್ದು, ನೀಲಕಂಠ ಮಠದ ಶ್ರೀ ಸಿದ್ದಮಲ್ಲ ಸ್ವಾಮೀಜಿ, ಗುರುಶಾಂತ ಸ್ವಾಮೀಜಿ ಸಮ್ಮುಖ ವಹಿಸುವರು. ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಎಸ್. ಹೊರಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಸುದರ್ಶನ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು ಎಂದು ಮಹಾಸಭಾದ ಅಧ್ಯಕ್ಷ ಮಹಾದೇವಪ್ಪ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ವಿಜಯಪುರದ ಡಾ.ಫ.ಗು. ಹಳಕಟ್ಟಿ ಸಂಶೋಧನ ಕೇಂದ್ರದ ಕಾರ್ಯದರ್ಶಿ ಡಾ.ಎಂ.ಎಸ್. ಮದಭಾವಿ ಉಪನ್ಯಾಸ ನೀಡುವರು. ಸಚಿವ ಮಹಾಂತೇಶ್ ಬಿರಾದಾರ, ತರಳಬಾಳು ಸಮಾಗಮದ ಡಾ.ಎಸ್.ಬಿ. ವಸಂತಕುಮಾರ್, ಮ.ಗು. ಸದಾನಂದಯ್ಯ, ಬಿ.ಎಸ್. ಗುರುಪಾದಸ್ವಾಮಿ, ಶಿವಲಿಂಗಸ್ವಾಮಿ, ಎಚ್.ಟಿ. ಮಲ್ಲಿಕಾರ್ಜುನ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.

ವಚನ ಗಾಯನವನ್ನು ಚಿತ್ರದುರ್ಗದ ತೋಟಪ್ಪ ಉತ್ತಂಗಿ ಮತ್ತು ತಂಡದವರು ನಡೆಸಿಕೊಡುವರು.

ಸುದ್ದಿಗೋಷ್ಠಿಯಲ್ಲಿ ಮಹಾಸಭಾದ ಕಾರ್ಯದರ್ಶಿ ಬಿ.ಎಂ. ಮರಪ್ಪ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಲವು ಜಿಲ್ಲೆಗಳಲ್ಲಿ ಶೀತಗಾಳಿ ತಾಪಮಾನ 5-7 ಡಿಗ್ರಿ ಇಳಿಕೆ
‘ಬಾಡಿಗೆ ತಾಯ್ತನ’ದಿಂದ ಮಗು : ವೃದ್ಧ ದಂಪತಿಯಿಂದ ಕೋರ್ಟ್‌ ಮೊರೆ